![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 2, 2022, 10:38 PM IST
ಶಿರ್ವ: ಕುಡಿತದ ಚಟವಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕುರ್ಕಾಲು ಗ್ರಾಮದ ಅರಸೀಕಟ್ಟೆ ನಿವಾಸಿ ನಟರಾಜ (62) ಅವರು ಎ. 30ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 1ರಂದು ಮೃತಪಟ್ಟಿದ್ದಾರೆ.
ಮೃತರ ಪುತ್ರಿ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿತ್ರೋಡಿ:ಅಸೌಖ್ಯದಿಂದ ಸಾವು
ಕಾಪು: ಅಸೌಖ್ಯದಿಂದ ಬಳಲುತ್ತಿದ್ದ ಉದ್ಯಾವರ ಪಿತ್ರೋಡಿ ನಿವಾಸಿ ಕಮಲಾಕ್ಷ ಕುಮಾರ್ (58) ಅವರು ರೋಗ ಉಲ½ಣಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೇ 2ರಂದು ಬೆಳಗ್ಗೆ ನಡೆದಿದೆ.
ಬಿ.ಪಿ. ಶುಗರ್ ಮತ್ತು ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಧ್ಯರಾತ್ರಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.