ಹಿಂದೂಗಳಿಗೆ ಅಲ್ಪಸಂಖ್ಯಾಕ ಸ್ಥಾನಮಾನ: ಕಾಲಾವಕಾಶ
Team Udayavani, May 11, 2022, 12:38 AM IST
ಹೊಸದಿಲ್ಲಿ: ಹಿಂದೂಗಳಿಗೆ ಅಲ್ಪ ಸಂಖ್ಯಾಕ ಸ್ಥಾನಮಾನ ನೀಡುವ ಕುರಿತಾಗಿ ಎಲ್ಲ ರಾಜ್ಯಗ ಳೊಂದಿಗೆ ಸಮಾಲೋಚನೆ ನಡೆಸಿ ತನಗೆ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಕೆಲವು ರಾಜ್ಯಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ರುವ ಹಿಂದೂಗಳಿಗೆ ಅಲ್ಪಸಂಖ್ಯಾಕರ ಸ್ಥಾನಮಾನ ನೀಡಬೇಕೆಂದ ಮನವಿ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ, ಮೇ 9ರಂದು ಕೇಂದ್ರ ಸರಕಾರ ತನ್ನ ಎರಡನೇ ಅಫಿಡವಿಟ್ ಸಲ್ಲಿಸಿದೆ.
ಅದರಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾಕರೆಂಬ ಸ್ಥಾನಮಾನವನ್ನು ಆಯಾ ರಾಜ್ಯಗಳ ಜನಸಂಖ್ಯಾ ವರದಿಯನ್ನು ಆಧರಿಸಿ ನೀಡುವ ಅಧಿಕಾರ ತನಗಿದ್ದು ಈ ಕುರಿತಂತೆ ಎಲ್ಲ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸರಕಾರ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮೂರು ತಿಂಗಳ ಗಡುವನ್ನು ನೀಡಿದೆ.
ಈ ಹಿಂದೆ, ಇದೇ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕೇಂದ್ರ ಸರಕಾರ ಸಲ್ಲಿಸಿದ್ದ ಮೊದಲ ಅಫಿಡವಿಟ್‌ನಲ್ಲಿ, ಹಿಂದೂಗಳಿಗೆ ಅಲ್ಪ ಸಂಖ್ಯಾಕರ ಸ್ಥಾನಮಾನ ನೀಡುವ ವಿಚಾರ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟಿದ್ದು. ತಮ್ಮ ರಾಜ್ಯಗಳಲ್ಲಿನ ಜನಸಂಖ್ಯೆಯ ಅಂಕಿ- ಅಂಶಗಳನ್ನು ಆಧರಿಸಿ ರಾಜ್ಯ ಸರಕಾರಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳು ಈ ಕುರಿತಂತೆ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.