ಎಂಡಿಎಫ್ ಹೆಸರಿನಲ್ಲಿ ಬೆದರಿಕೆ ಪೋಸ್ಟ್ : ಕಟ್ಟುನಿಟ್ಟಿನ ಕ್ರಮಕ್ಕೆ ಖಾದರ್ ಆಗ್ರಹ
Team Udayavani, May 7, 2022, 7:10 PM IST
ಮಂಗಳೂರು : ಜಾಲತಾಣದಲ್ಲಿ ಮುಸ್ಲಿಂ ಡಿಫೆನ್ಸ್ ಫೋರ್ಸ್ (ಎಂಡಿಎಫ್) ಹೆಸರಿನಲ್ಲಿ ಬೆದರಿಕೆ ಹಾಗೂ ಎಚ್ಚರಿಕೆ ಪೋಸ್ಟ್ ಗಳು ಹರಿದಾಡುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಅವರನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಸ್ವಾಸ್ಥ ಹಾಗೂ ಜನರ ನೆಮ್ಮದಿಯನ್ನು ಕೆಡಿಸುವ ಇಂಥ ಪೋಸ್ಟ್ಗಳನ್ನು ಹಾಕುವ ಯಾವುದೇ ಸಂಘಟನೆಗಳು ಅಥವಾ ವ್ಯಕ್ತಿಗಳಿರಲಿ ಅವರ ವಿರುದ್ಧ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು. ಜಾಲತಾಣದಲ್ಲಿ ಯಾರದೋ ಹೆಸರಿನಲ್ಲಿ ಬೇರೆ ಯಾರೋ ಮಾಡಿರುವ ಸಾಧ್ಯತೆಗಳೂ ಇವೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಬೇಕಾದರೆ ಇಂತಹವರನ್ನು ಪತ್ತೆ ಹಚ್ಚಿ ಮಟ್ಟಹಾಕುವ ಕಾರ್ಯವನ್ನು ಸರಕಾರ, ಪೊಲೀಸ್ ಇಲಾಖೆ ಮಾಡಬೇಕು ಎಂದರು.
ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಪೋಷಕರು ಇದ್ದಾರೆ. ಸಾಮಾಜಿಕವಾಗಿ ಧಾರ್ಮಿಕ ಮುಖಂಡರು ಮಾರ್ಗದರ್ಶನ ನೀಡುತ್ತಾರೆ. ಎಲ್ಲೋ ಕುಳಿತು ಯಾರೋ ಎಚ್ಚರಿಕೆ ನೀಡಬೇಕಿಲ್ಲ. ಇಂಥ ಕೃತ್ಯಗಳಿಗೆ ಈಗಲೇ ಕಡಿವಾಣ ಹಾಕಿದರೆ ಭವಿಷ್ಯದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳನ್ನು ತಡೆಯಲು ಸುಲಭವಾಗುತ್ತದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ವಹಿಸುತ್ತಿದೆ ಎಂದರು.
ಇದನ್ನೂ ಓದಿ : 2500 ಕೋಟಿ ರೂ ಆರೋಪ: ಮಾಧ್ಯಮಗಳ ವಿರುದ್ಧವೇ ಯತ್ನಾಳ್ ಕಿಡಿ
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖಂಡರಾದ ಸದಾಶಿವ ಉಳ್ಳಾಲ್, ಸಂತೋಷ್ ಕುಮಾರ್ ಶೆಟ್ಟಿ, ನೀರಜ್ಪಾಲ್, ನಝೀರ್ ಬಜಾಲ್ ,ನಜೀರ್ ಮಠ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Ullala: ತ್ರಿವಳಿ ತಲಾಖ್ ಪ್ರಕರಣ: ಆರೋಪಿಯ ಸೆರೆ
Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.