ಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ
ದಕ್ಕಲಿಗ ಸಮುದಾಯದವರು ಮುಖ್ಯವಾಹಿನಿಗೆ ಬರಲಿ
Team Udayavani, May 8, 2022, 11:29 AM IST
ಮುಧೋಳ: ಒಂದೆಡೆ ನೆಲೆ ನಿಂತು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ದಕ್ಕಲಿಗ ಸಮುದಾಯದ ಜನರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ನಡೆದ ಉತ್ತರ ಕರ್ನಾಟಕ ಭಾಗದ ದಕ್ಕಲಿಗ ಸಮುದಾಯದವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ದಕ್ಕಲಿಗ ಸಮುದಾಯದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ನಿರ್ಮಾಣಗೊಂಡಿರುವ ಹಲವಾರು ವಸತಿ ನಿಲಯಗಳಲ್ಲಿ ತಮ್ಮ ಮಕ್ಕಳನ್ನು ಸೇರಿಸಿ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಎಲ್ಲ ದಕ್ಕಲಿಗ ಸಮುದಾಯದವರಿಗೆ ಮುಧೋಳ ಮತಕ್ಷೇತ್ರದ ಲೋಕಾಪುರ ಭಾಗದಲ್ಲಿ ಮನೆ ನಿರ್ಮಿಸಿಕೊಡಲು ಸಿದ್ಧನಿದ್ದೇನೆ. ಈ ಭಾಗದಲ್ಲಿ ಬರುವಿರಾ ಎಂದು ದಕ್ಕಲಿಗ ಸಮುದಾಯದವರನ್ನು ಕೇಳಿದಾಗ ಅವರು ಬೇಡ ನಮ್ಮ ನಮ್ಮ ಮೂಲಸ್ಥಾನದಲ್ಲಿಯೇ ನಮಗೆ ಸೌಲಭ್ಯ ಕಲ್ಪಿಸಿ ಎಂದು ಕೇಳಿಕೊಂಡರು.
ಆಗ ಕಾರಜೋಳರು ಆಗಲಿ ಎಂದರು. ದಕ್ಕಲಿಗರ ಮನೆ ನಿರ್ಮಾಣಕ್ಕೆ ರಾಜೀವ ಗಾಂಧಿ ಆವಾಸ್ ಯೋಜನೆ ಬದಲಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ನೇರವಾಗಿ ಹಣ ಬಿಡುಗಡೆ ಮಾಡಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ದಕ್ಕಲಿಗ ಸಮುದಾಯದ ಶ್ರೇಯೋಭಿವೃದ್ಧಿಗೆ ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗಕ್ಕೆ ಸಾಲ, ಜಮೀನು ಖರೀದಿಸಲು ಸರ್ಕಾರದಿಂದ ಸಹಾಯಧನ ಸಮರ್ಪಕವಾಗಿ ಹಂಚಿಕೆಯಾಗಲಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಬೆಳಗಾವಿ ಜಿಲ್ಲೆಯ ಮೂಡಲಗಿ ಭಾಗದ ದಕ್ಕಲಿಗ ಸಮುದಾಯದವರು ಮಾತನಾಡಿ, ನಮಗೆ ಸ್ವಂತ ಮನೆಗಳಿಲ್ಲ, ನಿವೇಶನವೂ ಇಲ್ಲ ಎಂದು ತಮ್ಮ ಕಷ್ಟ ತೋಡಿಕೊಂಡರು. ತಕ್ಷಣವೇ ಸಂಬಂಧಿ ಸಿದ ಅಧಿ ಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಚಿವ ಕಾರಜೋಳ ಕಂಕನವಾಡಿಯಲ್ಲಿ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಮುದಗಲ್ಲಿನಿಂದ ಆಗಮಿಸಿದ್ದ ಭೀಮಸಿ ಎಂಬುವರು, ನಮ್ಮ ಭಾಗದಲ್ಲಿ ಮಾದಿಗರು ನಮಗಿಂತ ಬಹುಸಂಖ್ಯಾತರಾಗಿದ್ದು, ನಮ್ಮ ಮೇಲೆ ನಿತ್ಯ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.
ಈ ವೇಳೆ ರಾಯಚೂರು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಚಿವ ಕಾರಜೋಳ ಘಟನೆ ಬಗ್ಗೆ ವಿಚಾರಣೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಾಮಾಜಿಕ ಕಾರ್ಯಕರ್ತ ವಾದಿರಾಜ ಮಾತನಾಡಿ, ದಕ್ಕಲಿಗ ಸಮುದಾಯದ ಶ್ರೇಯೋಭಿವೃದ್ಧಿಗೆ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಜನರು ಅವುಗಳ ಸದುಪಯೋಗಪಡಿಸಿಕೊಂಡು ಸಮಾ ಜದ ಮುನ್ನೆಲೆಗೆ ಬರಬೇಕು ಎಂದು ಹೇಳಿದರು.
ದಕ್ಕಲಿಕ ಸಮುದಾಯದ ರಾಜ್ಯಮಟ್ಟದ ನೋಡಲ್ ಅಧಿಕಾರಿ ನಟರಾಜ ಮಾತನಾಡಿ, ರಾಜ್ಯದ ದಕ್ಕಲಿಗ ಸಮುದಾಯದ 106 ಕುಟುಂಬಗಳಿಗೆ ಮನೆಗಳು ಮಂಜೂರಾಗಿವೆ. ಇನ್ನೂ 200ಕ್ಕೂ ಹೆಚ್ಚು ಕುಟುಂಬ ಗಳಿಗೆ ಮನೆ ಮಂಜೂರಾತಿಯಾಗಬೇಕಿದೆ ಎಂದರು.
ಆದಿಜಾಂಭವ ಅಭಿವೃದ್ಧಿ ನಿಗಮದ ಅಧಿಕಾರಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ತಹಶೀಲ್ದಾರ್ ಮಹೇಶ ಪಾಂಡವ, ತಾಲೂಕು ಪಂಚಾಯಿತಿ ಇಒ ಕಿರಣ ಘೋರ್ಪಡೆ, ನಗರಸಭೆ ಪೌರಾಯುಕ್ತ ಶಿವಪ್ಪ ಅಂಬಿಗೇರ, ನಗರಸಭೆ ಅಧ್ಯಕ್ಷ ಗುರುಪಾದ ಕುಳಲಿ, ಕೆ.ಆರ್. ಮಾಚಪ್ಪನವರ ಇದ್ದರು. ಬೀದರ, ರಾಯಚೂರು, ಬಾಗಲಕೋಟೆ, ಬೆಳಗಾವಿ ಭಾಗದ ದಕ್ಕಲಿಗ ಸಮುದಾಯದ ಜನರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.