ಮಂಡ್ಯದಲ್ಲಿ ಬಿಜೆಪಿ ಪರವಾಗಿ ಬಹಳ ದೊಡ್ಡ ಶಕ್ತಿಯ ಅಲೆ: ಸಿಎಂ ಬೊಮ್ಮಾಯಿ
ಕೋಲಾರ, ಮಂಡ್ಯದಿಂದ ಹೆಚ್ವು ಜನ ಬಿಜೆಪಿಗೆ ಬರುತ್ತಿದ್ದಾರೆ
Team Udayavani, May 6, 2022, 2:27 PM IST
ಬೆಂಗಳೂರು: ಮಂಡ್ಯದಲ್ಲಿ ಬಿಜೆಪಿ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬರುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು ಒಲವು ತೋರುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಎಸ್.ಟಿ. ಜಯರಾಂ ಮಾತ್ರ ಅಲ್ಲದೆ ಯಾರು ನಮ್ಮ ಪಕ್ಷದ ಬಗ್ಗೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲರ ಬಳಿ ಮಾತನಾಡಲಾಗುವುದು ಎಂದರು.
90ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಆರೋಗ್ಯವಂತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಅವರ ಮಾರ್ಗದರ್ಶನ ಸರ್ಕಾರ ಮತ್ತು ರಾಜ್ಯದ ಜನತೆಗೆ ದೊರೆಯುವಂತಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.