ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಇಂಡಿ ಜನರ ಬೆಂಬಲ
Team Udayavani, May 3, 2022, 5:46 PM IST
ಇಂಡಿ: ಬಾಗಲಕೋಟೆ ತಾಲೂಕಿನ ಕೂಡಲಸಂಗಮದ ಕೂಡಲ ಸಂಗಮನಾಥ ದೇವಸ್ಥಾನದ ಆವರಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಇಂಡಿ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು ಸೋಮವಾರ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
ಈ ವೇಳೆ ಪಂಚಮಸಾಲಿ ಸಮಾಜದ ಕೂಡಲಸಂಗಮ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಕಳೆದ 14 ದಿನಗಳಿಂದ ಕೂಡಲ ಸಂಗಮನಾಥನ ಸನ್ನಿಧಿಯಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದೇವೆ. ಸರಕಾರ ಭರವಸೆಗಳ ಮೇಲೆ ಭರವಸೆ ನೀಡುತ್ತಿದೆ. ಆದರೆ 2ಎ ಮೀಸಲಾತಿ ಇದುವರೆಗೂ ನೀಡಿಲ್ಲ. ಮೀಸಲಾತಿ ನೀಡುವವರೆಗೂ ಹೋರಾಟ ನಿಲ್ಲಲ್ಲ. ಮೇ ತಿಂಗಳ 4ರಂದು ಕೂಡಲಸಂಗಮದಲ್ಲಿ ನಡೆಯುತ್ತಿರುವ ಧರಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮೇ 5ರಂದು ರಾಜ್ಯದ ಎಲ್ಲ ತಾಲೂಕು ಕೇಂದ್ರಗಳ ತಹಶೀಲ್ದಾರ್ ಕಚೇರಿ ಮುಂದೆ ಸಮಾಜ ಬಾಂಧವರು ಬೆಳಗ್ಗೆ 10ರಿಂದ ಸಾಯಂಕಾಲ 5ರವರೆಗೆ ಧರಣಿ ನಡೆಸಬೇಕು. ತದ ನಂತರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸುವುದು, ಶಾಸಕರ ಮನೆಗಳ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದು ದಿನಾಂಕವನ್ನು ಶೀಘ್ರ ಪ್ರಕಟಿಸಲಿದ್ದೇವೆ ಎಂದರು.
ಧರಣಿಯಲ್ಲಿ ಹುನಗುಂದ ಮಾಜಿ ಶಾಸಕ, ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ವಿಜಯಪುರ ಜಿಲ್ಲಾ ಪಂಚಮಸಾಲಿ ಸಮಾಜದ ಅಧ್ಯಕ್ಷ ಬಿ.ಎಂ. ಪಾಟೀಲ, ಇಂಡಿ ತಾಲೂಕಾಧ್ಯಕ್ಷ ವಿ.ಎಚ್. ಬಿರಾದಾರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸೋಮಶೇಖರ ದೇವರ, ಶಿವು ದೇವರ, ಭೀಮನಗೌಡ ಬಿರಾದಾರ, ಯೋಗಪ್ಪಗೌಡ ಬಿರಾದಾರ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.