![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 6, 2022, 11:15 AM IST
ಪುಣೆ: ಕೋವಿಡ್ ನಿರೋಧಕ ಲಸಿಕೆಯಾಗಿರುವ ಕೊವೊವ್ಯಾಕ್ಸ್ 12 -17 ವರ್ಷದ ಎಲ್ಲರಿಗೂ ಲಭ್ಯವಿದೆ ಎಂದು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಂವಾಲ ಅವರು ಸ್ಪಷ್ಟಪಡಿಸಿದ್ದಾರೆ.
ಮಕ್ಕಳಿಗೆ ಇನ್ನೊಂದು ಲಸಿಕೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದು, ಅದರಂತೆ ಇದನ್ನು ಉತ್ಪಾದಿಸಲಾಗಿದೆ. ಶೇ. 90ರಷ್ಟು ಸಾಮರ್ಥ್ಯದ ಈ ಲಸಿಕೆಯನ್ನು ಯೂರೋಪ್‌ನಲ್ಲೂ ಬಳಸಲಾಗುತ್ತಿದೆ ಎಂದು ಪೂನಂವಾಲ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಲಸಿಕೀಕರಣದ ರಾಷ್ಟ್ರೀಯ ತಾಂತ್ರಿಕ ಸಲಹಾ ಮಂಡಳಿಯು ಕಳೆದ ವಾರ ಈ ಲಸಿಕೆಯನ್ನು 12-17 ವರ್ಷದ ಮಕ್ಕಳಿಗೆ ನೀಡಲು ಅನುಮತಿ ನೀಡಿದೆ. ಇದೇ ಸಂದರ್ಭದಲ್ಲಿ, ಕೊವೊವ್ಯಾಕ್ಸ್ ಲಸಿಕೆಯನ್ನು ಆಯ್ಕೆ ಮಾಡಿಕೊಳ್ಳಲು ಕೋವಿನ್ ಆ್ಯಪ್‌ನಲ್ಲಿ ಅವಕಾಶ ನೀಡಲಾಗಿಲ್ಲ ಎಂದೂ ಕೆಲವರು ಟ್ವೀಟ್ ಮೂಲಕ ದೂರಿಕೊಂಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.