ಗೆದಗೇರಿ ಗ್ರಾಮ ಕಲಾವಿದರ ತವರೂರು

ಸಾಮಾಜಿಕ ನಾಟಕ ಪ್ರದರ್ಶನ ಉದ್ಘಾಟನೆ

Team Udayavani, May 3, 2022, 3:34 PM IST

18

ಯಲಬುರ್ಗಾ: ಗೆದಗೇರಿ ಗ್ರಾಮ ಕಲಾವಿದರ ಬೀಡಾಗಿದೆ. ಇಲ್ಲಿನ ಯುವ ಕಲಾವಿದರು ರಂಗಭೂಮಿ ಯನ್ನು ಪೋಷಿಸಿಕೊಂಡು ಬರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಈಶ್ವರ ಅಟಮಾಳಗಿ ಹೇಳಿದರು.

ತಾಲೂಕಿನ ಗೆದಗೇರಿ ಗ್ರಾಮದಲ್ಲಿ ಶ್ರೀ ದ್ಯಾಮಾಂಬಿಕಾದೇವಿ ಜಾತ್ರೋತ್ಸವದ ಅಂಗವಾಗಿ ವಿಜಯಮಹಾಂತೇಶ್ವರ ಯುವ ನಾಟ್ಯ ಸಂಘದ ಪದಾ ಧಿಕಾರಿಗಳು ಹಮ್ಮಿಕೊಂಡ “ಅಣ್ಣನ ಅರಮನೆ’ ಎಂಬ ಸಾಮಾಜಿಕ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಗೆದಗೇರಿ ಗ್ರಾಮ ನನ್ನ ಮೆಚ್ಚಿನ ಪ್ರೀತಿಯ ಗ್ರಾಮವಾಗಿದೆ. ಇಲ್ಲಿ ನಡೆಯುವ ಹಬ್ಬ, ಜಾತ್ರೆ, ಸಮಾರಂಭ, ನಾಟಕ, ವಿವಿಧ ಕಾರ್ಯಕ್ರಮಗಳಿಗೆ ಅಹ್ವಾನಿಸುತ್ತಿರುವುದು ಸಂತಸ ತಂದಿದೆ. ನಾಟಕ ನೋಡಿದರೆ ಬದುಕಿನಲ್ಲಿ ಬದಲಾವಣೆ ಹೊಂದಲು ಸಾಧ್ಯವಾಗುತ್ತದೆ. ನಾಟಕಗಳು ಕೇವಲ ಮನರಂಜನೆಯಲ್ಲ. ಅವುಗಳು ಪ್ರಸ್ತುತ ಸಮಾಜದ ಅಭಿವ್ಯಕ್ತಿಯಾಗಿ ಕೆಲಸ ಮಾಡುತ್ತವೆ ಎಂದರು.

ಸಮಾಜದಲ್ಲಿನ ಅಂಕುಡೊಂಕು ತಿದ್ದುವ ಮೂಲಕ ನವ ಸಮಾಜ ನಿರ್ಮಾಣದಲ್ಲಿ ರಂಗಭೂಮಿ ಪಾತ್ರ ಅತ್ಯಂತ ಮಹತ್ತರವಾಗಿದೆ. ನಾಟಕಗಳು ಸಮಾಜದ ಪ್ರತಿಬಿಂಬವಿದ್ದಂತೆ. ಪುರಾತನ ಕಾಲದಲ್ಲಿ ಸಮಾಜದಲ್ಲಿ ಮನೆ ಮಾಡಿದ್ದ ಮೌಡ್ಯವನ್ನು ನಾಟಕಗಳ ಮೂಲಕ ತೋರಿಸಲಾಗುತ್ತಿತ್ತು. ಇತ್ತಿಚೀನ ದಿನಗಳಲ್ಲಿ ನಾಟಕ ನೋಡುವ ಹವ್ಯಾಸ ಕಡಿಮೆಯಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆ. ನಾಟಕ ಹೆಚ್ಚೆಚ್ಚು ನೋಡುವುದರ ಮೂಲಕ ನಾಟಕ ಕಲೆ ಉಳಿಸಿ-ಬೆಳೆಸಿಕೊಂಡು ಹೋಗಬೇಕಾಗಿದೆ. ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ರಂಗಭೂಮಿ ಕಟ್ಟಡ ನಿರ್ಮಿಸಿಕೊಳ್ಳಲು ಅವಕಾಶವಿದೆ. ಇದನ್ನು ಗ್ರಾಮಸ್ಥರು ಸದ್ಬಳ ಮಾಡಿಕೊಳ್ಳಬೇಕು ಎಂದರು.

ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪೊಲೀಸಪಾಟೀಲ ಮಾತನಾಡಿ, ನಾಟಕಗಳು ಸಮಾಜದಲ್ಲಿನ ವಿದ್ಯಮಾನಗಳನ್ನು ಪ್ರತಿಬಿಂಬಿಸುತ್ತವೆ. ಜನಪದ ಕಲೆ, ಸಾಹಿತ್ಯ, ಜನಪದ ಹಾಡುಗಳು, ಸಾಮಾಜಿಕ ನಾಟಕಗಳ ಪ್ರದರ್ಶನ ನಮ್ಮ ಸಂಸ್ಕೃತಿ ಆಚಾರ-ವಿಚಾರಗಳ ಬಗ್ಗೆ ತಿಳಿಸಿಕೊಡುತ್ತವೆ. ಈ ನಿಟ್ಟಿನಲ್ಲಿ ಜನಪದ ಉಳಿಸಿ, ಬೆಳೆಸುವ ಅವಶ್ಯಕತೆ ಇದೆ ಎಂದರು.

ವೇದಮೂರ್ತಿ ಶಿವಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ಶರಣಪ್ಪ ಕೊಪ್ಪದ ಅಧ್ಯಕ್ಷತೆ ವಹಿಸಿದ್ದರು. ಜಗದೀಶ ಬಳಿಗಾರ, ಶರಣಪ್ಪ ರಾಜೂರು, ಕಳಕಯ್ಯ ಹಿರೇಮಠ, ವೆಂಕಟೇಶ ಗೊಲ್ಲರ, ಬಸವರಾಜ ಬಂಡಿಹಾಳ, ಹನುಮಗೌಡ ಕೋಳಿಹಾಳ, ರುದ್ರಪ್ಪ ನಡೂಲಮನಿ, ದೇವರಾಜ ಹೊಸಮನಿ, ಗಣೇಶ ರಾಠೊಡ, ಶಿಕ್ಷಕ ಶರಣಪ್ಪ ಇಟಗಿ, ಬಸವರಾಜ ಹಳಗೌಡ್ರ, ಅಶೋಕ ಕೋಳಿಹಾಳ, ಶೇಕರಪ್ಪ ಹಳಗೌಡ್ರ, ಗ್ರಾಪಂ ಸದಸ್ಯರು, ಗುರು-ಹಿರಿಯರು, ಯುವಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.