ಶರಣೆ ಹೇಮರಡ್ಡಿ ಮಲ್ಲಮ್ಮ ಸ್ತ್ರೀಕುಲದ ತಿಲಕ

ಹೇಮರಡ್ಡಿ ಮಲ್ಲಮ್ಮನ ಚರಿತ್ರೆ ಮತ್ತು ಚಾರಿತ್ರ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ

Team Udayavani, May 11, 2022, 4:22 PM IST

ಶರಣೆ ಹೇಮರಡ್ಡಿ ಮಲ್ಲಮ್ಮ ಸ್ತ್ರೀಕುಲದ ತಿಲಕ

ಬಾಗಲಕೋಟೆ: ಪುರುಷ ಪ್ರಧಾನವಾದ ಭಾರತ ದೇಶದಲ್ಲಿ ಐದನೂರು ವರ್ಷಗಳ ಹಿಂದೆ ಭಕ್ತಿ ಪರಾಕಾಷ್ಟೆ ತಲುಪಿದ ಹೇಮರಡ್ಡಿ ಮಲ್ಲಮ್ಮ ಸ್ತ್ರೀಕುಲದ ತಿಲಕರಾಗಿದ್ದಾರೆ ಎಂದು ಬಾಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ ಹೇಳಿದರು.

ನವನಗರದ ಡಾ|ಬಿ.ಆರ್‌.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಭಾರತ ದೇಶ ಹಿಂದಿನಿಂದಲೂ ಪ್ಲೇಗ್‌, ಮಲೇರಿಯಾ, ದಡಾರದಂತ ಕಾಯಿಲೆಗಳು ಮತ್ತು ಮೊಘಲರು, ಸುಲ್ತಾನರು, ಬ್ರಿಟೀಷರು ಈ ದೇಶ ಮೇಲೆ ದಾಳಿ ಇಟ್ಟರೂ ಕೂಡಾ ದೇಶ ಸುಭದ್ರವಾಗಿರಲು ಮಲ್ಲಮ್ಮ ನಂತಹ ಶರಣೆಯರ ಪಾದಸ್ಪರ್ಶದಿಂದ ಎಂಬುದು ಸಾಬೀತಾಗಿದೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ್ದ ಡಾ|ಟಿ.ಎಚ್‌.ಮಳಲಿ ಮಾತನಾಡಿ, ಯಾರು ಇತಿಹಾಸ ಮತ್ತು ಸಂಸ್ಕೃತಿಯನ್ನು ಮರೆಯುತ್ತಾರೋ ಅವರು ಇತಿಹಾಸವನ್ನು ಸೃಷ್ಟಿಸಲಾರರು. ಸಂತ, ಶಿವ ಶರಣ ಮತ್ತು ಶಿವಶರಣೆಯರ, ಸನ್ಯಾಸಿಗಳ ಮಹತ್ವ ತಿಳಿಯುವುದು ಇತಿಹಾಸದಿಂದ ಮಾತ್ರ ಸಾಧ್ಯ. ಅಂತಹ ಇತಿಹಾಸದಲ್ಲಿ ಹೇಮರಡ್ಡಿ ಮಲ್ಲಮ್ಮನ ಚರಿತ್ರೆ ಮತ್ತು ಚಾರಿತ್ರ್ಯದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಸಮುದಾಯದ ಮುಖಂಡರಾದ ಮಹೇಶ ಕಕರಡ್ಡಿ ಮಾತನಾಡಿ, ಮನಸ್ಸು ಸ್ವತ್ಛವಾಗಿಟ್ಟುಕೊಳ್ಳಲು ಇಂತಹ ಕಾರ್ಯಕ್ರಮ ನಡೆಸುವುದು ಅಗತ್ಯವಾಗಿದೆ. ಎಲ್ಲ ಸಮುದಾಯದವರು ಒಂದು ಎಂದು ನಂಬಿಕೆ ಇಡಬೇಕು. ಮೈಮುರಿಯುವಂತೆ ದುಡಿದು ಅಷ್ಟೇ ವಿನಂತಿಯಿಂದ ದಾನ ಮಾಡಬೇಕು ಎಂಬ ಹೇಮರೆಡ್ಡಿ ಮಲ್ಲಮ್ಮರವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಮಾತನಾಡಿ, ಮಹಿಳೆಯರ ಪಾಲಿನ ಆರಾದ್ಯ ದೈವರಾಗಿದ್ದ ಮಲ್ಲಮ್ಮಳ ಆರಾಧಕರಾದ ನಾವು ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಎಂದರು. ಜಿಪಂ ಉಪಕಾರ್ಯದರ್ಶಿ ಎನ್‌.ವೈ. ಬಸರಿಗಿಡದ, ತೋಟಗಾರಿಕಾ ಉಪನಿರ್ದೇಶಕ ರಾಹುಲಕುಮಾರ ಬಾವಿದಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ, ಸಮುದಾಯದ ಮುಖಂಡರಾದ ಎಸ್‌.ಡಿ. ಕೋಮಾರ, ಎಂ.ಆರ್‌. ಪಾಟೀಲ, ರಾಜು ಪಾಟೀಲ, ಎ.ಎನ್‌.ಹಿರೇಗೌಡರ, ಆರ್‌.ಬಿ. ದ್ಯಾವನ್ನವರ, ಎನ್‌.ಬಿ. ಚಿತ್ತವಾಡಗಿ,ವಿ.ಟಿ. ಶೇಷಪ್ಪನವರ, ಮದುಸೂಧನ ಮೂದಲಗಿ, ಇಂದುಮತಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಅದ್ಧೂರಿ ಮೆರವಣಿಗೆ
ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಹೇಮರಡ್ಡಿ ಮಲ್ಲಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಚಾಲನೆ ನೀಡಿದರು. ವಿವಿಧ ಜಾನಪದ ಕಲಾತಂಡಗಳೊಂದಿಗೆ ಹೊರಟ ಅದ್ಧೂರಿ ಮೆರವಣಿಗೆ ನಗರದ ವಿವಿಧೆಡೆ ಸಂಚರಿಸಿ ಡಾ| ಬಿ.ಆರ್‌.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಕುಂಬ ಹೊತ್ತ ಮಹಿಳೆಯರು ಆಕರ್ಷಣೀಯ ಬಿಂದು ಆಗಿದ್ದರು. ಮೆರವಣಿಗೆಯಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಅಪರ ಜಿಲ್ಲಾಧಿ ಕಾರಿ ಮಹಾದೇವ ಮುರಗಿ, ಜಿಪಂ ಉಪಕಾರ್ಯದರ್ಶಿ ಎನ್‌.ವೈ. ಬಸರಿಗಿಡದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮುದಾಯದ ಭಾಂದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ತಹಸೀಲ್ದಾರ್ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

ತಹಶೀಲ್ದಾರ್‌ ಕಚೇರಿಯಲ್ಲಿ ಅನ್ನದಾತರ ಅಹೋರಾತ್ರಿ ಧರಣಿ… ಇಂದು ಜಿಲ್ಲಾಧಿಕಾರಿ ಜೊತೆ ಸಭೆ

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.