ಕೆವಿಕೆಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರ ಭೇಟಿ
Team Udayavani, May 11, 2022, 2:47 PM IST
ವಿಜಯಪುರ: ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷರಾದ ಡಾ| ಟಿ.ಎಂ. ವಿಜಯಭಾಸ್ಕರ್ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರಸನ್ನ ಅವರು ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ, ಮಾಹಿತಿ ಪಡೆದರು.
ಮಂಗಳವಾರ ಹಿಟ್ನಳ್ಳಿ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಆಧುನಿಕ ಕೃಷಿ ತಂತ್ರಜ್ಞಾನಗಳ ಜ್ಞಾನ ಮತ್ತು ಕೌಶಲ್ಯಗಳಿಗೆ ಸಂಭದಿಸಿದಂತೆ ರೈತರು ಹಾಗೂ ಕೃಷಿ ವಿಸ್ತರಣಾ ಸಿಬ್ಬಂದಿಗೆ ತಿಳಿವಳಿಕೆ ಮೂಡಿಸಲು ತಂತ್ರಜ್ಞಾನ ವರ್ಗಾವಣೆ ಸಾಧನೆಗಳಾದ ತಂತ್ರಜ್ಞಾನ ಸಾಮರ್ಥ್ಯ ನಿರ್ಧರಿಸುವಿಕೆ. ತಂತ್ರಜ್ಞಾನ ಪರಿಷ್ಕರಣೆ ಮೂಲಕ ತರಬೇತಿ ಕಾರ್ಯಕ್ರಮ ಆಯೋಜನೆ, ರೈತರ ಅಗತ್ಯಕ್ಕನುಗುಣವಾಗಿ ಗುಣಮಟ್ಟದ ಬೀಜ, ಸಸಿಗಳು, ಜಾನುವಾರು ತಳಿಗಳು ಮತ್ತು ಜೈವಿಕ ಉತ್ಪನ್ನಗಳನ್ನು ಒದಗಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.
ಕೃಷಿ ವಿಜ್ಞಾನ ಕೇಂದ್ರ ಹಿರಿಯ ವಿಜ್ಞಾನಿ ಡಾ| ಎಸ್. ಶುಭಾ, ಸಹ ವಿಸ್ತರಣಾ ನಿರ್ದೇಶಕ ಡಾ| ಆರ್.ಬಿ.ಬೆಳ್ಳಿ, ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗೆ ಹಮ್ಮಿಕೊಳ್ಳುವ ವಿವಿಧ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ಮೂಲಕ ಜಿಲ್ಲಾ ಮಟ್ಟದಲ್ಲಿ ನಿರ್ದಿಷ್ಟ ಸ್ಥಳಕ್ಕೆ ಸೂಕ್ತವಾದ ತಾಂತ್ರಿಕ ಘಟಕ, ತಾಂತ್ರಿಕತೆ ಪರಿಶೀಲನೆ ಪ್ರಯೋಗಗಳ ಹಾಗೂ ಪ್ರಾತ್ಯಕ್ಷಿಕೆಗಳ ಮೂಲಕ ಅಭಿವೃದ್ಧಿ ಪಡಿಸಿ, ಪ್ರಸಾರ ಮಾಡುವ ಮತ್ತು ಕೃಷಿ ಹಾಗೂ ಕೃಷಿ ಆಧಾರಿತ ಚಟುವಟಿಕೆಗಳಿಗೆ ಜ್ಞಾನ ಮತ್ತು ಸಂಪನ್ಮೂಲ ಕೇಂದ್ರವಾಗಿ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ವಿಜ್ಞಾನ ಕೇಂದ್ರದಲ್ಲಿರುವ ವಸು ಸಂಗ್ರಹಾಲಯ, ಜೈವಿಕ ಪರಿಕರ ಉತ್ಪಾದನಾ ಘಟಕ, ಮಣ್ಣು ಮತ್ತು ನೀರು ಪರೀಕ್ಷಾ ಪ್ರಯೋಗಾಲಯ ವೀಕ್ಷಿಸಿ ಸಂತಸ ವ್ಯಕ್ತ ಪಡಿಸಿದರು.
ತೋಟಗಾರಿಕೆ ಉಪ ನಿರ್ದೇಶಕ ಎಸ್. ಎಂ.ಬರಗಿಮಠ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ| .ವಿಲಿಯಂ ರಾಜಶೇಖರ, ಉಪ ನಿರ್ದೇಶಕ ಡಾ|ಎನ್. ರಾಘವೇಂದ್ರ, ಇಂಡಿ ವಿಬಾಗದ ಉಪ ಕೃಷಿ ನಿರ್ದೇಶಕ ಡಾ| ಚಂದ್ರಕಾಂತ ಪವಾರ, ಕೃಷಿ ಸಹಾಯಕ ನಿರ್ದೇಶಕ ಎಂ.ಬಿ. ದೊಡಮನಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ| ಪ್ರೇಮಾ ಪಾಟೀಲ, ಡಾ| ವಿವೇಕ ದೇವರನಾವದಗಿ, ಡಾ| ಬಿ.ಸಿ.ಕೊಲ್ಹಾರ, ಡಾ| ಶ್ರೀಶೈಲ ರಾಠೊಡ, ಬಿ.ಮಲ್ಲಪ್ಪ, ಎಸ್.ಸಿ.ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.