ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯ ನಿರ್ಮಿಸಿದ ರೈತ ದಂಪತಿ
Team Udayavani, May 10, 2022, 5:38 PM IST
ರಾಮನಗರ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿ ಸಲು ಗ್ರಾಮಾಂತರ ಪ್ರದೇಶಗಳ ಅಭ್ಯರ್ಥಿಗಳಿಗೂ ಆಸಕ್ತಿ ಇದೆ. ಆದರೆ, ಅಧ್ಯಯನಕ್ಕೆ ಅವರೆಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿನ ಗ್ರಂಥಾಲಯಗಳನ್ನು ಅವಲಂಭಿಸಬೇಕಾಗಿದೆ. ತಾಲೂಕಿನ ಬಿಡದಿ ಹೋಬಳಿ ಕಾಕರಾಮನಹಳ್ಳಿಯಲ್ಲಿ ರೈತ ದಂಪತಿ ತಮ್ಮ ಭಾಗದ ವಿದ್ಯಾರ್ಥಿಗಳಿಗೆ ಇದ್ದ ಈ ಕೊರತೆಯನ್ನು ನೀಗಿಸಲು ಮುಂದಾಗಿದ್ದಾರೆ.
ಕಾಕರಾಮನಹಳ್ಳಿ ಗ್ರಾಮದ ರೈತ ಚಿಕ್ಕಮರಿಯಣ್ಣ ಮತ್ತು ಅವರ ಪತ್ನಿ ಸಾಕಮ್ಮ ಈ ಪ್ರಯತ್ನ ಆರಂಭಿಸಿದ್ದಾರೆ. ತಮ್ಮ ಸ್ವಂತ ಕಟ್ಟಡವೊಂದರಲ್ಲಿ ಗ್ರಂಥಾಲಯವನ್ನು ಸ್ಥಾಪಿಸಿ, ಅಧ್ಯಯನಕ್ಕೆ ಟೇಬಲ್‌ಗಳು, ಕುರ್ಚಿಗಳನ್ನು ಅಳವಡಿಸಿದ್ದಾರೆ. ಈ ವ್ಯವಸ್ಥೆಗೆ ದಂಪತಿ ಈಗಾಗಲೆ ಸಾವಿರಾರು ರೂ. ವೆಚ್ಚ ಮಾಡಿದ್ದಾರೆ. ಅಭ್ಯ ರ್ಥಿಗಳು ಈ ವ್ಯವಸ್ಥೆಯನ್ನು ಉಚಿತವಾಗಿ ಬಳಸಿಕೊಳ್ಳಬಹುದಾಗಿದೆ.
ನೂರಾರು ಪುಸ್ತಕ ಸಂಗ್ರಹ: ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಅತ್ಯಗತ್ಯವಾಗಿರುವ ನೂರಾರು ಪುಸ್ತಕಗಳನ್ನು ಶೇಖರಿಸಿದ್ದಾರೆ. ಕಟ್ಟಡದ ಮಹಡಿಯಲ್ಲಿ ಶೀಟುಗಳನ್ನು ಅಳವಡಿಸಿ ಸುಮಾರು 40 ಮಂದಿ ಒಟ್ಟಿಗೆ ಕುಳಿತು ಪ್ರಶಾಂತವಾಗಿ ಓದು, ಬರಹ, ಅಧ್ಯಯನ ದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಕಾಕರಾಮನಹಳ್ಳಿಯ ಪ್ರಶಾಂತ ವಾತಾವರಣದಲ್ಲಿ ಗಾಳಿ, ಬೆಳಕು ಧಾರಾಳವಾಗಿ ಲಭಿಸುವ ಈ ವ್ಯವಸ್ಥೆಯ ಬಗ್ಗೆ ಸ್ಥಳೀ ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈ ಭಾಗದ ಅನೇಕ ವಿದ್ಯಾರ್ಥಿಗಳು ನೂರಾರು ರೂ., ಕೊಟ್ಟು ಪುಸ್ತಕ ಖರೀದಿ ಮಾಡಲಾಗುವುದಿಲ್ಲ. ಅಧ್ಯಯನ ಮಾಡಬೇಕಾದರೆ ಪಟ್ಟಣ, ನಗರಗಳಿಗೆ ಹೋಗಬೇಕಾಗಿದೆ. ಕೆಲವರು ಬೆಂಗಳೂರು ನಗರಕ್ಕೆ ಹೋಗಬೇಕಾದ ಅನಿವಾರ್ಯವಿದೆ. ಪದೇ ಪದೇ ವೆಚ್ಚ ಮಾಡಲು ಆ ಅಭ್ಯರ್ಥಿಗಳ ಕುಟುಂಬಗಳು ಆರ್ಥಿಕ ಸಬಲರಾಗಿಲ್ಲ. ಹೀಗಾಗಿ ತಾವು ತಮ್ಮ ಕಟ್ಟಡದಲ್ಲಿ ಈ ವ್ಯವಸ್ಥೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
ಪುಸ್ತಕ ನೀಡಲು ಮನವಿ: ಸದ್ಯ ಗ್ರಂಥಾಲಯದಲ್ಲಿ ಸುಮಾರು 50 ಸಾವಿರ ರೂ., ಮೌಲ್ಯದ ಪುಸ್ತಕಗಳ ಸಂಗ್ರಹವಿದೆ. ಆದರೆ, ಇಷ್ಟು ಪುಸ್ತಕಗಳು ಅಧ್ಯಯನಕ್ಕೆ ಸಾಕಾಗುವುದಿಲ್ಲ. ಹೀಗಾಗಿ ಪುಸ್ತಕಗಳ ಕೊಡುಗೆ ನೀಡುವಂತೆ ರೈತ ದಂಪತಿ ಚಿಕ್ಕಮರಿಯಣ್ಣ ಮತ್ತು ಸಾಕಮ್ಮ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಪುಸ್ತಕ ದಾನಿಗಳು ಗ್ರಂಥಾಲಯದ ವಿಳಾಸಕ್ಕೆ ಪುಸ್ತಕಗಳನ್ನು ಕಳುಹಿಸಿಕೊಡಬಹುದು ಎಂದು ಮನವಿ ಮಾಡಿದ್ದಾರೆ.
ಸ್ಮಾರ್ಟ್ ಕ್ಲಾಸ್‌ಗೆ ಚಿಂತನೆ: ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನಕ್ಕೆ ಪುಸ್ತಕಗಳ ಜೊತೆಗೆ ಜಾಲತಾಣಗಳಲ್ಲಿ ಲಭ್ಯವಾಗುವ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಒದಗಿಸುವ ಆಲೋಚನೆ ಈ ದಂಪತಿಗಿದೆ. ಜಾಲ ತಾಣಗಳಲ್ಲಿ ಆನ್‌ಲೈನ್ ಕೋಚಿಂಗ್ ತರಗತಿಗಳು ನಡೆಯುತ್ತವೆ. ಈ ತರಗತಿಗಳನ್ನು ಇಲ್ಲಿರುವ ವಿದ್ಯಾ ರ್ಥಿಗಳಿಗೆ ಬಿತ್ತರಿಸುವ ವ್ಯವಸ್ಥೆ ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪನೆಗೂ ದಂಪತಿ ಚಿಂತನೆ ನಡೆಸಿದ್ದಾರೆ.
ಈ ಭಾಗದ ವಿದ್ಯಾರ್ಥಿಗಳು ಸಾಮೂಹಿಕವಾಗಿ ಆನ್ ಲೈನ್ ತರಗತಿಗಳಲ್ಲಿ ಭಾಗವಹಿಸಿ, ಪರಸ್ಪರ ಚರ್ಚೆ ಮಾಡಲು ಅನುಕೂಲವಾಗುತ್ತದೆ ಎಂದು ಉದ್ದೇಶಿಸಿದ್ದಾರೆ. ಈ ವ್ಯವಸ್ಥೆಯ ಸ್ಥಾಪ ನೆಗೂ ಅವರು ಆಸಕ್ತ ರಿಂದ ಸಹಕಾರ ಬಯಸಿದ್ದಾರೆ.
ತಜ್ಞರಿಗೆ ಆಹ್ವಾನ: ಹಳ್ಳಿಗಾಡಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿ ಸಲು ಅನುಕೂಲವಾಗುವಂತೆ ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಿ ಉನ್ನತ ಹುದ್ದೆ ಗಳಲ್ಲಿರುವ ಅಧಿಕಾರಿಗಳು ಮತ್ತು ಖಾಸಗಿ ವಲಯದಲ್ಲಿರುವ ಆಸಕ್ತರನ್ನು ಆಹ್ವಾನಿಸಿ, ಇಲ್ಲಿಗೆ ಬರುವ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ, ಸಲಹೆಗಳನ್ನು ಕೊಡಸುವ ಉದ್ದೇಶವನ್ನು ದಂಪತಿ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ತರಬೇತಿ ಪಡೆಯಲು ವ್ಯವಸ್ಥೆಯ ಕೊರತೆಯಿಂದಾಗಿ ವಂಚಿತರಾಗಬಾರದು ಎಂಬುದಷ್ಟೇ ತಮ್ಮ ಉದ್ದೇಶ ಎಂದು ತಿಳಿಸಿದ್ದಾರೆ.
ಈ ಗ್ರಂಥಾಲಯ ಎಲ್ಲಿದೆ? : ಬಿಡದಿ ಪಟ್ಟಣದಿಂದ ಕೇವಲ ಐದು ಕಿ.ಮೀ ದೂರದಲ್ಲಿ ಕಾಕರಾಮನಹಳ್ಳಿ ಗ್ರಾಮವಿದೆ. ಗ್ರಾಮದಲ್ಲಿ ಬಿಡದಿ-ಗಾಣಕಲ್ ಮುಖ್ಯರಸ್ತೆಯ ಮಗ್ಗುಲಲ್ಲೇ ಗ್ರಂಥಾಲಯ ಕಟ್ಟಡವಿದೆ. ಬಿಡದಿಯ ನಲ್ಲಿಗುಡ್ಡೆಕೆರೆ ಮಾರ್ಗವಾಗಿ ಶೆಟ್ಟಿಗೌಡನದೊಡ್ಡಿ, ಎಂ.ಕರೇನಹಳ್ಳಿ ಮುಖೇನ ಕಾಕರಾಮನಹಳ್ಳಿ ಗ್ರಾಮವನ್ನು ತಲುಪಬಹುದು. ಬಿಡದಿಯಿಂದ ಸಾರಿಗೆ ಸಂಸ್ಥೆ ಬಸ್ ಸೌಲಭ್ಯವೂ ಉತ್ತಮವಾಗಿದೆ. ಹೆಚ್ಚಿನ ಮಾಹಿತಿಗಾಗಿ 8310175517 ಸಂಖ್ಯೆ ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.