ಸ್ವಾವಲಂಬಿ ಭಾರತಕ್ಕೆ ಸಣ್ಣ ಕೈಗಾರಿಕೆ ಕೊಡುಗೆ ಅಪಾರ: ರಾಣೆ
Team Udayavani, May 7, 2022, 11:54 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ್ ನಿರ್ಮಾಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೊಡ್ಡ ಕೊಡುಗೆ ನೀಡಲಿವೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಾರಾಯಣ ರಾಣೆ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಐಎಎಸ್ ಫೌಂಡೇಶನ್ ಹಮ್ಮಿಕೊಂಡಿದ್ದ 5ನೇ ಆವೃತ್ತಿಯ 2022ನೇ ಸಾಲಿನ ಭಾರತ ಉತ್ಪಾದನ ಪ್ರದರ್ಶನದ ಪೂರ್ವಭಾವಿ ಸಿದ್ಧತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಘು ಉದ್ಯೋಗ ಭಾರತಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ.
ದೇಶದಲ್ಲಿ ಸುಮಾರು 12 ಕೋಟಿ ಜನರಿಗೆ ವಿವಿಧ ವಲಯಗಳಲ್ಲಿ ಉದ್ಯೋಗ ನೀಡಿದೆ. 6.3 ಲಕ್ಷ ಕೈಗಾರಿಕೆಗಳು ಈ ವಲಯದಲ್ಲಿವೆ. ದೇಶದ ಜಿಡಿಪಿಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಕೊಡುಗೆ ನೀಡುತ್ತಿದ್ದು, ದೇಶದ ಆರ್ಥಿಕ ಪ್ರಗತಿ ವಿಚಾರದಲ್ಲಿ ಎಂಜಿನ್ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
50 ಸಾವಿರ ಎಕರೆ ಭೂಮಿ: ನಿರಾಣಿ
ಕೈಗಾರಿಕ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಉದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರ ಕಾರ್ಯ ನಿರ್ವಹಿಸುತ್ತಿದೆ. ನವೆಂಬರ್ 2ರ ವೇಳೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಉದ್ಯಮ ಸ್ಥಾಪಿಸಲು ಸುಮಾರು 50 ಸಾವಿರ ಎಕರೆ ಭೂಮಿ ಸಿದ್ಧಭಾರತ್ ನಿರ್ಮಾಣವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.