ಕೃಷ್ಣನ ನಾಡಿನಲ್ಲಿ ಮೊಳಗಿದ ಬಿಜೆಪಿ ಪಾಂಚಜನ್ಯ


Team Udayavani, May 11, 2022, 12:16 PM IST

bjp-panchajanya

ಉಡುಪಿ: ಮುಂದಿನ ಒಂದು ವರ್ಷದಲ್ಲಿ ಬರಲಿರುವ ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಸಂಘಟನಾತ್ಮಕ ಸಿದ್ಧತೆ ಮಾಡಿಕೊಳ್ಳುವ ಜತೆಗೆ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಉಡುಪಿಯಲ್ಲಿ ಸೋಮವಾರ ನಡೆದ ಪದಾಧಿಕಾರಿಗಳ ಸಭೆಯ ಉದ್ಘಾಟನೆಯಲ್ಲಿ ಪಾಂಚಜನ್ಯ ಮೊಳಗಿಸುವ ಮೂಲಕ ಇನ್ನಷ್ಟು ವೇಗ ನೀಡಿದರು.

ನಗರದ ಸರ್ವಿಸ್‌ ಬಸ್‌ ನಿಲ್ದಾಣದ ಕ್ಲಾಕ್‌ ಟವರ್‌ನಲ್ಲಿ ರಾಜ್ಯಾಧ್ಯಕ್ಷರ ಜತೆಗೆ ಸಚಿವರಾದ ಸುನಿಲ್‌ ಕುಮಾರ್‌, ಎಸ್‌. ಅಂಗಾರ, ಶಾಸಕ ಕೆ. ರಘುಪತಿ ಭಟ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಮೊದಲಾದವರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಅನಂತರ ಹಸುರು-ಕೇಸರಿ ಬಲೂನ್‌ನೊಂದಿಗೆ ಬಿಜೆಪಿ ಲಾಂಛನವನ್ನು ಆಕಾಶಕ್ಕೆ ಹಾರಿಸುವ ಮೂಲಕ ಶೋಭಾ ಯಾತ್ರೆಗೆ ಚಾಲನೆ ನೀಡಿದರು. ಅಲ್ಲಿಂದ ಕಿದಿಯೂರು ಹೊಟೇಲ್‌ ವರೆಗೂ ಶೋಭಾಯಾತ್ರೆಯ ಮೂಲಕ ಸಾಗಿಬಂದು ಸಭಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಇದೇ ಮೊದಲ ಬಾರಿ ಉಡುಪಿಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಗೆ ಜಿಲ್ಲಾ ಹಾಗೂ ನಗರ ಬಿಜೆಪಿಯಿಂದ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಇಡೀ ನಗರವನ್ನು ಕೇಸರಿ ಬಾವುಟದಿಂದ ಅಲಂಕರಿಸಿರುವ ಜತೆಗೆ ಅಲ್ಲಲ್ಲಿ ಗಣ್ಯರಿಗೆ ಶುಭ ಕೋರುವ ಫ್ಲೆಕ್‌ಗಳನ್ನು ಅಳವಡಿಸಲಾಗಿತ್ತು. ಸಭಾಂಗಣದ ಒಳಗೆ ಪದಾಧಿಕಾರಿಗಳಿಗೆ ಕುಳಿತುಕೊಳ್ಳಲು ಉತ್ತಮ ವ್ಯವಸ್ಥೆ ಮಾಡಲಾಗಿತ್ತು. ಪ್ರತೀ ಟೇಬಲ್‌ನಲ್ಲಿ ಇಬ್ಬರಂತೆ ಸುಮಾರು 40ಕ್ಕೂ ಅಧಿಕ ಟೇಬಲ್‌ ಇರಿಸಲಾಗಿತ್ತು.

ಪದಾಧಿಕಾರಿಗಳು

ಬಿ.ವೈ. ವಿಜಯೇಂದ್ರ, ಎನ್‌. ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ, ನೆ.ಲ. ನರೇಂದ್ರಬಾಬು, ಸತೀಶ್‌ ರೆಡ್ಡಿ, ಪ್ರತಾಪ್‌ ಸಿಂಹ, ಸುಬ್ಬ ನರಸಿಂಹ, ತುಳಸಿ ಮುನಿರಾಜುಗೌಡ, ವಿನಯ ಬಿದರೆ ಹೀಗೆ 70ಕ್ಕೂ ಅಧಿಕ ಮಂದಿ ಉಪಸ್ಥಿತರಿದ್ದರು. ಉದ್ಘಾಟನೆಯ ಅನಂತರ ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌ ಅವರು ಸಂಘಟನಾತ್ಮಕವಾಗಿ ಪಕ್ಷವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬೆಳೆಸುವ ಕುರಿತು ಮಾಹಿತಿ ನೀಡಿದರು. ಪದಾಧಿಕಾರಿಗಳು ತಮ್ಮ ವ್ಯಾಪ್ತಿಯ ವರದಿಯನ್ನು ನೀಡಿದರು.

ಜಿಲ್ಲಾ ಬಿಜೆಪಿಯಲ್ಲೂ ಸಂಚಲನ

ರಾಜ್ಯ ಪದಾಧಿಕಾರಿಗಳ ಸಭೆ ಉಡುಪಿಯಲ್ಲಿ ನಡೆದಿರುವುದರಿಂದ ಜಿಲ್ಲೆಯ ಪದಾಧಿಕಾರಿಗಳು, ಮೋರ್ಚಾ, ಪ್ರಕೋಷ್ಠಗಳ ಪ್ರತಿನಿಧಿಗಳಿಗೂ ಸಂಘಟನೆಗೆ ಇನ್ನಷ್ಟು ಶಕ್ತಿ ಸಿಕ್ಕಂತಾಗಿದೆ. ಮಂಗಳವಾರ ಬೆಳಗ್ಗೆಯಿಂದಲೇ ಜಿಲ್ಲೆಯ ಬಹುತೇಕ ಎಲ್ಲ ನಾಯಕರು ಉದ್ಘಾಟನೆಯ ಸಂದರ್ಭದಲ್ಲಿ ಹಾಜರಿದ್ದರು.

ರಾಜ್ಯ ಪದಾಧಿಕಾರಿಗಳ ಸಭೆಗೂ ಮೊದಲು ಜಿಲ್ಲಾ ಮಟ್ಟದ ವಿಶೇಷ ಕಾರ್ಯಕಾರಿಣಿಯನ್ನು ನಡೆಸಲಾಗಿತ್ತು. ಹೀಗಾಗಿ ರಾಜ್ಯ ಪದಾಧಿಕಾರಿಗಳ ಸಭೆಯು ಜಿಲ್ಲಾ ಬಿಜೆಪಿಯಲ್ಲಿ ಒಂದಿಷ್ಟು ಸಂಚಲನ ಮೂಡಿಸಿದೆ.

ಪ್ರಮೋದ್‌ ಮಧ್ವರಾಜ್‌ ಭಾಗಿ

ಇತ್ತೀಚೆಗಷ್ಟೆ ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಂಗಳವಾರ ಬೆಳಗ್ಗೆ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯ ಉದ್ಘಾಟನೆಯಲ್ಲಿ ಭಾಗವಹಿಸಿದರು. ಕೇಸರಿ ಶಲ್ಯದ ಜತೆಗೆ ಬಿಜೆಪಿ ಟೋಪಿಯನ್ನು ಧರಿಸಿ ಮೊದಲ ಸಾಲಿನಲ್ಲಿ ಕುಳಿತಿದ್ದರು. ನಳಿನ್‌ ಕುಮಾರ್‌ ಕಟೀಲ್‌ ಅವರು ತಮ್ಮ ಭಾಷಣದಲ್ಲಿ ಪ್ರಮೋದ್‌ ಮಧ್ವರಾಜ್‌ ಅವರ ಹೆಸರನ್ನು ಉಲ್ಲೇಖೀಸಿರುವುದು ವಿಶೇಷವಾಗಿತ್ತು.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.