ಮಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಾಸಕ ಎಚ್.ಪಿ.ಮಂಜುನಾಥ್ ಆಗ್ರಹ
Team Udayavani, May 9, 2022, 10:42 PM IST
ಹುಣಸೂರು : ತಾಲೂಕಿನಲ್ಲಿ ಕಳೆದ 15 ದಿನಗಳ ಪ್ರಕೃತಿ ವಿಕೋಪಕ್ಕೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಗೆ ಈವರೆಗೆ 235 ಮನೆಗಳಿಗೆ ಹಾನಿಯಾಗಿದೆ, ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ನಷ್ಟವಾಗಿದ್ದು, ಸರಕಾರ ತ್ವರಿತವಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಾಸಕ ಎಚ್.ಪಿ.ಮಂಜುನಾಥ್ ಒತ್ತಾಯಿಸಿದರು.
ಸೋಮವಾರ ಸಂಜೆ ತಾಲೂಕು ಕಚೇರಿ ಸಭಾಂಗಣದಲ್ಲಿ ಮಳೆ-ಬಿರುಗಾಳಿ ಹಾನಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳ ಸಭೆಯಲ್ಲಿ ಮಾತನಾಡಿ ಎಲ್ಲೆಡೆ ಮಳೆ ಹಾನಿ ಸಾಕಷ್ಟಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲಾ, ಸರಕಾರದ ಬಗ್ಗೆ ಜನರಲ್ಲಿ ಭ್ರಮನಿರಸನವಾಗಿದೆ. ಕಳೆದ ಎರಡು ವರ್ಷಗಳ ಮಳೆ ಹಾನಿಗೆ ಸಂಬಂಧಿಸಿದಂತೆ ಇನ್ನು ಕೆಲವರಿಗೆ ಮನೆಗಳ ಪರಿಹಾರದ ಹಣ ಫಲಾನುಭವಿಗಳಿಗೆ ತಲುಪಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಬಡವರಿಗೆ ಸ್ಪಂದಿಸಿ;
ತಾಲೂಕಲ್ಲಿ ನಿತ್ಯ ಬಿರುಗಾಳಿ ಮಳೆಯ ಉಪಟಳವಿದ್ದದ್ದೇ, ಆದರೆ, ಕೆಲ ಗ್ರಾಮಲೆಕ್ಕಿಗರು, ಪಿಡಿಓಗಳು ಸ್ಪಂದಿಸುತ್ತಿಲ್ಲವೆಂಬ ದೂರುಗಳಿವೆ. ಹಾನಿ ಸಂಭವಿಸಿದ ತಕ್ಷಣವೇ ಸ್ಪಂದಿಸಿ ಮಾನವೀಯತೆ ಮೆರೆಯಿರೆಂದು ಹುರಿದುಂಬಿಸಿದರು. ಹಾನಿ ಅಂದಾಜನ್ನು ಜಿ.ಪಂ.ಇಂಜಿನಿಯರಿಂಗ್ ವಿಭಾಗದವರು ಸಹ ತಕ್ಷಣವೇ ವರದಿ ನೀಡುವುದರಿಂದ ಬೇಗ ಪರಿಹಾರ ದೊರೆಯಲಿದೆ ಎಂದು ಸೂಚಿಸಿದರು.
ತಾಲೂಕಲ್ಲಿ ಚೆಸ್ಕಾಂ, ಕಂದಾಯ, ನಗರಸಭೆ, ಗ್ರಾಮೀಣಾಭಿವೃದ್ದಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಶ್ಲಾಘಿಸಿ, ಹನಗೋಡು ಉಪ-ತಹಶೀಲ್ದಾರ್ ಚೆಲುವರಾಜು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಿರೆಂದು ಸಭೆಯಲ್ಲೇ ತರಾಟೆಗೊಳಪಡಿಸಿ, ಬದ್ದತೆಯಿಂದ ಕೆಲಸ ಮಾಡಿರೆಂದು ಎಚ್ಚರಿಸಿದರು. ಸಭೆಯಲ್ಲಿ ತಹಶೀಲ್ದಾರ್ ಡಾ.ಅಶೋಕ್, ಇಓ ಗಿರೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.