ಅಕ್ಷರ ದಾಸೋಹ ನೌಕರ ಸಂಘ ಪ್ರತಿಭಟನೆ
Team Udayavani, May 5, 2022, 5:42 PM IST
ಇಳಕಲ್ಲ: ಅಕ್ಷರ ದಾಸೋಹ ನೌಕರ ಸಂಘ ಹಾಗೂ ತಾಲೂಕು ಸಮಿತಿ ಸಹಯೋಗದಲ್ಲಿ 60 ವರ್ಷ ವಯೋಮಾನ ನೆಪವೊಡ್ಡಿ ಸುಮಾರು 11ಸಾವಿರದಿಂದ 12ಸಾವಿರ ನೌಕರರ ಕೆಲಸವನ್ನು ನಿವೃತ್ತಿ ಸೌಲಭ್ಯವಿಲ್ಲದೆ 19ವರ್ಷ ಸೇವೆ ಸಲ್ಲಿಸಿದವರನ್ನು ಸರಕಾರ ತೆಗೆದು ಹಾಕಲು ಮುಂದಾಗಿದೆ. ಇದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುವುದಲ್ಲದೆ ಸರಕಾರ ಕೂಡಲೇ ಈ ಸುತ್ತೋಲೆಯನ್ನು ವಾಪಸ್ ಪಡೆಯಬೇಕು. ನಿವೃತ್ತಿ ಹೆಸರಲ್ಲಿ ಬಡವರ, ವಿಧವೆಯರ, ಅಲ್ಪಸಂಖ್ಯಾತರ, ದಲಿತರ, ಕೂಲಿಕಾರ ಮಹಿಳೆಯರಿಗೆ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಖಂಡಿಸಿ ಶಾಸಕರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ನಗರದ ಗುಬ್ಬಿಪೇಟದ ಶ್ರೀ ಶಂಕರಿರಾಮಲಿಂಗ ದೇವಸ್ಥಾನದಿಂದ ಎಸ್.ಆರ್. ಕಂಠಿ ವೃತ್ತ ಮಾರ್ಗವಾಗಿ ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರ ಪಕ್ಷದ ಕಾರ್ಯಾಲಯಕ್ಕೆ ತಲುಪಿ ವಿವಿಧ ಬೇಡಿಕೆ ಈಡೇರಿಸುವಂತೆ ಘೋಷಣೆ ಕೂಗಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಪತ್ರದಲ್ಲಿ ಉಲ್ಲೇಖೀಸಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಕಾರ್ಯದರ್ಶಿ ರವಿ ಅವರಿಗೆ ತಾಲೂಕು ಅಧ್ಯಕ್ಷೆ ಸಿದ್ದಮ್ಮ ಕಲಗೋಡಿ ಮನವಿ ಸಲ್ಲಿಸಿದರು.
ಹುನಗುಂದ ಅಕ್ಷರ ದಾಸೋಹ ನೌಕರ ಸಂಘದ ಅಧ್ಯಕ್ಷೆ ಮಹಾದೇವಿ ಚಲವಾದಿ, ಪ್ರಧಾನ ಕಾರ್ಯದರ್ಶಿ ಶಾರದಾ ಗೋನಾಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.