ನರೇಗಾದಲ್ಲಿ 18 ಕೋಟಿ ಅವ್ಯವಹಾರ ಜಾರ್ಖಂಡ್‌ನಲ್ಲಿ ಇ.ಡಿ ದಾಳಿ
Team Udayavani, May 6, 2022, 8:45 PM IST
ನವದೆಹಲಿ/ರಾಂಚಿ: ಮನರೇಗಾ ಯೋಜನೆಯಲ್ಲಿ ಅವ್ಯವಹಾರ ಉಂಟಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಾರ್ಖಂಡ್‌ನ ಗಣಿ ಸಚಿವಾಲಯದ ಕಾರ್ಯದರ್ಶಿ ನಿವಾಸ ಸೇರಿದಂತೆ ಹಲವೆಡೆ ದಾಳಿ ನಡೆಸಿದೆ.
2008-2011ರ ನಡುವೆ ಖುಂಟಿ ಜಿಲ್ಲೆಯಲ್ಲಿ ಯೋಜನೆಗೆ ಸಂಬಂಧಿಸಿದಂತೆ 18 ಕೋಟಿ ರೂ. ಅವ್ಯವಹಾರ ಉಂಟಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ.
ರಾಂಚಿಯಲ್ಲಿರುವ ಲೆಕ್ಕಪರಿಶೋಧಕರೊಬ್ಬರ ಬಳಿಯಿಂದ 17 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಅಷ್ಟು ಮೊತ್ತ ಇದೆಯೋ ಇಲ್ಲವೋ ಎನ್ನುವುದನ್ನು ಖಾತರಿಪಡಿಸಿಕೊಳ್ಳಲು ನೋಟುಗಳನ್ನು ಎಣಿಕೆ ಮಾಡುವ ಯಂತ್ರಗಳನ್ನೂ ತರಲಾಗಿದೆ. ಇತರ ಸ್ಥಳಗಳಿಂದ 1.8 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಾರ್ಖಂಡ್, ಬಿಹಾರ, ದೆಹಲಿ, ಪಶ್ಚಿಮ ಬಂಗಾಳ, ಪಂಜಾಬ್ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.