ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ : ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ಕರೆ


Team Udayavani, May 8, 2022, 7:58 PM IST

ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ : ಬೊಮ್ಮಾಯಿ ಕರೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ಸಭೆ ಜರುಗಿತು.

ಆಡಳಿತ ಶೈಲಿಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಕರೆ ನೀಡಿದರು.

ಬಡವರಿಗೆ ಸಹಾಯ ಮಾಡಲು ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಕಷ್ಟದಲ್ಲಿರುವ ಬಡವರಿಗೆ ಸಹಾಯ ಮಾಡಿದರೆ ಹೊಸ ಚೈತನ್ಯ ಮೂಡುತ್ತದೆ. ಅದರಿಂದ ನಿಮಗೂ ತೃಪ್ತಿ ದೊರೆಯುವುದು. ಜನಸಾಮಾನ್ಯರಿಗೆ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ. ಸರಳ , ಸುಲಭ ಮತ್ತು ಸ್ವಚ್ಛವಾಗಿದೆ ಎಂಬ ಭಾವನೆ ಬರುವಂತೆ ಆಡಳಿತ ನೀಡಬೇಕು. ನಾವು ಒಂದು ತಂಡವಾಗಿ ಒಟ್ಟಾಗಿ ಕೆಲಸ ಮಾಡಬೇಕು. ನನ್ನ ಕಲ್ಪನೆಯ ನವ ಕರ್ನಾಟಕದ ಸಾಕಾರಕ್ಕೆ ನಿಮ್ಮ ಸಹಕಾರ ಅಗತ್ಯ ಎಂದರು.

ಸಭೆಯ ಮುಖ್ಯಾಂಶಗಳು:
1. ಜಿಲ್ಲಾ ಆಡಳಿತ ರಾಜ್ಯದ ಬೆಳವಣಿಗೆಗೆ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜಿಲ್ಲಾಧಿಕಾರಿಗಳ ಪಾತ್ರ ಹಲವಾರು ಜವಾಬ್ದಾರಿಗಳನ್ನು ಸನ್ನಿವೇಶಕ್ಕೆ ತಕ್ಕ ಹಾಗೆ ವಹಿಸಿಕೊಳ್ಳಬೇಕಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿ ಕಚೇರಿ ಎಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಾರೆಯೋ ಅಷ್ಟು ಆಡಳಿತವೂ ಕ್ರಿಯಾಶೀಲವಾಗಿರುತ್ತದೆ. ಜಿಲ್ಲಾಧಿಕಾರಿಗಳು ಆಡಳಿತದ ನಾಯಕರು.

2. ಜಿಲ್ಲಾಧಿಕಾರಿಯಾಗುವುದು ವಿಶೇಷ. ಜಿಲ್ಲೆಯಲ್ಲಿ ನೇರ ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತೀರಿ. ಪರಿಸ್ಥಿತಿಗೆ ತಕ್ಷಣ ಸ್ಪಂದಿಸಬೇಕಾಗುತ್ತದೆ. ಔಪಚಾರಿಕವಾಗಿ ಕೆಲಸ ಮಾಡಬೇಕಿಲ್ಲ. ತಕ್ಷಣದ ಕ್ರಮ ವಹಿಸಬೇಕು. ಕ್ರಿಯಾಶೀಲರಾಗಿದ್ದಲ್ಲಿ ಸಮಸ್ಯೆಗಳು ಕಡಿಮೆಯಾಗುತ್ತವೆ. ಈಗ ಕಾಲ ಬದಲಾಗಿದೆ. ಜನ ಜಾಗೃತರಾಗಿದ್ದಾರೆ. ನಿಮ್ಮ ಕೆಲಸವನ್ನು ಪ್ರಶ್ನೆ ಮಾಡುತ್ತಾರೆ. ಕ್ರಿಯಾಶೀಲವಾಗಿ ಕೆಲಸ ಮಡಿದರೆ ಪ್ರಶ್ನೆ ಮಾಡುವ ಪ್ರಮೇಯವಿರುವುದಿಲ್ಲ.

ಇದನ್ನೂ ಓದಿ :ರಾಷ್ಟ್ರೀಯ ಪಕ್ಷಗಳಿಂದ ವಿಭಜಿಸುವ ಕೆಲಸ: ಎಚ್.ಡಿ.ದೇವೇಗೌಡ

3. ಪರಿಹಾರ ನೀಡುವ ಕಾರ್ಯಕ್ರಮಗಳಲ್ಲಿ ಅಕ್ರಮಗಳನ್ನು ತಡೆಯಬೇಕು. ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ವಿಳಂಬ ಧೋರಣೆ ಸಲ್ಲದು. ವಿಳಂಬ ಧೋರಣೆಯು ಒಟ್ಟಾರೆ ರಾಜ್ಯದ ವರ್ಚಸ್ಸಿನ ಮೇಲೆ ಪ್ರಭಾವ ಬೀರಲಿದೆ.

4. ಸರ್ಕಾರದ ಕಡೆಯ ವರ್ಷವಾಗಿರುವುದರಿಂದ ಈ ವರ್ಷ ಅನುಷ್ಠಾನಗೊಳ್ಳಬೇಕಿರುವ ಮುಂದುವರೆದ ಕಾರ್ಯಕ್ರಮಗಳು ಹಾಗೂ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನ ಮಾಡಬೇಕಿದೆ. ಅದಕ್ಕಾಗಿ ಸೂಕ್ತವಾಗಿ ಯೋಜಿಸಬೇಕು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಿಬೇಕು. ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೆಲಸ ಮಾಡಬೇಕು.

5. ಜಿಲ್ಲೆಯ ಎಲ್ಲಾ ತಹಶೀಲ್ದಾರರ ಹಾಗೂ ಅಪರ ಜಿಲ್ಲಾಧಿಕಾರಿಗಳ ಕಚೇರಿಗೆ ವಾರಕ್ಕೊಮ್ಮೆ ಭೇಟಿ ನೀಡಬೇಕು. ಅರ್ಜಿಗಳು ಬಾಕಿ ಉಳಿಯದಂತೆ ಕ್ರಮ ವಹಿಸಬೇಕು.

6. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಸಂದರ್ಭದಲ್ಲಿ ಎಲ್ಲಾ ಸಹಾಯಕ ಕಮಿಷನರ್, ತಹಶೀಲ್ದಾರ್, ಎಡಿಸಿಗಳು ಜೊತೆಗಿರಬೇಕು. ದೀನದಲಿತರಿಗೆ , ಬಡವರಿಗೆ, ರೈತರಿಗೆ ಯೋಜನೆಗಳನ್ನು ತಲುಪಿಸಬೇಕು. ಕಚೇರಿ ಕೆಲಸದ ಅವಧಿಯನ್ನು ವಿಸ್ತರಿಸಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ.

7. ರಾಜ್ಯದ ವಿವಿಧ ಭಾಗಗಳಿಂದ ಮುಖ್ಯ ಮಂತ್ರಿಗಳ ಕಚೇರಿಯಲ್ಲಿ 16436 ಅರ್ಜಿಗಳು ಬಂದಿವೆ. 10 ಸಾವಿರ ನಿಮಗೆ ಕಳಿಸಿದೆ. 6000 ಬಾಕಿ ಇವೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ಒಂದು ಸೆಲ್ ರಚಿಸಲು ಸೂಚಿಸಿದರು.

8. ಅರ್ಜಿ ಕೊಟ್ಟರೆ ಕೆಲಸವಾಗುವುದಿಲ್ಲ ಎಂಬ ಮಾತಿದೆ. ನಿಮ್ಮ ಪಾತ್ರ ಬಹಳ ಮುಖ್ಯ. ಬಡವರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮಹತ್ವ ನೀಡಿ. ದೌರ್ಜನ್ಯ ಪ್ರಕರಣಗಳ ಬಗ್ಗೆ ಗಮನ ನೀಡಿ, ಸರ್ಕಾರ ಪ್ರಮುಖ ಕಾರ್ಯಕ್ರಮಗಳಾದ ಮನೆ ಬಾಗಿಲಿಗೆ ದಾಖಲೆಗಳು ಮುಂತಾದವುಗಳ ಬಗ್ಗೆ ಪರಿಶೀಲಿಸಿ.

9. ಪ್ರಾಧಿಕಾರದ ಅರ್ಜಿಗಳು, ಭೂ ಮಂಜೂರಾತಿ ಪ್ರಕರಣಗಳು, ಪಿಂಚಣಿಗಳು, ಗ್ರಾಮ ಒನ್ ಮುಂತಾದ ಯೋಜನೆಗಳ ಅನುಷ್ಠಾನದ ಬಗ್ಗೆ ಗಮನ ಹರಿಸಿ. ನಿಮ್ಮ ಆಡಳಿತದ ವೈಖರಿಯನ್ನು ಬದಲಾಯಿಸಿ, ಜನಪರ ಆಡಳಿತ ನೀಡಿ. ಉತ್ತರದಾಯಿತ್ವ, ಪಾರದರ್ಶಕತೆ ಇರಲಿ ಎಂದರು.

ಇದನ್ನೂ ಓದಿ : ಶಾಲೆಯ ಶುಲ್ಕ ಕಟ್ಟಿಲ್ಲವೆಂದು 35 ವಿದ್ಯಾರ್ಥಿಗಳನ್ನೇ ಒತ್ತೆ ಇರಿಸಿದ ಶಾಲಾ ಆಡಳಿತ ಮಂಡಳಿ

10. ಮುಖ್ಯಮಂತ್ರಿಗಳ ಕಚೇರಿಯಿಂದ ಬಂದ ಕಡತಗಳಿಗೆ ಪ್ರತಿಕ್ರಿಯೆ ನೀಡಬೇಕು. ಬಡಜನರು, ನಿರ್ಗತಿಕರು ಬರುತ್ತಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಬೇಕು. ಜನರ ಪರವಾಗಿ ಕೆಲಸ ಮಾಡಲು ಒಂದು ಕಾರಣವಿದ್ದರೂ ಮಾಡಬೇಕು.

11. ಎಲ್ಲಾ ಪ್ರಕರಣಗಳನ್ನು ತಿರಸ್ಕರಿಸಿದರೆ ಪ್ರಾಮಾಣಿಕರು ಎಂದು ಅರ್ಥವಲ್ಲ. ಜನರಿಗೆ ಸಹಾಯ ಮಾಡಿ. ಅದಕ್ಕಾಗಿ ಸ್ವಲ್ವವಾದರೂ ತೊಂದರೆ ತೆಗೆದುಕೊಳ್ಳಬೇಕು.

12. ಆಡಳಿತಕ್ಕೆ ಚುರುಕು ಮುಟ್ಟಿಸಲು ಹಾಗೂ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನವನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳುವುದು ಎಂದು ಸೂಚಿಸಿದರು.

13. ಮಳೆಗಾಲಕ್ಕೆ ಬೀಜ ಮತ್ತು ರಸಗೊಬ್ಬರಗಳ ಬೇಡಿಕೆ, ದಾಸ್ತಾನುಗಳ ಬಗ್ಗೆ ಪರಿಶೀಲಿಸಿ. ಸೂಕ್ತ ವ್ಯವಸ್ಥೆ ಕೈಗೊಳ್ಳುವುದು. ಎಲ್ಲಿಯೂ ಕೊರತೆ ಕಂಡುಬರದಂತೆ ವ್ಯವಸ್ಥೆ ಮಾಡುವುದು. ಡಿಎಪಿ ಕೊರತೆಯಿದ್ದಲ್ಲಿ ಮುಂಚಿತವಾಗಿಯೇ ಸೂಕ್ತ ಕ್ರಮ ಕೈಗೊಳ್ಳುವುದು.
14. ಅಕಾಲಿಕ ಮಳೆಯಿಂದ ಮಾವು ಮುಂತಾದ ಬೆಳೆಗಳಿಗೆ ಹಾನಿಹಾಗಿರುವ ಬಗ್ಗೆ ವರದಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳುವುದು.

15. ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆ ಇಲ್ಲ. ಬೋರ್‍ವೆಲ್ ಕಂಪನಿಗಳ ಲಾಬಿಯಿಂದ ಬೇಡಿಕೆ ಸೃಷ್ಟಿಯಾಗುತ್ತದೆ. ಹಾಗಾಗಿ ಅಗತ್ಯವಿರುವಲ್ಲಿ ಮಾತ್ರ ಸಿಇಒ ಗಳ ಬಳಿ ಇರುವ ಅನುದಾನವನ್ನು ಬಳಸಿಕೊಳ್ಳುವುದು.

16. ಭೂಮಿ ಯೋಜನೆಯಡಿ ಜಿಲ್ಲೆಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದ ಮುಖ್ಯಮಂತ್ರಿಗಳು, ಭೂಮಿ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು. ಪ್ರಕರಣಗಳ ವಿಲೇವಾರಿಯನ್ನು 30 ದಿನಗಳೊಳಗೆ ಮಾಡುವುದು.

17. ಭೂ ಮಂಜೂರಾತಿ, ಭೂ ಪರಿವರ್ತನೆ, ಸರ್ವೆ ಇಲಾಖೆಯಲ್ಲಿ ಅಳತೆಗಾಗಿ ಬಾಕಿ ಇರುವ ಅರ್ಜಿಗಳು, ತಹಶೀಲ್ದಾರರ ಬಳಿ 3 ಮತ್ತು 9 ವಿಸ್ತೀರ್ಣ ವ್ಯತ್ಯಾಸದಿಂದ ತಿದ್ದುಪಡಿಗಾಗಿ ಬಾಕಿ ಇರುವ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡುವುದು.

18. ಎಲ್ಲಾ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಮಂಜೂರು ಮಾಡಲು ಕ್ರಮ ವಹಿಸುವುದು.

19. ಮೂಲಸೌಕರ್ಯ ಯೋಜನೆಗಳಲ್ಲಿ ಭೂ ಸ್ವಾಧೀನಕ್ಕೆ ವೇಗ ನೀಡಿ, ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಆದ್ಯತೆ ನೀಡುವುದು.
20. 72 ಗಂಟೆಗಳಲ್ಲಿ ಅರ್ಜಿ ವಿಲೇವಾರಿಯಾಗುವ ಬಗ್ಗೆ ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡುವುದು.

21. ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಜಿನೋಮ್ ಸೀಕ್ವೆನ್ಸಿಂಗ್ ಎಲ್ಲಾ ಪ್ರಕರಣಗಳಿಗೂ ಮಾಡುವ ಅಗತ್ಯವಿಲ್ಲ. 15-18 ವಯೋಮಾನದವರಿಗೆ ಶೇ 100ರಷ್ಟು ಲಸಿಕೆ ಹಾಕುವುದು.
22. ಗ್ರಾಮ ಒನ್ ಕೇಂದ್ರಗಳ ಸ್ಥಾಪನೆಯ ಸ್ಥಿತಿಗತಿ ವ್ಯವಸ್ಥೆ ಪರಿಪೂರ್ಣವಾಗಿರಬೇಕು. ಯೋಜನೆಯನ್ನು ಟಾಸ್ಕ್ ನಂತೆ ಕೈಗೊಳ್ಳಬೇಕು. ಪ್ರಾದೇಶಿಕ ಆಯುಕ್ತರು ಮೇಲ್ವಿಚಾರಣೆ ಮಾಡುವುದು.

23. ಗ್ರಾಮ ಒನ್ ಕೇಂದ್ರಗಳಲ್ಲಿ ಎಷ್ಟು ಅರ್ಜಿಗಳು ಬಂದಿವೆ, ಎಷ್ಟು ಪ್ರಮಾಣಪತ್ರಗಳ ವಿಲೇವಾರಿಯಾಗುತ್ತಿವೆ ಎಂದು ಜಿಲ್ಲಾಧಿಕಾರಿಗಳು ತಿಂಗಳಿಗೊಮ್ಮೆ ಪರಿಶೀಲಿಸುವುದು.

24. ಮಂಡ್ಯ, ಮೈಸೂರು, ದಕ್ಷಿಣ ಕನ್ನಡ , ಹಾಸನ, ಚಾಮರಾಜನಗರ , ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸ್ಥಾಪಿಸಬೇಕಿರುವ ಗ್ರಾಮ ಒನ್ ಕೇಂದ್ರಗಳನ್ನು ತಕ್ಷಣ ಪ್ರಾರಂಭ ಮಾಡಲು ಸೂಚಿಸಿದರು. ಈ ತಿಂಗಳೊಳಗೆ ಅನುಮೋದನೆ ನೀಡಿ ಉದ್ಘಾಟನೆಗೆ ಕ್ರಮ ವಹಿಸುವುದು.

25. ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಕಾಲಮಿತಿಯೊಳಗೆ ತಾಲ್ಲೂಕು ಮಟ್ಟದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಪ್ರತ್ಯೇಕ ಅಲ್ಪಾವಧಿ ಟೆಂಡರ್ ಕರೆಯುವುದು. ಯಾವುದೇ ಟೆಂಡರ್ ನಲ್ಲಿ ಎಲ್ – 1 ಗೆ ಕೊಡಬೇಕು. ಇಲ್ಲದಿದ್ದರೆ ಟೆಂಡರ್ ರದ್ದುಪಡಿಸುವುದು.

26. ಅಮೃತ್ ನಿರ್ಮಲ್ ನಗರ ಯೋಜನೆಯಡಿ ಬಾಕಿ ಇರುವ ಟೆಂಡರ್‍ಗಳನ್ನು ಕರೆಯುವುದು, ಈಗಾಗಲೇ ಟೆಂಡರ್ ಕರೆದಿರುವುದಕ್ಕೆ ಕಾರ್ಯಾದೇಶ ನೀಡುವುದು. ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು.

27. ನಗರ ಪ್ರದೇಶಗಳಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ: ಬಿ.ಆರ್.ಅಂಬೇಡ್ಕರ್ ವಿವಾಸ್ ಯೋಜನೆ- ನಗರದಡಿ ಫಲಾನುಭವಿಗಳ ಕನಿಷ್ಠ ಆಯ್ಕೆ ಮಾಡಿರುವ ಜಿಲ್ಲೆಗಳಾದ ಬೆಂಗಳೂರು ನಗರ, ಕಲಬುರ್ಗಿ, ಧಾರವಾಡ, ಹಾಸನ, ವಿಜಯನಗರ ಮೇ ಅಂತ್ಯದೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವುದು. ಈ ಬಗ್ಗೆ 15 ದಿನಗಳಲ್ಲಿ ಪ್ರಗತಿ ಕಡಿಮೆ ಇರುವ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸುವುದು.

28. ಪ್ರಧಾನಮಂತ್ರಿ ಆವಾಸ್ (ಎಹೆಚ್‍ಪಿ) ಯೋಜನೆಯಡಿ ಫಲಾನುಭವಿಗಳ ವಂತಿಕೆ ಮತ್ತು ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಮಂಜೂರಾತಿಗಾಗಿ ಜಿಲ್ಲಾಧಿಕಾರಿಗಳು ಕೂಡಲೇ ಬ್ಯಾಂಕರ್ ಗಳ ಸಭೆ ಕರೆದು ಕ್ರಮ ವಹಿಸುವುದು.

29. ಬೆಳಗಾವಿ, ಕಲಬುರ್ಗಿ, ಬೆಂಗಳೂರು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಐದು ಮೆಗಾ ಹಾಸ್ಟಲ್‍ಗಳು ಸ್ಥಾಪಿಸಲು ಕ್ರಮ ಕೈಗೊಳ್ಳುವುದು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.