ಸಿದ್ದರಾಮಯ್ಯನವರೇ ಡಿಕೆಶಿಯಿಂದ ದೂರವಿರಿ: ರೇಣುಕಾಚಾರ್ಯ ಸಲಹೆ!
ಡಿಕೆಶಿಗೆ ನೀವು ಬೆಂಬಲ ನೀಡಿದರೆ, ನಿಮಗೆ ಒಳ್ಳೆಯದಾಗುವುದಿಲ್ಲ...
Team Udayavani, May 5, 2022, 12:55 PM IST
ಬೆಂಗಳೂರು: ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಅವರಿಂದ ದೂರ ಇರಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾಯ೯ದರ್ಶಿ, ಬಿಜೆಪಿ ಶಾಸಕ ರೇಣುಕಾಚಾರ್ಯ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.
ವಿಧಾನ ಸೌಧ ದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಂದರೆ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಹೆಸರು. ಯಾವ ಕನಕಪುರ ಬಂಡೆ ಲೂಟಿ ಮಾಡಿದ ಡಿಕೆಶಿ. ಹಗರಣದಲ್ಲಿ ಸ್ವತಃ ಜೈಲಿಗೆ ಹೋದವರು.ಈಶ್ವರಪ್ಪ ಅವರು ಸ್ವಂತ ಅವರೇ ರಾಜೀನಾಮೆ ನೀಡಿದರು.ಸುರೇಶ್, ಅಶ್ವತ್ಥ್ ನಾರಾಯಣ್ ಸಮ್ಮುಖದಲ್ಲಿ ಗೂಂಡಾ ರೀತಿಯಲ್ಲಿ ವರ್ತನೆ ಮಾಡಿದ್ದು ಜನ ನೋಡಿದ್ದಾರೆ. ಅಶ್ವತ್ಥ್ ನಾರಾಯಣ್ ಅವರನ್ನ ಟಾರ್ಗೆಟ್ ಮಾಡಿದ್ದಾರೆ. ನಮ್ಮಪಕ್ಷದವರ ಯಾರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದರು.
ದಿವ್ಯಾ ಹಾಗರಗಿ ಆಗಿರಬಹುದು ಅಥವಾ ಬೇರೆಯವರನ್ನೇ ಆಗಿರಬಹುದು ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಅಶ್ವತ್ಥ್ ನಾರಾಯಣ್ ಯಾಕೆ ರಾಜೀನಾಮೆ ಕೊಡಬೇಕು?ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆಯುತ್ತಿದೆ.ನಾನು ಸಿಎಂ ಆಗಬೇಕು ಅಂತ.ಡಿಕೆಶಿಗೆ ನೀವು ಬೆಂಬಲ ನೀಡಿದರೆ, ನಿಮಗೆ ಒಳ್ಳೆಯದಾಗುವುದಿಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಚಿವ ಸಂಪುಟ ಯಾವಾಗ ರಚನೆ ಮಾಡಬೇಕು ಅನ್ನೋದು ಹೈಕಮಾಂಡ್ ಗೆ ಬಿಟ್ಟ ವಿಚಾರ.ಆದರೆ, ಯತ್ನಾಳ್ ಯಾವ ರೀತಿ ಹೇಳಿದ್ದಾರೆ ಗೊತ್ತಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ರಚನೆ ಮಾಡಬೇಕು ಅನ್ನುವ ಒತ್ತಾಯ ಇದೆ. ಆದಷ್ಟು ಬೇಗ ಆದರೆ ಉತ್ತಮ. ಯತ್ನಾಳ್ ಕೇಂದ್ರದಲ್ಲಿ ಸಚುವರಾಗಿದ್ದವರು. ಅವರ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.