ಕೊಲ್ಲೂರು: ಕುಖ್ಯಾತ ದರೋಡೆಕೋರನ ಬಂಧನ
Team Udayavani, May 10, 2022, 9:24 PM IST
ಸಾಂದರ್ಭಿಕ ಚಿತ್ರ.
ಕೊಲ್ಲೂರು: ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಅನೇಕ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರ ವಿಜಯ ಪೂಜಾರಿಯನ್ನು ಬೈಂದೂರು ಸರ್ಕಲ್ ಇನ್‌ಸ್ಪೆಕ್ಟರ್ ಸಂತೋಷ ಕಾಯ್ಕಿಣಿ ನೇತೃತ್ವದ ಅಪರಾಧ ಪತ್ತೆ ದಳದ ತಂಡ ಮುಂಬಯಿಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಮೇ 19ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನಿಂದ 24.4 ಗ್ರಾಂ ತೂಕದ ಒಂದು ಚಿನ್ನದ ಸರ 38.6 ಗ್ರಾಂ ತೂಕದ ಕರಿಮಣಿ ಇರುವ ಚಿನ್ನದ ಮಾಂಗಲ್ಯ ಸರ, ಮೋಟಾರ್ ಸೆ„ಕಲ್, ಮೊಬೈಲ್ ಸಹಿತ 3,25,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಎಸ್.ಟಿ. ಸಿದ್ಧಲಿಂಗಪ್ಪ ಹಾಗೂ ಶ್ರೀಕಾಂತ್ ಕೆ. ಪೊಲೀಸ್ ಉಪಾ ಧೀಕ್ಷಕರ ಕುಂದಾಪುರ ವಿಭಾಗದವರ ಸೂಚನೆಯಂತೆ ಸಂತೋಷ ಕಾಯ್ಕಿಣಿ, ವಿನಯ ಎಂ. ಗೊಲ್ಲಹಳ್ಳಿ, ತನಿಖಾ ಪಿಎಸ್‌ಐ ,ಬೈಂದೂರು ಪೊಲೀಸ್ ಠಾಣೆ ಹಾಗೂ ಅಪರಾಧ ವಿಭಾಗದ ಸಿಬಂದಿ ಮೋಹನ ಪೂಜಾರಿ, ಶ್ರೀಧರ, ಪ್ರಿನ್ಸ್ ಕೆ.ಜೆ., ರಿತೇಶ್, ಕೃಷ್ಣ ದೇವಾಡಿಗ, ಅಣ್ಣಪ್ಪ ಪೂಜಾರಿ, ಚಾಲಕ ಚಂದ್ರ ಪೂಜಾರಿ, ಕೋಟ ಠಾಣೆಯ ರಾಘವೇಂದ್ರ ಶೆಟ್ಟಿ, ಆರ್.ಡಿ. ಸೆಲ್ ವಿಭಾಗದ ಶಿವಾನಂದ, ದಿನೇಶ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.