ನ್ಯಾ| ಸದಾಶಿವ ಆಯೋಗ ವರದಿ ಜಾರಿಗೆ ಮನವಿ
Team Udayavani, May 11, 2022, 2:00 PM IST
ಗುರುಮಠಕಲ್: ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೊಳಿಸಬೇಕು. ನಮ್ಮ ಮಾದಿಗ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಅವರಿಗೆ ತಾಲೂಕಿನ ಡಾ| ಬಾಬು ಜಗಜೀವನರಾಂ ಯುವಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವರಾದ ಎ. ನಾರಾಯಣಸ್ವಾಮಿ ಹೈದರಬಾದಿನಿಂದ-ಶಹಬಾದ ಹೋಗುವ ಮಾರ್ಗದಲ್ಲಿ ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಬಾಬು ಜಗಜೀವನರಾಂ ಯುವಕ ಸಂಘದವರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮನವಿ ನೀಡಿ ಸನ್ಮಾನಿಸಿದರು.
ನಮ್ಮ ಮಾದಿಗ ಸಮುದಾಯ ಸತತವಾಗಿ ಸುಮಾರು 30 ವರ್ಷಗಳಿಂದ ವರ್ಗೀಕರಣ ಕುರಿತು ಹೋರಾಟ ಮಾಡುತ್ತಾಲೇ ಬಂದಿದೆ. ಆದರೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಬಂದರೂ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೊಳಿಸಿಲ್ಲ. ಈ ವರದಿಯ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಸುಮಾರು 8 ವರ್ಷಗಳು ಆಗಿದೆ. ಆದರೂ ಒಳ ಮೀಸಲಾತಿ ಜಾರಿಗೆ ಆಗಿಲ್ಲ. ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯ ಪ್ರಕಾರ ಒಳಮೀಸಲಾತಿ ವರ್ಗೀಕರಣವನ್ನು ನಮ್ಮ ಮಾದಿಗ ಸಮುದಾಯಕ್ಕೆ ಮತ್ತು ಇನ್ನು ಇತರೆ ಕುಲ ಬಾಂಧವರಿಗೆ ಒಳಮೀಸಲಾತಿ ವರ್ಗೀಕರಣ ಜಾರಿಗೊಳಿಸಿ ನ್ಯಾಯ ಒದಗಿಸಿಕೊಡಬೇಕಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.
ಭೀಮಶಪ್ಪ ಗುಡ್ಸೆ, ಕೆ. ದೇವದಾಸ್, ಕೃಷ್ಣ ಚಪೇಟ್ಲಾ, ಹಣಮಂತು ಶನಿವಾರಂ, ವೆಂಕಟೇಶ, ಹುಸೇನಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.