ಲಕ್ಷ್ಮೇಶ್ವರದಲ್ಲಿ ಭಾರೀ ಗಾಳಿ-ಮಳೆಗೆ ನೆಲಕಚ್ಚಿದ ತೋಟಗಾರಿಕೆ ಬೆಳೆ-ಅಪಾರ ನಷ್ಟ

ತೋಟಗಾರಿಕಾ ಇಲಾಖೆ ಹಿರಿಯ ಅಧಿಕಾರಿಗಳಿಂದ ಹಾನಿಗೀಡಾದ ತರಕಾರಿ ಬೆಳೆ ಪರಿಶೀಲನೆ

Team Udayavani, May 8, 2022, 2:41 PM IST

15

ಲಕ್ಷ್ಮೇಶ್ವರ: ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ದಿನವೂ ಗುಡುಗು, ಸಿಡಿಲು, ಬಿರುಗಾಳಿಯಿಂದ ಕೂಡಿದ ಆಲಿಕಲ್ಲು ಸಹಿತ ಮಳೆಯಾಗುತ್ತಿರುವುದರಿಂದ ಅಪಾರ ಪ್ರಮಾಣದ ತೋಟಗಾರಿಕೆ ಬೆಳೆಗಳು ನೆಲಕಚ್ಚಿ, ಅಪಾರ ಹಾನಿಯನ್ನುಂಟು ಮಾಡಿದೆ.

ತಾಲೂಕಿನಾದ್ಯಂತ 20ಕ್ಕೂ ಹೆಚ್ಚು ಮನೆಗಳು ಭಾಗಶಃ ಬಿದ್ದಿದ್ದು, ಅಕಾಲಿಕ ಮಳೆ ಅನೇಕ ಆವಾಂತರಗಳನ್ನೇ ಸೃಷ್ಟಿಸಿ ಜನರಲ್ಲಿ ಭೀತಿಯುಂಟು ಮಾಡುತ್ತಿದೆ. ತಾಲೂಕಿನಲ್ಲಿ ಅಂದಾಜು 7 ಸಾವಿರ ಹೆಕ್ಟೇರ್‌ ನೀರಾವರಿ ಕ್ಷೇತ್ರವಿದ್ದು, ಮುಖ್ಯವಾಗಿ ಹೂವು, ಹಣ್ಣು, ತರಕಾರಿ, ತೆಂಗು, ಮಾವು, ಬಾಳೆ, ಕಬ್ಬು, ಪಪ್ಪಾಯಿ ಬೆಳೆಯನ್ನು ಬೆಳೆಯಲಾಗಿದೆ.

ಬಿರುಸಾದ ಗಾಳಿಯೊಂದಿಗೆ ಆಲಿಕಲ್ಲು ಸಹಿತ ಮಳೆಗೆ ತೋಟಗಾರಿಕಾ ಬೆಳೆಗಳು ನಲೆಕಚ್ಚಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತರ ಝಂಗಾ ಬಲವೇ ಉಡುಗಿದಂತಾಗಿದೆ. ಪಟ್ಟಣದ ಪ್ರಗತಿಪರ ರೈತ ಚನ್ನಪ್ಪ ಜಗಲಿ ಅವರ ಮುನಿಯನ ತಾಂಡಾ ಬಳಿಯ ತೋಟದಲ್ಲಿ ನೂರಾರು ತೆಂಗು, ಸಾಗವಾನಿ ಇತರೇ ಮರಗಳು ಧರೆಗುರುಳಿವೆ.

ಶುಕ್ರವಾರ ಸಂಜೆ ಬೀಸಿದ ಗಾಳಿ ಮಳೆಗೆ ತಾಲೂಕಿನ ಬಾಲೆಹೊಸೂರ, ಶಿಗ್ಲಿ, ಗುಲಗಂಜಿಕೊಪ್ಪ, ಆದ್ರಳ್ಳಿ, ಸೂರಣಗಿ, ಉಂಡೇನಹಳ್ಳಿ, ದೊಡೂxರ ಭಾಗದಲ್ಲಿನ ತೋಟಗಾರಿಕೆ ಬೆಳೆಗಳಾದ ಮಾವು, ತೆಂಗು, ಕಲ್ಲಂಗಡಿ, ಪೇರಲ, ನಿಂಬೆ, ದಾಳಿಂಬೆ, ಬದನೆ, ಟೊಮೆಟೋ, ಬೆಂಡಿ, ಸೌತೆ ಇತರೆ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.

ಬಾಲೇಹೊಸೂರ ಗ್ರಾಮದಲ್ಲಿ ಹನಮಂತಪ್ಪ ಕೋಣನತಂಬಗಿ ಅವರ 4 ಎಕರೆ, ಕರಿಯಪ್ಪ ಮುದಿಯಮ್ಮನವರ ಅವರ 2 ಎಕರೆ, ದತ್ತಾತ್ರೇಯ ಕಟ್ಟಿಮನಿ ಅವರ 3 ಎಕರೆ ಬಾಳೆ ಬೆಳೆ ಬಹುತೇಕ ನೆಲಕಚ್ಚಿದೆ. ಸಾವಿರಾರೂ ರೂ. ಸಾಲಸೂಲ ಮಾಡಿ ಕಷ್ಟುಪಟ್ಟು ಬೆಳೆದ 1 ವರ್ಷದ ಬೆಳೆ ಇನ್ನೇನು ಕೈಗೆ ಬರುವ ಹಂತದಲ್ಲಿ ಗೊನೆ ಸಹಿತ ಬಾಳೆ ಬೆಳೆ ನೆಲಕಚ್ಚಿದೆ. ಇದರಲ್ಲಿನ ಅಂತರ್‌ ಬೆಳೆಯೂ ಹಾಳಾಗಿದೆ. ಗ್ರಾಮದ ಹನುಮಪ್ಪ ಸಾಲಿ ಅವರ 2 ಎಕರೆ, ಶಿವಾನಂದ ಜಾಲವಾಡಗಿ ಮತ್ತು ಹನುಮಪ್ಪ ತಿರಕಣ್ಣವರ ಅವರ ತಲಾ ಎಕರೆಯಲ್ಲಿನ ಮಾವು ನೆಲಕ್ಕುದುರಿವೆ.

ಇನ್ನು ಗುಲಗಂಜಿಕೊಪ್ಪದ ಬಸನಗೌಡ ಪಾಟೀಲ, ದುಂಡವ್ವ ರಾಮಗೇರಿ, ರಾಮಣ್ಣ ರಾಮಗೇರಿ ಅವರು ಬೆಳೆದ ತರಕಾರಿ ಬೆಳೆ ಹಾಳಾಗಿದೆ. ಇದು ಕೇವಲ ಒಬ್ಬಿಬ್ಬ ರೈತರ ಕತೆಯಾಗಿರದೇ ತಾಲೂಕಿನಾದ್ಯಂತ ತೋಟಗಾರಿಕೆ ಬೆಳೆಗಾರರು ಹಾನಿ ಅನುಭವಿಸಿದ್ದಾರೆ. ಇನ್ನು ತಾಲೂಕಿನ ಖುಷ್ಕಿ ಜಮೀನಿನಲ್ಲಿ ಅಲ್ಲಲ್ಲಿ ಬದುವು, ಒಡ್ಡು ಕಿತ್ತು ಜಮೀನು ಹಾಳಾಗಿವೆ. ಮುಂಗಾರಿನ ಕೃಷಿಗೆ ಜಮೀನು ಹದ ಮಾಡಲಾಗದೇ ರೈತರು ಚಿಂತೆಗೀಡಾಗಿದ್ದಾರೆ.

ಶನಿವಾರ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಕುಂಬಾರ ಅವರು ಗುಲಗಂಜಿಕೊಪ್ಪ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು. ಈ ವೇಳೆ ಮಾಹಿತಿ ನೀಡಿದ ಅವರು, ಅಕಾಲಿನ ಮಳೆ-ಗಾಳಿಯಿಂದ ತಾಲೂಕಿನ ವಿವಿಧೆಡೆ ಬೆಳೆ ಹಾನಿಯಾಗಿವೆ. ಹಾನಿಗೀಡಾದ ತೋಟಗಾರಿಕಾ ಬೆಳೆಗಳನ್ನು ಕಂದಾಯ ಇಲಾಖೆ ಸಿಬ್ಬಂದಿಯೊಂದಿಗೆ ಖುದ್ದಾಗಿ ಪರಿಶೀಲಿಸಿ ಹಾನಿ ಅಂದಾಜಿನ ವರದಿ ಸಲ್ಲಿಸಲಾಗುವುದು. ಎನ್‌ಡಿಆರ್‌ಎಫ್‌ ವಿಧಾನದಡಿ ಪರಿಹಾರ ಕಲ್ಪಿಸಲಾಗುವುದು ಎಂದರು.

ತಾಲೂಕಿನಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ಗಾಳಿ, ಆಲಿಕಲ್ಲು ಸಹಿತ ಮಳೆಯಿಂದ ತೋಟಗಾರಿಕಾ ಬೆಳೆಗಳು ಹಾನಿಗೀಡಾಗಿವೆ. 20ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಈ ಬಗ್ಗೆ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯಿಂದ ನಿಖರ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ವರದಿ ಸಲ್ಲಿಸುವ ಮೂಲಕ ಹಾನಿಗೆ ಪರಿಹಾರ ಕಲ್ಪಿಸುವ ಕಾರ್ಯ ಮಾಡುವೆ.  –ಪರಶುರಾಮ ಸತ್ತಿಗೇರಿ, ತಹಶೀಲ್ದಾರ್‌, ಲಕ್ಷ್ಮೇಶ್ವರ

ಕಳೆದ 2 ವರ್ಷ ಕೋವಿಡ್‌ನಿಂದ ತೋಟಗಾರಿಕೆ ಬೆಳೆಗಾರರು ಸಾಕಷ್ಟು ತೊಂದರೆ, ನಷ್ಟ ಅನುಭವಿಸಿದ್ದಾರೆ. ಸಮೃದ್ಧವಾಗಿದ್ದ ಬೆಳೆ ಅಕಾಲಿಕ ಮಳೆ-ಗಾಳಿಗೆ ಹಾನಿಗೀಡಾಗಿ ರೈತರ ನೆಮ್ಮದಿ ಕಸಿದಿದೆ. ಅಕಾಲಿಕ ಮಳೆ-ಗಾಳಿಯಿಂದ ಬೆಳೆಗಳು ಹಾಳಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಆದ್ದರಿಂದ, ಅಧಿಕಾರಿಗಳು, ಜನಪ್ರತಿನಿಧಿಗಳು ರೈತರ ಕಷ್ಟ ಅರಿತು ಬೆಳೆ ಹಾನಿ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. -ಚನ್ನಪ್ಪ ಜಗಲಿ, ಹನುಮಂತಪ್ಪ ಕೋಣನತಂಬಗಿ, ತೋಟಗಾರಿಕಾ ಬೆಳೆಗಾರರು

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.