ಬಲ್ಲಾಳ್ಭಾಗ್ ಸರಣಿ ಅಪಘಾತ ಪ್ರಕರಣ: ಚಾಲಕನ ಪರೀಕ್ಷಾ ವರದಿ ನೆಗೆಟಿವ್: ಎನ್.ಶಶಿಕುಮಾರ್
Team Udayavani, May 9, 2022, 5:38 PM IST
ಮಂಗಳೂರು: ಕಳೆದ ಎಪ್ರಿಲ್ನಲ್ಲಿ ನಗರದ ಬಲ್ಲಾಳ್ಭಾಗ್ನಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕನ ಡ್ರಗ್ಸ್, ಮದ್ಯ ಸೇವನೆ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಅಪಘಾತದಲ್ಲಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಚಾಲಕನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿತ್ತು. ಅನಂತರ ಮಹಿಳೆ ಮೃತಪಟ್ಟಿದ್ದು ಚಾಲಕನ ವಿರುದ್ಧ ಕೊಲೆಯಲ್ಲದ ಮಾನವ ಹತ್ಯೆ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ಕಾರು ಚಾಲಕ ಡ್ರಗ್ಸ್ ಅಥವಾ ಮದ್ಯ ಸೇವಿಸಿದ ಬಗ್ಗೆ ಸಂದೇಹ ಉಂಟಾಗಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ವೈದ್ಯಕೀಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಅತೀವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿದ್ದ ಬಿಎಂಡಬ್ಲ್ಯು ಕಾರು ಡಿವೈಡರ್ ಹಾರಿ ಮೂರು ವಾಹನಗಳಿಗೆ ಢಿಕ್ಕಿ ಹೊಡೆದಿತ್ತು. ಸ್ಕೂಟರ್ ಸವಾರೆ ಗಂಭೀರವಾಗಿ ಗಾಯಗೊಂಡು ಕೆಲವು ದಿನಗಳ ಅನಂತರ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.