ಮುಸ್ಲಿಂ ಯುವತಿಯ ಮದುವೆಯಾದ ಹಿಂದೂ ಯುವಕನ ಬರ್ಬರ ಹತ್ಯೆ
ಸಾರ್ವಜನಿಕರ ಎದುರೇ ಯುವತಿಯ ಸಂಬಂಧಿಕರಿಂದ ಕೊಚ್ಚಿ ಕೊಲೆ
Team Udayavani, May 5, 2022, 6:39 PM IST
ಹೈದರಾಬಾದ್: ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಯುವಕನೊಬ್ಬನನ್ನು ಯುವತಿಯ ಸಂಬಂಧಿಕರು ಸಾರ್ವಜನಿಕವಾಗಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹತ್ಯೆಯ ಭಯಾನಕ ದೃಶ್ಯ ಸಿಸಿಟಿವಿ ಮತ್ತು ಮೊಬೈಲ್ ಫೋನ್ಗಳಲ್ಲಿ ಸೆರೆಯಾಗಿದೆ.
ಹತ್ಯೆಗೀಡಾದ ಯುವಕನ ಪತ್ನಿಯ ಇಬ್ಬರು ಸೋದರ ಸಂಬಂಧಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲ್ಯದ ಸ್ನೇಹಿತರಾಗಿದ್ದ ಬಿ ನಾಗರಾಜು ಮತ್ತು ಸೈಯದ್ ಅಶ್ರಿನ್ ಸುಲ್ತಾನಾ ಅವರು ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು ಎಂದು ವರದಿಗಳಲ್ಲಿ ಪೊಲೀಸರು ವಿವರಿಸಿದ್ದಾರೆ.
ಬುಧವಾರ ರಾತ್ರಿ 8.45ರ ಸುಮಾರಿಗೆ ದಂಪತಿ ತಮ್ಮ ಬೈಕ್ನಲ್ಲಿ ಮನೆಯಿಂದ ಹೊರಟಿದ್ದಾಗ ಇಬ್ಬರು ವ್ಯಕ್ತಿಗಳು ದಾರಿ ತಡೆದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಜನಸಮೂಹವು ಸ್ಥಳದಲ್ಲಿ ವೇಗವಾಗಿ ಸೇರುವುದನ್ನು ತೋರಿಸುತ್ತದೆ ಆದರೆ ಯಾರೂ ದಾಳಿಯನ್ನು ತಡೆಯಲು ಪ್ರಯತ್ನಿಸಲಿಲ್ಲ. ಅನೇಕರು ತಮ್ಮ ಮೊಬೈಲ್ ಫೋನ್ಗಳನ್ನು ಹೊರತೆಗೆದು , ಅಪರಾಧವನ್ನು ರೆಕಾರ್ಡ್ ಮಾಡಿದ್ದಾರೆ.
ಕ್ಯಾಮರಾದಲ್ಲಿ, ನಾಗರಾಜು ಅವರ ಮುಖ ರಕ್ತಸಿಕ್ತವಾಗಿದ್ದು, ಅವರ ಹೆಂಡತಿ ಸಹಾಯಕ್ಕಾಗಿ ಕಿರುಚುತ್ತಿದ್ದರು. ಒಂದು ವೀಡಿಯೊದಲ್ಲಿ, ಸುಲ್ತಾನಾ ಆಕ್ರಮಣಕಾರರಲ್ಲಿ ಒಬ್ಬನ ಮೇಲೆ ತಿರುಗಿ ಬೀಳುತ್ತಿರುವುದನ್ನು ನೋಡಬಹುದಾಗಿದೆ.
ಸೆಕೆಂಡ್ಗಳಲ್ಲಿ ಎಲ್ಲವೂ ಮುಗಿದು ಹೋಗಿತ್ತು. ನಾಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದು, , ಸಾರ್ವಜನಿಕ ಸ್ಥಳದಲ್ಲಿ ಯಾರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.
ಈ ಭೀಕರ ಹತ್ಯೆ ಹೈದರಾಬಾದ್ನ ಸರೂರ್ನಗರ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.