ಕೌಟುಂಬಿಕ ದೌರ್ಜನ್ಯ ಕರ್ನಾಟಕದಲ್ಲೇ ಅಧಿಕ


Team Udayavani, May 9, 2022, 9:48 AM IST

1family

ಬೆಂಗಳೂರು: ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಕರ್ನಾಟಕದಲ್ಲೇ ಹೆಚ್ಚು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಕೇಂದ್ರ ಸರ್ಕಾರವು 2019-21ರ ಅವಧಿಯಲ್ಲಿ ನಡೆಸಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ರಾಜ್ಯದ ಶೇ.48ರಷ್ಟು ವಿವಾಹಿತ ಮಹಿಳೆ ಯರು(18-49ರ ವಯೋಮಾನ) ತಮ್ಮ ಮೇಲೆ ಪತಿ ಯಿಂದ ದೈಹಿಕ, ಭಾವನಾತ್ಮಕ ಹಾಗೂ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ ಎಂದು ಹೇಳಿಕೊಂಡಿದ್ದಾರೆ.

ಪತಿಯಿಂದ ಕಿರುಕುಳ, ಹಿಂಸಾಚಾರ ಅನುಭವಿಸುತ್ತಿರುವುದಾಗಿ ಹೇಳಿರುವವವರ ಪೈಕಿ ಕರ್ನಾಟದ ಮಹಿಳೆಯರೇ(ಶೇ.48) ಹೆಚ್ಚಿದ್ದರೆ, ಬಿಹಾರವು(ಶೇ.43) ಎರಡನೇ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ತೆಲಂಗಾಣ (ಶೇ.41), ಮಣಿಪುರ(ಶೇ.40), ತಮಿಳು ನಾಡು (ಶೇ.40), ಉತ್ತರಪ್ರದೇಶ(ಶೇ.39)ಗಳಿವೆ. ವಿಶೇಷವೆಂದರೆ, ಬಹುತೇಕ ಮಂದಿ ಮದುವೆಯಾದ ಮೊದಲ 2 ವರ್ಷದೊಳಗೇ ಪತಿಯಿಂದ ಹಿಂಸೆಗೆ ಒಳಗಾಗುತ್ತಿರುವುದಾಗಿ ಹೇಳಿದ್ದಾರೆ.

ದೂರುಗಳ ಸಂಖ್ಯೆ ಹೆಚ್ಚಳ

ಈ ವರದಿಗೆ ಪುಷ್ಟಿ ನೀಡುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಕೆಯಾದ ದೂರುಗಳು ಪೈಕಿಯೂ ಕೌಟುಂಬಿಕ ದೌರ್ಜನ್ಯದ ಆರೋಪಗಳೇ ಹೆಚ್ಚಿರುವುದು ಸ್ಪಷ್ಟವಾಗಿದೆ. 2020ರ ಮಾರ್ಚ್‌ನಿಂದ 22ರ ಏಪ್ರಿಲ್‌ವರೆಗೆ 1,107 ಕೌಟುಂಬಿಕ ದೌರ್ಜನ್ಯ ದೂರುಗಳು ಬಂದಿವೆ. ಈ ವರ್ಷದ ಏಪ್ರಿಲ್‌ವೊಂದರಲ್ಲೇ 35 ಮಂದಿ ಇಂಥ ದೂರುಗಳನ್ನು ನೀಡಿದ್ದಾರೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಈ ಹಿಂದೆ, 2018ರಲ್ಲಿ ಆಗಿನ ಸರ್ಕಾರ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಸಂಬಂಧ ನೇಮಕ ಮಾಡಿದ್ದ ಕಾಂಗ್ರೆಸ್‌ ನಾಯಕ ವಿ.ಎಸ್‌.ಉಗ್ರಪ್ಪ ನೇತೃತ್ವದ ಸಮಿತಿಯು, 6 ಸಾವಿರ ಪುಟಗಳ ವರದಿ ಸಲ್ಲಿಸಿತ್ತು. ಮಹಿಳಾ ದೌರ್ಜನ್ಯ ತಡೆಗೆ ತುರ್ತಾಗಿ ರಾಷ್ಟ್ರೀಯ ನೀತಿ ರೂಪಿಸುವಂತೆ ಶಿಫಾರಸು ಮಾಡಿತ್ತು. ಈಗ ಹೊರಬಿದ್ದಿರುವ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಕುರಿತು ಪ್ರತಿಕ್ರಿಯಿಸಿರುವ ಉಗ್ರಪ್ಪ ಅವರು, “ತ್ವರಿತಗತಿ ತೀರ್ಪು, ಸರ್ಕಾರಗಳು, ಸಂಘ- ಸಂಸ್ಥೆಗಳು, ಮಠಾಧೀಶರು, ವಿಚಾರವಂತರಿಂದ ಜನಜಾಗೃತಿಯಂಥ ಕ್ರಮ ಕೈಗೊಂಡರಷ್ಟೇ ಇಂಥ ಸಮಸ್ಯೆಗಳಿಗೆ ಪರಿಹಾರ ಸಾಧ್ಯ’ ಎಂದಿದ್ದಾರೆ.

ಇದನ್ನೂ ಓದಿ:ಪಿಎಸ್‌ಐ ನೇಮಕ ಪ್ರಕರಣ: ಸ್ಟ್ರಾಂಗ್‌ರೂಮ್‌ ಉಸ್ತುವಾರಿಯಲ್ಲೇ ಅಕ್ರಮ

ರಕ್ತಸಂಬಂಧದ ವಿವಾಹ: ರಾಜ್ಯಕ್ಕೆ 2ನೇ ಸ್ಥಾನ

ಭಾರತ ದಲ್ಲಿ ಶೇ.11ರಷ್ಟು ಮಂದಿ ರಕ್ತಸಂಬಂಧಿಗಳನ್ನೇ ವಿವಾಹವಾಗುತ್ತಿದ್ದಾರೆ ಎಂದು ಸಮೀಕ್ಷಾ ವರದಿ ಹೇಳಿದೆ. ಈ ವಿಚಾರದಲ್ಲಿ ಕರ್ನಾಟಕವು ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಇಲ್ಲಿ ಶೇ.27ರಷ್ಟು ಮಂದಿ ತೀರಾ ಹತ್ತಿರದ ಸಂಬಂಧಿಕರನ್ನೇ ಮದುವೆಯಾಗಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ತಮಿಳುನಾಡು (ಶೇ.28) ಪಡೆದಿದೆ.

ಮದ್ಯದಾಸರು ಹಳಿಗಳಲ್ಲೇ ಹೆಚ್ಚು ಮದ್ಯಪಾನ ಮಾಡುವುದರಲ್ಲಿ (15 ವರ್ಷ ಮೇಲ್ಪಟ್ಟವರು) ನಗರ ಪ್ರದೇಶಗಳ ಬದಲಿಗೆ ಹಳ್ಳಿಗರೇ ಮುಂದು ಎಂದಿದೆ ಈ ಸಮೀಕ್ಷೆ. ರಾಜ್ಯದಲ್ಲಿ ಸರಾಸರಿ ಶೇ.16.6ರಷ್ಟು ಮಂದಿ ಮದ್ಯದಾಸರಾಗಿದ್ದಾರೆ. ನಗರಪ್ರದೇಶಗಳ ಶೇ.15.4ರಷ್ಟು ಪುರುಷರು ಮದ್ಯಪಾನ ಮಾಡುವವರಾಗಿದ್ದರೆ, ಮಹಿಳೆಯರ ಪ್ರಮಾಣ ಶೇ.0.9 ಆಗಿದೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಶೇ.17.4ರಷ್ಟು ಪುರುಷರು, ಶೇ.1ರಷ್ಟು ಮಹಿಳೆಯರು ಮದ್ಯದಾಸರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಇಂದಿನ ಜೀವನ ಶೈಲಿ, ವೃತ್ತಿ ಒತ್ತಡದಿಂದಾಗಿ ಸಣ್ಣಪುಟ್ಟ ಮನಸ್ತಾಪಗಳೇ ದೊಡ್ಡದಾಗಿ ಪತಿ-ಪತ್ನಿ ನಡುವೆ ಬಿರುಕು ಮೂಡಿಸುತ್ತಿವೆ. ಅಹಂ ಬಿಟ್ಟು ಪರಸ್ಪರ ಕುಳಿತು ಮಾತುಕತೆ ನಡೆಸಿ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಪ್ರಮೀಳಾ ನಾಯ್ಡು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

-ಹಲೀಮತ್ಸಅದಿಯಾ

ಟಾಪ್ ನ್ಯೂಸ್

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.