ರಾಜ್ಯಾದ್ಯಂತ ಸಮಗ್ರ ನೀರಾವರಿಗೆ ಜೆಡಿಎಸ್‌ ಸಂಕಲ್ಪ

ನಗರಕ್ಕಿಂದು ಜನತಾ ಜಲಧಾರೆ ಯಾತ್ರೆ

Team Udayavani, May 8, 2022, 11:13 AM IST

5

ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತಂದಲ್ಲಿ ಇಡೀ ರಾಜ್ಯಾದ್ಯಂತ ಸಮಗ್ರ ನೀರಾವರಿ ಮಾಡುವ ಸಂಕಲ್ಪದೊಂದಿಗೆ ಆರಂಭವಾದ ಜನತಾ ಜಲಧಾರೆ ಯಾತ್ರೆ ಮೇ 8ರಂದು ಬಾಗಲಕೋಟೆ ನಗರಕ್ಕೆ ಆಗಮಿಸಲಿದ್ದು, ಮೇ 9ರಂದು ಬಾದಾಮಿಯಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ ಎಂದು ಜೆಡಿಎಸ್‌ ಜಿಲ್ಲಾ ಯುವ ಘಟಕದ ಅಧ್ಯಕ್ಷ ಗೋಪಾಲ ಲಮಾಣಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 15 ಭಾಗಗಳಿಂದ ಜನತಾ ಜಲಧಾರೆ ಯಾತ್ರೆ ಕೈಗೊಂಡಿದ್ದು, ಈ ಯಾತ್ರೆಯುದ್ದಕ್ಕೂ ನದಿ, ಬ್ಯಾರೇಜ್‌ಗಳಿಗೆ ವಿಶೇಷ ಪೂಜೆ ಹಾಗೂ ಜಿಲ್ಲೆಯ ಮೂರು ಪ್ರಮುಖ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಜಲ ಸಂಗ್ರಹ ಮಾಡಲಾಗಿದೆ. ಈ ಜಲವನ್ನು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮುಂದಿನ ಚುನಾವಣೆ ವರೆಗೂ ಜೋಪಾನವಾಗಿಟ್ಟು, ನಿತ್ಯ ಜಲಪೂಜೆ ನಡೆಯಲಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಪ್ರತಿಯೊಂದು ನದಿ ಪಾತ್ರದಲ್ಲೂ ನೀರಾವರಿ ಕೈಗೊಳ್ಳುತ್ತೇವೆ ಎಂಬ ಸಂಕಲ್ಪವೇ ಈ ಜನತಾ ಜಲಧಾರೆ ಯಾತ್ರೆಯ ಉದ್ದೇಶವಾಗಿದೆ ಎಂದರು.

ಜಲಧಾರೆ ಯಾತ್ರೆ ಈಗಾಗಲೇ ಬಾಗಲಕೋಟೆ ಜಿಲ್ಲೆಯನ್ನು ಪ್ರವೇಶಿಸಿದ್ದು ಮೇ. 8 ರಂದು ನಗರಕ್ಕೆ ಆಗಮಿಸಲಿದೆ. ಅಂದು ನಗರದ ಅಂಜುಮನ್‌ ಸಂಸ್ಥೆಯ ಹತ್ತಿರ ಅದ್ದೂರಿ ಸ್ವಾಗತದೊಂದಿಗೆ ಬೈಕ್‌ ರ್ಯಾಲಿ ನಡೆಯಲಿದೆ. ಬಾಗಲಕೋಟೆಯ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಸಿದರು. ಅಂದು ಬೆಳಗ್ಗೆ 11ಕ್ಕೆ ಬಾಗಲಕೋಟೆಯ ಅಂಜುಮನ್‌ ಸಂಸ್ಥೆಯ ಆವರಣದಲ್ಲಿ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಲಿದ್ದು ಮಠಾಧೀಶರು, ಮೌಲ್ವಿಗಳು, ಪಾದ್ರಿಗಳು ಹಾಗೂ ಪಕÒ‌ದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಯಾತ್ರೆಗೆ ಚಾಲನೆ ನೀಡಿದ ನಂತರ ಬೈಕ್‌ ರ್ಯಾಲಿ ಆರಂಭವಾಗಿ ನಗರ, ನವನಗರ ಹಾಗೂ ಬಾಗಲಕೋಟೆಯಲ್ಲಿ ಸಂಚರಿಸಲಿದೆ. ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ, ಈ ಯಾತ್ರೆ ಬಾದಾಮಿಗೆ ತೆರಳಲಿದೆ ಎಂದು ವಿವರಿಸಿದರು.

ಬಾದಾಮಿಗೆ ಎಚ್‌ಡಿಕೆ: ಜೆಡಿಎಸ್‌ ಯುವ ಮುಖಂಡ ವಿಜಯ ತೋಟಣ್ಣವರ ಮಾತನಾಡಿ, ಮೇ. 9 ರಂದು ಬಾದಾಮಿಯಲ್ಲಿ 11ಕ್ಕೆ ಜನತಾ ಜಲಧಾರೆ ಯಾತ್ರೆಯ ಸಮಾವೇಶವು ಜರುಗಲಿದೆ. ಸಮಾವೇಶದಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ, ಮುಖಂಡರಾದ ಸಿ.ಎಂ. ಇಬ್ರಾಹಿಂ, ಬಂಡೆಪ್ಪ ಕಾಶೆಂಪೂರ ಮುಂತಾದವರು ಭಾಗವಹಿಸಲಿದ್ದಾರೆ. ಜಿಲ್ಲೆಯ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಎರಡು ರಾಷ್ಟ್ರೀಯ ಪಕ್ಷ‌ಗಳು ಜನತೆಯ ಆಶಯಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸದೇ ವಿಫಲವಾಗಿದೆ. ರಾಜ್ಯದ ನೀರಾವರಿ ಯೋಜನೆಗಳು ಸಂಪೂರ್ಣ ನೆನಗುದಿಗೆ ಬಿದ್ದಿವೆ. ಹೀಗಾಗಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ಗೆ ಅಧಿಕಾರ ದೊರೆತರೆ ರಾಜ್ಯದ ಎಲ್ಲ ನೀರಾವರಿ ಯೋಜನೆ ಪೂರ್ಣಗೊ ಳಿಸುವ ಸಂಕಲ್ಪವನ್ನು ಕುಮಾರಸ್ವಾಮಿ ಮಾಡಿದ್ದಾರೆ. ಅದಕ್ಕಾಗಿಯೇ ಜನತಾ ಜಲಧಾರೆ ಯಾತ್ರೆ ಆರಂಭಿಸಲಾಗಿದೆ. ಈ ಸಂಕಲ್ಪಕ್ಕೆ ರಾಜ್ಯದ ಜನತೆ ಬೆಂಬಲಿಸಿ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು. ಪಕ್ಷದ ಮುಖಂಡರಾದ ಎಂ.ಎನ್‌.ನದಾಫ್‌, ಯಾಸೀನ್‌ ಮಿರ್ಜಿ, ರಶೀದ ಬಾಗವಾನ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.