ತೇಲುವ ಸೇತುವೆಗೆ ಮೂರೇ ದಿನದಲ್ಲಿ ಏನಾಯ್ತು ? ಪ್ರವಾಸಿಗರೇ, ಇಲ್ಕೇಳಿ
What Happened To Floating Bridge
Team Udayavani, May 9, 2022, 1:30 PM IST
ಇಲ್ಲಿನ ಪ್ರಮುಖ ಪ್ರವಾಸಿ ತಾಣವಾದ ಮಲ್ಪೆಯ ಬೀಚ್ ನಲ್ಲಿ ನಿರ್ಮಿಸಲಾಗಿದ್ದ ತೇಲುವ ಸೇತುವೆ ಉದ್ಘಾಟನೆಗೊಂಡು ವಾರದ ಒಳಗೆ ಕಡಲಿನ ಅಬ್ಬರಕ್ಕೆ ಹಾನಿಗೊಂಡಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಸೇತುವೆಯ ಲಾಕ್ ತೆಗೆಯುವ ವೇಳೆ ಸೇತುವೆಯ ಭಾಗಗಳು ಕಳಚಿಕೊಂಡಿವೆ ಎಂದು ತಿಳಿದು ಬಂದಿವೆ. ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಸುರಕ್ಷೆಯ ದೃಷ್ಟಿಯಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ಸ್ವಯಂಸೇವಕರು ಕಟ್ಟೆಚ್ಚರ ವಹಿಸಿದ್ದರು. ಇಲ್ಲಿನ ಜೀವ ರಕ್ಷಕ ತಂಡ ಎಲ್ಲರ ಮೇಲೂ ನಿಗಾ ಇರಿಸಿ, ನೀರಿಗಿಳಿಯಲು ನಿಷೇಧ ಹೇರಿತ್ತು. ಸಮುದ್ರದ ಅಲೆಗಳ ಒತ್ತಡ ಬೆಳಗ್ಗಿನಿಂದಲೇ ಹೆಚ್ಚು ಕಂಡುಬಂದಿದ್ದು, ರವಿವಾರ ಮಧ್ಯಾಹ್ನದ ಬಳಿಕ ಗಾಳಿಯ ವೇಗಕ್ಕೆ ಅಲೆಗಳು ತೀವ್ರತೆ ಪಡೆದುಕೊಂಡಿದ್ದವು. ಹಾಗಾಗಿ ಮಲ್ಪೆ ಬೀಚ್ನಲ್ಲಿ ಅಪರಾಹ್ನ 4ರ ಬಳಿಕ ಯಾವುದೇ ವಾಟರ್ ಸ್ಪೋರ್ಟ್ಸ್ ನಡೆಸಲು ಆವಕಾಶ ನೀಡಲಿಲ್ಲ.