ಸ್ಪರ್ಧಾತ್ಮಕ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿ
Team Udayavani, May 5, 2022, 1:29 PM IST
ದಾವಣಗೆರೆ: ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳು ನಡೆಯುತ್ತಿರುವುದು ಖಂಡನೀಯ ಎಂದು ಆರೋಪಿಸಿ ಬುಧವಾರ ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬಡ ಮತ್ತು ಪ್ರತಿಭಾವವಂತ ವಿದ್ಯಾರ್ಥಿಗಳು ನ್ಯಾಯಯುತವಾಗಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಕನಸನ್ನು ನನಸಾಗಿಸಲು ಅನೇಕ ಸವಾಲುಗಳನ್ನು ಎದುರಿಸಿ ಹುದ್ದೆಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದರೂ ಲಕ್ಷಾಂತರ ಸಂಖ್ಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೇ ದೊಡ್ಡಮಟ್ಟದ ಅಕ್ರಮ ನಡೆಯುತ್ತಿರುವುದು ಖಂಡನೀಯ ಮತ್ತು ಅನ್ಯಾಯ ಎಂದು ದೂರಿದರು.
ಇತ್ತೀಚಿನ ಕೆಲ ವರ್ಷಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರೀ ಅಕ್ರಮ ಭ್ರಷ್ಟಾಚಾರ ನಡೆಯುತ್ತಿರುವುದು ವಿದ್ಯಾವಂತ ನಿರುದ್ಯೋಗಿಗಳನ್ನು ಹತಾಶರನ್ನಾಗಿಸಿದೆ. ಪರೀಕ್ಷೆಗಳಲ್ಲಿ ಅಕ್ರಮ ನಡೆಯುತ್ತಿರುವ ಬಗೆಗೆ ಮೊದಲಿನಿಂದಲೂ ಆರೋಪಗಳು ಕೇಳಿ ಬರುತ್ತಿವೆ. 3-4 ವರ್ಷಗಳಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳ ಬಗ್ಗೆ ಸರಣಿಯಂತೆ ಬಯಲಾಗತೊಡಗಿದೆ. ಸರ್ಕಾರಿ ಉದ್ಯೋಗ ಗಳಲ್ಲಿ ಅರ್ಹ ಮತ್ತು ಪ್ರತಿಭಾವಂತರಿಗೆ ಅವಕಾಶ ಲಭಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ಅತ್ಯಂತ ಪಾರದರ್ಶಕ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕೆಂಬ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತ ಬರಲಾಗಿದೆ. ಆದರೆ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ರಾಜಾರೋಷವಾಗಿ ನಡೆಯುತ್ತಿರುವುದು ಪರೀಕ್ಷೆಗಳ ನೈಜ ಉದ್ದೇಶವನ್ನೇ ಬುಡಮೇಲು ಮಾಡಿವೆ. ಆಡಳಿತ ವ್ಯವಸ್ಥೆ, ರಾಜಕೀಯ ನಾಯಕರು, ಉನ್ನತ ಅಧಿಕಾರಿಗಳೂ ಅಕ್ರಮಗಳಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿರುವುದು ಖಂಡನೀಯ ಎಂದು ಆರೋಪಿಸಿದರು.
ಹುದ್ದೆಗಳ ನೇಮಕಾತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕಾನೂನು, ನಿಯಮಾವಳಿಗಳ ಅನುಸಾರ ನ್ಯಾಯಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ತಪ್ಪಿತಸ್ಥರು ಎಷ್ಟೇ ದೊಡ್ಡವರು ಹಾಗೂ ಪ್ರಭಾವಶಾಲಿಯಾಗಿದ್ದರೂ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ ಕೊಳ್ಳೇರ, ಅವಿನಾಶ್, ನರೇಂದ್ರ, ಶಶಾಂಕ್, ಕೊಟ್ರೇಶ್, ದೊಡ್ಡೇಶ್, ಆದರ್ಶ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.