ಐಸಿಸಿ ಕಿವುಡರ ವಿಶ್ವಕಪ್ -2022:ಭಾರತ ತಂಡದಲ್ಲಿ ಕುಂದಾಪುರದ ಪೃಥ್ವಿರಾಜ್ ಶೆಟ್ಟಿಗೆ ಸ್ಥಾನ
ತಂಡದಲ್ಲಿ ಸ್ಥಾನ ಪಡೆದ ಏಕೈಕ ಕನ್ನಡಿಗ; ಗುರಿ-ಸಾಧನೆಗೆ ಅಡ್ಡಿಯಾಗದ ನ್ಯೂನತೆ
Team Udayavani, May 10, 2022, 7:35 AM IST
ಕುಂದಾಪುರ: ಮುಂಬರುವ ಸೆಪ್ಟಂಬರ್‌ನಲ್ಲಿ ಕತಾರ್‌ನ ದೋಹಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಿವುಡರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತದ ಅಂತಿಮ 15 ಮಂದಿಯ ತಂಡವನ್ನು ಪ್ರಕಟಿಸಲಾಗಿದ್ದು, ಕುಂದಾಪುರ ಮೂಲದ ಪೃಥ್ವಿರಾಜ್ ಶೆಟ್ಟಿ ಹುಂಚನಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವಕಪ್‌ಗೆ ಆಯ್ಕೆಯಾದ ರಾಜ್ಯದ ಏಕೈಕ ಕ್ರಿಕೆಟಿಗರಾಗಿದ್ದಾರೆ.
ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರನಾಗಿರುವ ಪೃಥ್ವಿರಾಜ್ ಅವರು ವೇಗದ ಬೌಲರ್ ಮಾತ್ರವಲ್ಲದೆ, ಕೆಳ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್ ಆಗಿ ಮಿಂಚುವ ಸಾಮರ್ಥ್ಯ ಹೊಂದಿದ್ದಾರೆ. 31 ವರ್ಷ ಪ್ರಾಯದ ಪೃಥ್ವಿರಾಜ್ ಆಟವಾಡುವ ಬಳಗದಲ್ಲಿ ಸ್ಥಾನ ಪಡೆಯುವ ವಿಶ್ವಾಸ ಹೊಂದಿದ್ದಾರೆ.
ಏಕೈಕ ಕನ್ನಡಿಗ
ಕಳೆದ ವರ್ಷ ಅಂತಿಮ 41 ಮಂದಿಯ ಸಂಭಾವ್ಯ ತಂಡವನ್ನು ಅಂತಿಮಗೊಳಿಸಲಾಗಿದ್ದು, ಅದರಲ್ಲಿ ಪೃಥ್ವಿರಾಜ್ ಅವರೊಂದಿಗೆ ರಾಜ್ಯದ ಇನ್ನಿಬ್ಬರು ಆಟಗಾರರಾದ ಅನ್ಸಿಲ್ ಪಿಂಟೋ ಹಾಗೂ ಶೋಯಿಬ್ ಮಹಮ್ಮದ್ ಸ್ಥಾನ ಪಡೆದಿದ್ದರು. ಆದರೆ ಅಂತಿಮ 15 ಸದಸ್ಯರ ತಂಡದ ಆಯ್ಕೆಯಲ್ಲಿ ಪೃಥ್ವಿರಾಜ್ ಅವರಿಗೆ ಮಾತ್ರ ಅದೃಷ್ಟ ಒಲಿದು ಬಂದಿದೆ. ದಿಲ್ಲಿಯಲ್ಲಿ ಕಳೆದ 4 ದಿನಗಳಿಂದ ನಡೆದ ಆಯ್ಕೆ ಶಿಬಿರದ ಮೂಲಕ ತಂಡವನ್ನು ಆಯ್ಕೆ ಮಾಡಲಾಗಿದೆ. ಇನ್ನು 15 ದಿನಗಳ ಕಾಲ ಆಯ್ಕೆಯಾದ 15 ಮಂದಿಗೆ ಅಲ್ಲಿಯೇ ತರಬೇತಿ ನಡೆಯಲಿದೆ.
ಸಾಧನೆಗೆ ಅಡ್ಡಿಯಾಗದ ನ್ಯೂನತೆ
ಪೃಥ್ವಿರಾಜ್ ಹುಟ್ಟು ಕಿವುಡರಾಗಿದ್ದರೂ, ಕ್ರಿಕೆಟ್‌ನಲ್ಲಿ ಸಾಧನೆ ಮಾಡಬೇಕು ಎನ್ನುವ ಹಂಬಲಕ್ಕೆ ಈ ನ್ಯೂನತೆ ಅಡ್ಡಿಯಾಗಲೇ ಇಲ್ಲ. ವಿಶೇಷ ಕ್ರಿಕೆಟ್ ಟೂರ್ನಿಗಳಲ್ಲಿ ಮಾತ್ರವಲ್ಲದೆ ಎಲ್ಲರಂತೆ ಎಂಪಿಲ್‌ನಲ್ಲಿ ಐಕಾನ್ ಆಟಗಾರನಾಗಿ, ಕುಂದಾಪುರದ ಟಾರ್ಪಡೋಸ್ ತಂಡದ ಆಟಗಾರರಾಗಿಯೂ ಮಿಂಚಿದ್ದಾರೆ. ಕರ್ನಾಟಕ ಕಿವುಡರ ಕ್ರಿಕೆಟ್ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿದ್ದಾರೆ.
ಹೊಸದಿಲ್ಲಿಯ ಆಯ್ಕೆ ಶಿಬಿರದಲ್ಲಿರುವ ಪೃಥ್ವಿರಾಜ್ ಶೆಟ್ಟಿಯವರು “ಉದಯವಾಣಿ’ ಜತೆ ಮಾತನಾಡಿದ್ದು, ಆಯ್ಕೆಯಾದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.
ಅಂತಿಮ 15ರ ತಂಡಕ್ಕೆ ಆಯ್ಕೆಯಾದ ಬಗ್ಗೆ ಹೇಗನ್ನಿಸುತ್ತಿದೆ?
ತುಂಬಾ ಖುಷಿಯಾಗುತ್ತಿದೆ. ಈ ಸಂತಸವನ್ನು ಹೇಗೆ ವ್ಯಕ್ತಪಡಿಸಬೇಕು ಅನ್ನುವುದೇ ತಿಳಿಯುತ್ತಿಲ್ಲ. ಪದಗಳೇ ಇಲ್ಲ.
ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿದೆಯೇ?
ಆ ನಿಟ್ಟಿನಲ್ಲಿ ಕಠಿನ ಪರಿಶ್ರಮ ಪಡುತ್ತಿದ್ದೇನೆ. ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದೇನೆ. ಖಂಡಿತ ಅವಕಾಶ ಸಿಗುವ ವಿಶ್ವಾಸವಿದೆ.
ನ್ಯೂನತೆ ಮೆಟ್ಟಿನಿಂತು ಈ ಮಟ್ಟಕ್ಕೆ ಸಾಧನೆ ಮಾಡಿರುವ ಬಗ್ಗೆ ?
ನನಗೆ ಚಿಕ್ಕಂದಿನಿಂದಲೂ ಕ್ರಿಕೆಟ್ ಆಟವೆಂದರೆ ಅತೀವ ಇಷ್ಟ. ನನ್ನ ನ್ಯೂನತೆ ಬಗ್ಗೆ ಯಾವತ್ತಿಗೂ ಯೋಚಿಸಿಲ್ಲ. ಕ್ರಿಕೆಟ್‌ನಲ್ಲಿ ಈ ಮಟ್ಟಕ್ಕೆ ಬೆಳೆಯಲು ಪೋಷಕರು, ಮನೆಯವರು, ಸಂಬಂಧಿಕರು, ಸ್ನೇಹಿತರು, ಕೋಚ್‌ಗಳು, ಅವಕಾಶ ನೀಡಿದ ತಂಡಗಳ ಪ್ರೋತ್ಸಾಹ, ಸಹಕಾರವೇ ಕಾರಣ. ಅವರೆಲ್ಲರೂ ನನ್ನೊಂದಿಗಿದ್ದರಿಂದ ಇಂದು ಈ ಸಾಧನೆ ನನ್ನಿಂದ ಸಾಧ್ಯವಾಗಿದೆ.
ಭಾರತ ತಂಡ ಹೇಗಿದೆ? ಬಲಾಡ್ಯ ತಂಡಗಳು ಯಾವುವು?
ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಸಶಕ್ತವಾಗಿದ್ದು, ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ವಿಶ್ವಕಪ್ ಗೆಲ್ಲುವ ದೃಢ ವಿಶ್ವಾಸವಿದೆ.
– ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.