25ರಂದು ಸಾಮೂಹಿಕ ಸರಳ ವಿವಾಹ; ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ
ಸಾರ್ವಜನಿಕರಿಂದ ಯಾವುದೇ ದೂರು ಬಂದಲ್ಲಿ ಅಂತಹ ವಿವಾಹವಾಗುವ ವಧು-ವರರ ಬಗ್ಗೆ ಪುನರ್ ಪರಿಶೀಲಿಸುವುದು
Team Udayavani, May 6, 2022, 5:57 PM IST
ಮೈಸೂರು: ಜಿಲ್ಲಾಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ಆಯೋಜಿಸಿರುವ ಸಪ್ತಪದಿ ಉಚಿತ ಸಾಮೂಹಿಕ ಸರಳ ವಿವಾಹವನ್ನು ಮೇ 25 ರಂದು ನಂಜನಗೂಡಿನ ಕಂಠೇಶ್ವರ ದೇವಸ್ಥಾನದಲ್ಲಿ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್ ಮಂಜುನಾಥಸ್ವಾಮಿ ಹೇಳಿದರು.
ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಪ್ತಪದಿ ಉಚಿತ ಸರಳ ವಿವಾಹ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮೂಹಿಕ ವಿವಾಹವು ಮೇ 25ರ ಬುಧವಾರ ಬೆಳಗ್ಗೆ 10.55 ರಿಂದ 11.40ರವರೆಗೆ ಕಟಕ ಶುಭ ಲಗ್ನದಲ್ಲಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಊಟೋಪಚಾರದ ವ್ಯವಸ್ಥೆ: ಮದುವೆಗೆ ದುಂದು ವೆಚ್ಚ ಮಾಡಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಸಪ್ತಪದಿ ಸಾಮೂಹಿಕ ವಿವಾಹ ಯೋಜನೆ ಜಾರಿ ಮಾಡಿದೆ. ಯೋಜನೆ ವಿಶೇಷತೆ ಎಂದರೆ, ವಧು- ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜತೆಗೆ ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನೂ ದೇವಾಲಯ ಆಡಳಿತ ಮಂಡಳಿಗಳೇ ಮಾಡಲಿವೆ. ವಿವಾಹದಲ್ಲಿ ಪಾಲ್ಗೊಳ್ಳುವ ವಧು- ವರರು 2022ರ ಮೇ 13ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
55 ಸಾವಿರ ರೂ. ಪ್ರೋತ್ಸಾಹ ಧನ: ಸಪ್ತಪದಿ ಯೋಜನೆಯಡಿ ವಿವಾಹವಾಗುವ ವಧು-ವರರಿಗೆ ರಾಜ್ಯ ಸರ್ಕಾರ ಒಟ್ಟು 55 ಸಾವಿರ ರೂ. ಪ್ರೋತ್ಸಾಹ ಧನ ನೀಡಲಿದೆ. ವಧು-ವರರು ಪಂಚೆ, ಶರ್ಟ್, ಶಲ್ಯ, ಹೂವಿನ ಹಾರ, ಧಾರೆ ಸೀರೆ ಹಾಗೂ ರವಿಕೆ ಕೊಳ್ಳಲು ಅನುದಾನ ನೀಡಲಿದೆ. ಹೂವಿನ ಹಾರ, ಪಂಚೆ, ಶರ್ಟ್, ಶಲ್ಯ ಖರೀದಿಗೆ ವರನಿಗೆ ಪ್ರೋತ್ಸಾಹ ಧನವಾಗಿ 5 ಸಾವಿರ ರೂ. ಹಾಗೂ ಹೂವಿನ ಹಾರ, ಧಾರೆ ಸೀರೆ, ರವಿಕೆಗಾಗಿ ವಧುವಿಗೆ 10 ಸಾವಿರ ರೂ. ನೀಡಲಿದೆ. ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಒಟ್ಟು ಅಂದಾಜು 8 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ನೀಡಲಾಗುತ್ತದೆ ಎಂದರು.
ಷರತ್ತುಗಳು: ವಧು-ವರರ ಎರಡು ಕಡೆಯ ತಂದೆ-ತಾಯಿಯರು ವಿವಾಹಕ್ಕೆ ಒಪ್ಪಿ ವಿವಾಹ ದಿನದಂದು ತಂದೆ-ತಾಯಿ ಉಪಸ್ಥಿತಿ ಹಾಗೂ ಎರಡು ಕಡೆಯಿಂದ ಸಾಕ್ಷಿದಾರರು ಇದ್ದಲ್ಲಿ ಮಾತ್ರ ವಿವಾಹವನ್ನು ನಡೆಸಲಾಗುವುದು. ವಧು-ವರರ ತಂದೆ-ತಾಯಿಯರು ನಿಧನರಾಗಿದ್ದು ಅವರ ವಾರಸುದಾರರ ಸಂಪೂರ್ಣ ಒಪ್ಪಿಗೆ ಇದ್ದು ವಿವಾಹ ದಿನದಂದು ಅವರು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಂದಲ್ಲಿ ಅಂತಹ ವಿವಾಹವಾಗುವ ವಧು-ವರರ ಬಗ್ಗೆ ಪುನರ್ ಪರಿಶೀಲಿಸುವುದು ಎಂದರು.
ನಂಜನಗೂಡು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ, ಮುಜರಾಯಿ ಇಲಾಖೆಯ ತಹಶೀಲ್ದಾರ್ ಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಎಚ್.ಎಸ್ ಬಿಂದಿಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್, ಸಮಾಜ ಕಲ್ಯಾಣ ಇಲಾಖೆಯ ರಾಜ್ ನಾಯಕ್, ಅರಮನೆ ಮುಜರಾಯಿ ಸಂಸ್ಥೆಯ ವ್ಯವಸ್ಥಾಪಕರಾದ ಎನ್. ಎಸ್ ಶೀಲಾ ಇದ್ದರು.
ಸರ್ಕಾರದ ನಿಯಮದಂತೆ ಗಂಡಿಗೆ ಕನಿಷ್ಠ 21 ವರ್ಷ ಹಾಗೂ ಹೆಣ್ಣಿಗೆ 18 ವರ್ಷ ತುಂಬಿರಬೇಕು. ವಯಸ್ಸಿನ ಬಗ್ಗೆ ಸರ್ಕಾರದ ಅಧಿಕೃತ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ. ಸಾಮೂಹಿಕ ವಿವಾಹಕ್ಕೆ ಸಲ್ಲಿಸುವ ದಾಖಲೆಗಳು ಸುಳ್ಳು ದಾಖಲೆಗಳೆಂದು ದೃಢವಾದಲ್ಲಿ ಅಂತಹವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು.
● ಡಾ. ಬಿ.ಎಸ್ ಮಂಜುನಾಥಸ್ವಾಮಿ,
ಅಪರ ಜಿಲ್ಲಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.