ಸಚಿವ ಸುನಿಲ್ ಕುಮಾರ್ ಅಹವಾಲು ಸ್ವೀಕಾರ
Team Udayavani, May 3, 2022, 12:27 PM IST
ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಸೋಮವಾರ ನಗರದ ಸರ್ಕ್ನೂಟ್ ಹೌಸ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದರು.
ಧಾರ್ಮಿಕ ಕ್ಷೇತ್ರಗಳಿಗೆ ಅನುದಾನ, ವಿವಿಧ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ, ವಿದ್ಯುತ್ ಸಂಬಂಧಿತ ಸಮಸ್ಯೆಗಳು, ದೈವಸ್ಥಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ, ಸರಕಾರಿ ಸಿಬಂದಿ ವರ್ಗಾವಣೆ, ಕೋವಿಡ್ ಪರಿಹಾರ ಸಹಿತವಾಗಿ ಅನೇಕ ವಿಷಯವಾಗಿ ಸಾರ್ವಜನಿಕರು ಸಚಿವರಿಗೆ ಅಹವಾಲು ಸಲ್ಲಿಸಿದ್ದಾರೆ.
ಎಲ್ಲದಕ್ಕೂ ಪೂರಕವಾಗಿ ಸ್ಪಂದಿಸಿದ ಸಚಿವರು, ಶೀಘ್ರ ಪರಿಹಾರದ ಭರವಸೆ ನೀಡಿದರು. ಸಂಘ, ಸಂಸ್ಥೆ ಮನವಿಗಳು, ವೈಯಕ್ತಿಕ ವಿಚಾರಗಳಿಗೆ ಸಂಬಂಧಿಸಿ 20ಕ್ಕೂ ಅಧಿಕ ಅರ್ಜಿಗಳು ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದವು. ಇದೇ ವೇಳೆ ರಂಗಾಯಣ ನಿರ್ಮಾಣ ಕಾಮಗಾರಿ ಪ್ರಕ್ರಿಯೆ ಯಾವುದೇ ಅಡ್ಡಿ ಇಲ್ಲದೆ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ಎಂ. ರಾವ್, ಜಿ.ಪಂ. ಸಿಇಒ ಡಾ| ವೈ. ನವೀನ್ ಭಟ್, ಕುಂದಾಪುರ ಅರಣ್ಯ ವಿಭಾಗ ಡಿಎಫ್ಒ ಆಶೀಶ್ ರೆಡ್ಡಿ, ಎಡಿಸಿ ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ತಹಶೀಲ್ದಾರ್ ಅರ್ಚನಾ ಭಟ್, ಮೆಸ್ಕಾಂ ಎಇಇ ಗಣರಾಜ್ ಭಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.