ಚಿರತೆ ಭೇಟೆ, ಅಂಗಾಂಗ ಮಾರಾಟಕ್ಕೆ ಯತ್ನ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಐವರು ಆರೋಪಿಗಳ ಸೆರೆ
Team Udayavani, May 2, 2022, 8:16 PM IST
ಹುಣಸೂರು : ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದನ್ನು ಭೇಟೆಯಾಡಿ ಅದರ ಚರ್ಮ ಸೇರಿದಂತೆ ಅಂಗಾಂಗಗಳನ್ನು ಮಾರಾಟ ಮಾಡಲೆತ್ನಿಸುತ್ತಿದ್ದ ಐದು ಮಂದಿ ಆರೋಪಿಗಳನ್ನು ಮಾಲು ಸಮೇತ ಬಂಧಿಸವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬಂಧಿತ ನಾಲ್ವರು ಆರೋಪಿಗಳು ಹುಣಸೂರು ತಾಲೂಕಿನ ವಿವಿಧ ಹಾಡಿಗೆ ಸೇರಿದ್ದು, ಮತ್ತೊಬ್ಬ ಹನಗೋಡಿಗೆ ಸಮೀಪದ ಅಬ್ಬೂರಿನವರೆಂದು ತಿಳಿದು ಬಂದಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನು ಕೆಲ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ಅಂಗಾಂಗ ವಶ: ಬಂಧಿತರಿಂದ ಚಿರತೆಯ ಚರ್ಮ, ನಾಲ್ಕು ಕಾಲಿನ ಭಾಗಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಸಿಂಗಲ್ ಬ್ಯಾರಲ್ ಗನ್ ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಘಟನೆ ವಿವರ: ನಾಗರಹೊಳೆ ಉದ್ಯಾನವನದ ಹುಣಸೂರು ವನ್ಯಜೀವಿ ವಲಯದಲ್ಲಿ ಹತ್ಯೆ ಮಾಡಿದ್ದ ಚಿರತೆಯ ಚರ್ಮ ಹಾಗೂ ಚಿರತೆಯ ಕತ್ತರಿಸಿದ ನಾಲ್ಕು ಕಾಲಿನ ಭಾಗಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಎಚ್ಚೆತ್ತುಗೊಂಡ ಪೊಲೀಸರು ಹನಗೋಡು-ಪಂಚವಳ್ಳಿ ಮುಖ್ಯ ರಸ್ತೆಯ ಕಡೇಮನುಗನಹಳ್ಳಿ ಕ್ರಾಸ್ ಬಳಿ ದ್ವಿಚಕ್ರ ವಾಹನ ಸಮೇತ ಆರೋಪಿಯೊಬ್ಬನ ಮೇಲೆ ಹಠಾತ್ ದಾಳಿ ನಡೆಸಿ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಈ ವೇಳೆ ವಿಚಾರಣೆ ನಡೆಸಿದಾಗ ನಾಲ್ವರು ಸಹಚರರ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಉಳಿದ ನಾಲ್ವರು ಸೇರಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ, ಉಳಿದ ಆರೋಪಿಗಳ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಹುಣಸೂರು ಎಸಿಎಫ್ ಸತೀಶ್ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಶವರ್ಮ ಸೇವಿಸಿ ವಿದ್ಯಾರ್ಥಿನಿ ಸಾವು ಪ್ರಕರಣ : ಇಬ್ಬರ ಬಂಧನ, ಸ್ಥಳೀಯರಿಂದ ವಾಹನಕ್ಕೆ ಬೆಂಕಿ
ನಾಗರಹೊಳೆ ಹುಲಿಯೋಜನೆ ಮುಖ್ಯಸ್ಥ ಮಹೇಶ್‌ಕುಮಾರ್ ಹಾಗೂ ಎ.ಸಿ.ಎಫ್. ಸತೀಶ್‌ರ ಮಾರ್ಗದರ್ಶನದಲ್ಲಿ ಹುಣಸೂರು ವಲಯ ಅರಣ್ಯಾಧಿಕಾರಿ ಹನುಮಂತರಾಜು, ವಿಶೇಷ ಹುಲಿ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಡಿ.ಆರ್.ಎಫ್.ಓ.ಗಳಾದ ವೀರಭದ್ರಯ್ಯ, ಜಿ.ಎನ್.ಸಿದ್ದರಾಜು, ಎಚ್.ಎಸ್, ಪ್ರಸನ್ನಕುಮಾರ್, ಅರಣ್ಯ ರಕ್ಷಕರಾದ ಕುಶಾಲ್ ಜಾದವ್, ಲಿಂಗರಾಜು ಮುಗಳಿ, ಕೃಷ್ಣ ಮಾದರ್ ಸೇರಿದಂತೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.