ಸಿಎಂ ದಿಲ್ಲಿಗೆ ಹೊರಟರೂ ಆಕಾಂಕ್ಷಿಗಳಿಗಿಲ್ಲ ಉತ್ಸಾಹ!: ಇದರ ಗುಟ್ಟೇನು?
ಆಕಾಂಕ್ಷಿಗಳು ಮೌನಕ್ಕೆ ಶರಣಾಗಲು ಇದೇ ಕಾರಣ?
Team Udayavani, May 10, 2022, 10:42 AM IST
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದಿಲ್ಲಿಗೆ ಪ್ರಯಾಣ ಬೆಳೆಸುತ್ತಿದ್ದರೂ, ಸಂಪುಟ ಸೇರ್ಪಡೆಯ ಆಕಾಂಕ್ಷಿಗಳಿಗೆ ಮಾತ್ರ ಈ ಬಾರಿ ಉತ್ಸಾಹವೇ ಇಲ್ಲ ಎಂಬಂತಾಗಿದೆ.
ಸಂಪುಟ ಪುನಾರ್‌ರಚನೆ ಹಾಗೂ ವಿಸ್ತರಣೆ ಎಂಬುದು ಬಿಜೆಪಿ ಶಾಸಕರ ಪಾಲಿಗೆ ” ನಾಳೆ ಬಾ” ಕತೆಯಂತೆ ಆಗಿದೆ. ಪ್ರತಿ ಬಾರಿ ಸಿಎಂ ದಿಲ್ಲಿಗೆ ತೆರಳುವಾಗಲೂ ಅವರ ಮನೆಗೆ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದ ಆಕಾಂಕ್ಷಿಗಳು ಈ ಬಾರಿ ಸುಳಿದಿಲ್ಲ. ಬೇರೆ ನಾಯಕರ ಮನೆಗೂ ಎಡತಾಕುತ್ತಿಲ್ಲ. ಬಹುತೇಕ ಆಕಾಂಕ್ಷಿಗಳು ಮೌನಕ್ಕೆ ಶರಣಾಗಿದ್ದು, ಕೊಟ್ಟರೆ ನೋಡೋಣ ಎಂಬ ಸ್ಥಿತಿಗೆ ತಲುಪಿದ್ದಾರೆ.
ಇದರ ಜತೆಗೆ ಬಿಜೆಪಿ ಸಂಘಟನಾ ಮನಸ್ಥಿತಿಗೆ ಬಂದು ತಲುಪಿದೆ. ಹಳೆ ಮೈಸೂರು ಭಾಗದಲ್ಲಿ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಅನ್ಯ ಪಕ್ಷದ ನಾಯಕರನ್ನು ಪಕ್ಷಕ್ಕೆ ಕರೆತರಲಾಗುತ್ತಿದೆ. ಇದೆಲ್ಲವೂ ಪಕ್ಷ ಚುನಾವಣಾ ಸಿದ್ಧತೆಗೆ ಇಳಿಯುತ್ತಿರಯವುದರ ಸೂಚನೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು: 6 ಮಂದಿ ಗಂಭೀರ
ಹೀಗಾಗಿ ಈ ಹಂತದಲ್ಲಿ ಸಚಿವ ಸ್ಥಾನ ಪಡೆಯುವುದರಿಂದ ಯಾವುದೇ ಪ್ರಯೋಜನವಿಲ್ಲ. ಇನ್ನು ಮೂರ್ನಾಲ್ಕು ತಿಂಗಳು ಕಳೆದ ನಂತರ ಪ್ರತಿಯೊಬ್ಬ ಶಾಸಕರೂ ತಮ್ಮ ಕ್ಷೇತ್ರಕ್ಕೆ ಮರಳುವುದು ಅನಿವಾರ್ಯವಾಗಲಿದೆ. ಇಲ್ಲವಾದರೆ ಕ್ಷೇತ್ರದಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ. ಈ ಹಂತದಲ್ಲಿ ಸಚಿವ ಸ್ಥಾನ ಪಡೆಯುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದು ಆಕಾಂಕ್ಷಿಗಳ ಅಭಿಪ್ರಾಯ. ಹೀಗಾಗಿ ಈ ಬಾರಿ ಸಿಎಂ ದಿಲ್ಲಿ ಭೇಟಿಗೆ ಹಿಂದಿನ ಮಹತ್ವ ಶಾಸಕರ ವಲಯದಿಂದ ಲಭ್ಯವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.