ರಾಗಿ ಖರೀದಿ ನೋಂದಣಿಗೆ ಮತ್ತೆ ವಿಘ್ನ: ಅನ್ನದಾತ ಆಕ್ರೋಶ

ಪೋರ್ಟಲ್‌ ಒಪನ್‌ ಆಗದ ಕಾರಣ ಅಧಿಕಾರಿಗಳು ಯಾವುದೇ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ

Team Udayavani, May 7, 2022, 5:58 PM IST

ರಾಗಿ ಖರೀದಿ ನೋಂದಣಿಗೆ ಮತ್ತೆ ವಿಘ್ನ: ಅನ್ನದಾತ ಆಕ್ರೋಶ

ದೊಡ್ಡಬಳ್ಳಾಪುರ: ರಾಗಿ ಖರೀದಿಗೆ ಮೇ 6ರಿಂದ ಮತ್ತೆ ನೋಂದಣಿ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದ ಹಿನ್ನೆಲೆ, ನಗರದ ಎಪಿಎಂಸಿ ಆವರಣದಲ್ಲಿನ ರಾಗಿ ಖರೀದಿ ಕೇಂದ್ರದ ಮುಂದೆ ಜಮಾಯಿಸಿದ್ದ ರೈತರಿಗೆ ಸರ್ಕಾರದ ಯಾವುದೇ ಆದೇಶ ಬಂದಿಲ್ಲ ಎನ್ನುವ ಅಧಿಕಾರಿಗಳ ಉತ್ತರದಿಂದ ನಿರಾಸೆಯುಂಟಾಗಿದ್ದು, ಸರ್ಕಾರದ ಬೇಜವಾಬ್ದಾರಿ ನಡವಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಹೆಸರು ನೋಂದಣಿ ಮಾಡಿಸಲು ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆಯಿಂದ ನಗರದ ಎಪಿಎಂಸಿ ಆವರಣದಲ್ಲಿ ಕಾದು ಕುಳಿದ್ದ ರೈತರಿಗೆ ಏ.26ರಂದು ಎರಡನೇ ಬಾರಿಗೆ 1.15 ಲಕ್ಷ ಮೆಟ್ರಿಕ್‌ ಟನ್‌ ರಾಗಿ ಖರೀದಿಗೆ ಸರ್ಕಾರ ನೀಡಿದ್ದ ಅನುಮತಿ ಎರಡೇ ದಿನದಲ್ಲಿ ಮುಕ್ತಾಯವಾಗಿತ್ತು. ಇದರಿಂದ ರೈತರು ರಸ್ತೆ ತಡೆ ನಡೆಸಿ ಮತ್ತಷ್ಟು ರಾಗಿ ಖರೀದಿಗೆ ಆಗ್ರಹಿಸಿದ್ದರು. ಹೀಗಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 6ರಿಂದ ಮತ್ತೆ ರಾಗಿ ಖರೀದಿಗೆ ನೋಂದಣಿ ನಡೆಯಲಿದೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆ, ಶುಕ್ರವಾರ ಬೆಳಗಿನ ಜಾವದಿಂದಲೇ ರೈತರು ಖರೀದಿ ಕೇಂದ್ರದ ಬಳಿ ಸಾಲುಗಟ್ಟಿ ನಿಂತಿದ್ದರು.

ಮಾಧ್ಯಮಗಳಲ್ಲಿ ವರದಿ: ಮುಖ್ಯಮಂತ್ರಿಗಳು ರೈತ ರಿಂದ 2 ಲಕ್ಷ ಟನ್‌ ರಾಗಿ ಹೆಚ್ಚುವರಿಯಾಗಿ ಖರೀದಿಸಲು ಆದೇಶ ಹೊರಡಿಸಲಾಗಿದೆ ಎಂದು ಗುರುವಾರ ಹೇಳಿದ್ದು, ರಾಜ್ಯದಲ್ಲಿ ರಾಗಿ ಬೆಳೆಯುವ ಪ್ರಮುಖ ಜಿಲ್ಲೆಗಳಲ್ಲಿ ಶುಕ್ರ ವಾರದಿಂದಲೇ ನೋಂದಣಿ ಆರಂಭಿಸಲು ಆದೇಶ ನೀಡ ಲಾಗಿದೆ. ನೋಂದಣಿಯ ಬಳಿಕ ಖರೀದಿ ಆರಂಭವಾಗಲಿದೆ ಎಂದು ತಿಳಿಸಿದ್ದು, ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಕುರಿತಂತೆ ನಗರದ ಎಪಿಎಂಸಿ ನೋಂದಣಿ ಕೇಂದ್ರದ ಬಳಿ ಬೆಳಗಿನ ಜಾವದಿಂದಲೇ 300ಕ್ಕೂ ಹೆಚ್ಚು ರೈತರು ಬಂದಿದ್ದಾರೆ. ಆದರೆ, ನೋಂದಣಿ ಪ್ರಕ್ರಿಯೆಗೆ ಆದೇಶ ಬಾರದ ಹಿನ್ನೆಲೆ, ಪೋರ್ಟಲ್‌ ಒಪನ್‌ ಆಗದ ಕಾರಣ ಅಧಿಕಾರಿಗಳು ಯಾವುದೇ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ನಂತರ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್‌ ಮೋಹನ ಕುಮಾರಿ, ಡಿವೈಎಸ್ಪಿ ನಾಗರಾಜ್, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ
ಇಲಾಖೆ ಅಧಿಕಾರಿ ರಾಘವೇಂದ್ರ ಬಂದು ಸಭೆ ನಡೆಸಿದರು.

ಸಭೆಯಲ್ಲಿ ರಾಗಿ ಖರೀದಿ ನೋಂದಣಿ ಯಾವ ಸಮಯದಲ್ಲಿ ಅವಕಾಶ ನೀಡುವುದೋ ಸ್ಪಷ್ಟ ಮಾಹಿತಿ ಇಲ್ಲದೆ ಇರುವುದಾಗಿ ಅಧಿಕಾರಿಗಳು ತಿಳಿಸಿದರು. ಆದೇಶ ಬಂದು ಪೋರ್ಟಲ್‌ ತೆರೆದ ಕೂಡಲೇ ಉಂಟಾಗುವ ನೂಕುನುಗ್ಗಲು ತಡೆಗಟ್ಟಲು ನಾಲ್ಕು ಸೂತ್ರವನ್ನು ಜಾರಿಗೆ ತರಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ನೋಂದಣಿಗೆ ಸಹಕರಿಸಲು ಮನವಿ: ಸರ್ಕಾರದ ಆದೇಶದ ಅನ್ವಯ 4 ಎಕರೆ 39 ಗುಂಟೆ ಜಮೀನು ಒಳಗಿರುವ ರೈತರಿಂದ ಮಾತ್ರ ಖರೀದಿ. ಕಳೆದ ಸಲ ಕೂಪನ್‌ ಪಡೆದವರಿಗೆ ಪ್ರತ್ಯೇಕ ಸಾಲು. ಹೊಸದಾಗಿ ನೋಂದಣಿ ಚೀಟಿ ಪಡೆಯಲು ಬರುವವರಿಗೆ ಮತ್ತೊಂದು ಸಾಲು. ಈ ಮುಂಚೆ ರಾಗಿ ಖರೀದಿಗೆ ನೋಂದಣಿ ಮಾಡಿ ರಾಗಿ ಮಾರಿರುವವರಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಯಿತು. ಅಲ್ಲದೇ ನೋಂದಣಿ ಸಮಯ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ನಿಗದಿ ಮಾಡಿದ್ದು, ರೈತರು ವ್ಯವಸ್ಥಿತವಾಗಿ ನೋಂದಣಿಗೆ ಸಹಕರಿಸಲು ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಅಧಿಕಾರಿಗಳು ಮನವಿ ಮಾಡಿದರು. ಸರ್ಕಲ್‌ ಇನ್ಸ್‌ಪೆಕ್ಟರ್‌ ಹರೀಶ್‌, ಇನ್ಸ್‌ಪೆಕ್ಟರ್‌ ಗೋವಿಂದ್‌ ಇದ್ದರು.

ನೋಂದಣಿಗೆ ಆಹಾರ ನಿಗಮದ ವೆಬ್‌ಸೈಟ್‌ ಒಪನ್‌ ಆಗುತ್ತಿಲ್ಲ ಬೆಳಗ್ಗೆ 10ಗಂಟೆಗೆ ಖರೀದಿ ಕೇಂದ್ರಕ್ಕೆ ಬಂದ ಅಧಿಕಾರಿಗಳು, ರಾಗಿ ಖರೀದಿ ಕುರಿತಂತೆ ಸರ್ಕಾರದಿಂದ ನಮಗೆ ಇನ್ನು ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಅಲ್ಲದೆ, ರೈತರ ಹೆಸರು ನೋಂದಣಿಗೆ ಆಹಾರ ನಿಗಮದ ವೆಬ್‌ಸೈಟ್‌ ಸಹ ಒಪನ್‌ ಆಗುತ್ತಿಲ್ಲ. ಹೀಗಾಗಿ, ನಾವು ನೋಂದಣಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದರು. ಆದರೂ, ಮಧ್ಯಾಹ್ನ 4ಗಂಟೆವರೆಗೂ ರೈತರು ರಾಗಿ ಖರೀದಿ ಕೇಂದ್ರದ ಬಳಿ ಕಾದು ಕುಳಿತಿದ್ದ ದೃಶ್ಯ ಕಂಡು ಬಂತು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.