ಅಧಿಕಾರಿ ವಿರುದ್ಧ ದಿವ್ಯಾಂಗರ ಪ್ರತಿಭಟನೆ

Team Udayavani, May 11, 2022, 2:39 PM IST

16protest

ವಿಜಯಪುರ: ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ದಿವ್ಯಾಂಗರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ ಸೇರಿದಂತೆ ಅವ್ಯವಹಾರದಲ್ಲಿ ತೊಡಗಿದ್ದು, ದಿವ್ಯಾಂಗರ ಸೌಲಭ್ಯ ಪಡೆಯಲು ತೊಡಕಾರಿಗಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ದಿವ್ಯಾಂಗರು, ಕಳೆದ ಆರು ತಿಂಗಳ ಹಿಂದೆ ಸದರಿ ಅಧಿಕಾರಿ ವಿರುದ್ಧ ಪ್ರತಿಭಟನೆ ನಡೆಸಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಪರಿಣಾಮ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ಖೇಡ, ಸದರಿ ಅಧಿಕಾರಿ ನಡೆಸಿರುವ ಅವ್ಯವಹಾರದ ಕುರಿತು ತನಿಖೆ ನಡೆಸುವಂತೆ ಅಪರ ಜಿಲ್ಲಾಧಿಕಾರಿಗಳು ವಿಜಯಪುರ ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದಾರೆ.

3-4 ಭಾರಿ ವಿಚಾರಣೆ ನೋಟಿಸ್‌ ನೀಡಿ ಒಮ್ಮೆ ವಿಚಾರಣೆ ನಡೆಸಿದ್ದಾರೆ. ವಿಚಾರಣಾ ಸಮಯದಲ್ಲಿ ನಾವು ಸಲ್ಲಿಸಿದ ಆಕ್ಷೇಪಣೆಗಳಿಗೆ ಲಗತ್ತಿಸಿ ಸಲ್ಲಿಸಿದ ದಾಖಲೆಗಳ ದೂರಿನಲ್ಲಿ ಅಪಾದನೆ ದೃಢಪಟ್ಟಿಲ್ಲ ಎಂದಿದ್ದಾರೆ. ಕಾರಣ ಸದರಿ ಪ್ರಕರಣವನ್ನು ಮರುಪರಿಶೀಲಿಸಿ ಅಂಗವಿಕಲರ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಾಲಿಕಾರ ಮತನಾಡಿ, ಉಪ ವಿಭಾಗಾಧಿಕಾರಿಗಳು, ದಿವ್ಯಾಂಗರಿಗೆ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿರುವ ಇಲಾಖೆ ಅಕಾರಿ ವಿರುದ್ಧದ ಯಾವ ಆಪಾದನೆಗೆ ಯಾವ ದಾಖಲಾತಿಗಳನ್ನು ನೀಡಿಲ್ಲ. ನೇಮಕಾತಿ ಸಂದರ್ಭದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿದ್ದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ. ಕಾನೂನು ಬಾಹಿರ ಕೆಸಲ ಮಾಡಿದ್ದರೂ ಸದರಿ ಅಧಿಕಾರಿಗಳ ರಕ್ಷಣೆ ಮಾಡುವ ಮೂಲಕ ದಿವ್ಯಾಂಗರ ಹಕ್ಕುಗಳನ್ನು ಕಸಿಯಾಲಗುತ್ತಿದೆ ಎಂದು ಹರಿಹಾಯ್ದರು.

ಸದರಿ ಅಧಿಕಾರಿಯ ಭ್ರಷ್ಟಾಚಾರಕ್ಕೆ ತನಿಖಾಧಿಕಾರಿಗಳು ತನಿಖೆ ನಡೆಸದೇ ಸಹಕಾರ ನೀಡುತ್ತಿದ್ದಾರೆ ಎಂಬ ಅನುಮಾನವಿದೆ. ಇದರಿಂದ ದಿವ್ಯಾಂಗರು ಕಂಗಾಲಾಗಿದ್ದು, ನಮ್ಮ ಬಾಳಿಗೆ ದಾರಿದೀಪವಾಗಬೇಕಾದ ಉನ್ನತ ಮಟ್ಟದ ಅಧಿಕಾರಿಗಳೆ ನಮ್ಮ ಭಾವನೆ ಅರ್ಥೈಸಿಕೊಳ್ಳುವಲ್ಲಿ ವಿಫಲವಾಗಿದ್ದು, ಯಾರಲ್ಲಿ ನ್ಯಾಯ ಕೇಳಬೇಕು ಎಂಬುದೇ ತಿಳಿಯದಾಗಿದೆ ಎಂದು ಅಸಹಾಯಕತೆ ತೋಡಿಕೊಂಡರು.

ಮಲ್ಲಿಕಾರ್ಜುನ ಉಮರಾಣಿ ಮಾತನಾಡಿ, ಜಿಲ್ಲೆಯಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ನೇಮಕಾತಿಯಲ್ಲಿ ದಿವ್ಯಾಂಗರ ನೇಮಕಕ್ಕೆ ಸರಕಾರದ ಆದೇಶವಿದ್ದರೂ ಅಂಗವಿಕಲರ ಕಲ್ಯಾಣ ಅಧಿಕಾರಿ ಗಳು ಸರ್ಕಾರದ ಆದೇಶ ಅನುಷ್ಠಾನಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ದೂರಿದರು.

ಸಂಘಟನೆಯ ಪ್ರಮುಖರಾದ ತಾಲೂಕಾಧ್ಯಕ್ಷ ಅಂಬಣ್ಣ ಗುನ್ನಾಪುರ, ಶಂಕ್ರಮ್ಮ ಕೋರಿ, ಇಂಡಿ ತಾಲೂಕಾ ಕಾರ್ಯದರ್ಶಿ ಶಿವಲಿಂಗಪ್ಪ, ಸಾವಿತ್ರಿ ಮೋರೆ, ರಮೀಜಾ ಮಕಾನಂದರ, ಸುನಿಲ ತೇಲಕರ, ಅನಿಲ ಪವಾರ, ನಿಮಿಷ ಆಚಾರ್ಯ, ನಾಗಪ್ಪ ಬೆಂಕಿ, ಅರುಣ ವಾಗದಂಡೆ, ನೂರಹ್ಮದ ಪಠಾಣ, ಅಶೋಕ ಚೋಳಕ್ಕೆ, ಎಸ್‌.ಜಿ.ಮೆಂಡೆಗಾರ, ಮುಸ್ತಾಕ ತಾಳಿಕೋಟಿ, ಸಂಗಮೇಶ ಉಕ್ಕಲಿ, ಉ‚ಷಾ ಮೈಲಕರ, ಸಾಗಾರ ಸಾವಳಗಿ, ಜಿ.ಆರ್‌ ರಾಠೊಡ ಮತ್ತು ವಿ.ಯಾ ರಾಠೊಡ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

1-supri

Crypto funds ಡೀಲ್ ಆಡಿಯೋ ಆರೋಪ: ನನ್ನ ಧ್ವನಿಯಲ್ಲ ಎಂದು ಕಿಡಿಯಾದ ಸುಪ್ರಿಯಾ ಸುಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

17

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.