ಕೊರಟಗೆರೆಯಲ್ಲಿ ಎಸಿಬಿ ಮಿಂಚಿನ ಕಾರ್ಯಾಚರಣೆ: ಗ್ರಾ. ಪಂ. ಕಾರ್ಯದರ್ಶಿ ಬಲೆಗೆ
Team Udayavani, May 4, 2022, 4:52 PM IST
ಕೊರಟಗೆರೆ: ತುಮಕೂರು ತಾಲ್ಲೂಕು ಅರಕೆರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
ಖಾಲಿ ನಿವೇಶನದ ಕುರಿತು ಅರುಣ್ ಕುಮಾರ್ ಎನ್ನುವವರು ಅರ್ಜಿ ನೀಡಿದ್ದು ಪಂಚಾಯತ್ ಕಾರ್ಯದರ್ಶಿ ಶ್ರೀಧರ್ 7500 ಲಂಚಕ್ಕೆ ಬೇಡಿಕೆ ಇಟ್ಟು 3000 ಹಣ ಮುಂಗಡವಾಗಿ ಪಡೆದು ಉಳಿದ 4500 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಕೆಲಸ ಪಡೆಯಬೇಕಿದ್ದರೆ ಅಧಿಕಾರಿಗಳಿಗೆ ಲಂಚ ನೀಡಲೇಬೇಕು
ಎಸಿಬಿ ಅಧಿಕಾರಿಗಳಿಂದ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಅವರ ಹೋರಾಟದಿಂದ ಬಡ ರೈತರು ಮತ್ತು ಮಧ್ಯಮ ವರ್ಗದ ಸಾರ್ವಜನಿಕರು ಅಲ್ಪಪ್ರಮಾಣದ ನಿಟ್ಟುಸಿರು ಬಿಡುವಂತಾಗಿದೆ. ಇದೇ ತಿಂಗಳಲ್ಲಿ ಒಬ್ಬ ಭ್ರಷ್ಟ ಅಧಿಕಾರಿ ಸಿಕ್ಕಿ ಬಿದ್ದು ಜೈಲು ಪಾಲಾದರೂ ಲಂಚಾವತಾರ ಬಿಡದೆ ಅಧಿಕಾರಿಗಳು ಸರಣಿ ಭ್ರಷ್ಟಾಚಾರ ಮುಂದುವರೆಸಿದ್ದಾರೆ.
ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಅವರ ಹೋರಾಟಕ್ಕೆ, ಎಸಿಬಿ ಅಧಿಕಾರಿಗಳ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಿಇಒ ವಿದ್ಯಾಕುಮಾರಿ ನಿರ್ಲಕ್ಷ್ಯ ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್ ಕುಮ್ಮಕ್ಕಿ ನಿಂದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹೇಳೋರು ಇಲ್ಲ ಕೇಳೋರು ಇಲ್ಲದ ಹಾಗಾಗಿದೆ. ನರೇಗಾ ಕೆಲಸ ಕಳಪೆ ಗುಣಮಟ್ಟದ ಕಾಮಗಾರಿ ಕೆಲವು ಕೆಲಸ ಮಾಡದೆ ಬಿಲ್ ಮಾಡಿಕೊಳ್ಳುತ್ತಾರೆ. ಸ್ಟ್ರೀಟ್ ಲೈಟ್ ಬಲ್ಬ್ ಹಗರಣ, ಮೋಟಾರ್ ಪಂಪ್ ಸೆಟ್ ಕೊಳ್ಳುವುದರಲ್ಲಿ ಕಳಪೆ ಹಗರಣ, ನರೇಗಾ ಹಣ ಬಿಡುಗಡೆ ಮಾಡಲು ಇಂಜಿನಿಯರ್ ಪಿಡಿಒ 30% ಕಮಿಷನ್ . ಗ್ರಾಮಪಂಚಾಯತ್ ಗಳಲ್ಲಿ ಸಾಲು ಸಾಲು ಹಗರಣ ಸರಮಾಲೆ ನಡೆಯುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಪತ್ರಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಬೇಸರ ವ್ಯಕ್ತಪಡಿಸಿದರು.
ಕಾರ್ಯಾಚರಣೆ ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ ಪೆಕ್ಟರ್ ವಿರೇಂದ್ರ ವಿಜಯಲಕ್ಷ್ಮಿ ನರಸಿಂಹರಾಜು ಚಂದ್ರು, ಶಿವಣ್ಣ, ನವೀನ್ ಕುಮಾರ್, ಸುರೇಶ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.