ಬೀಜ-ರಸಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ

ಈ ಸಲ ಏಪ್ರಿಲ್‌ನಲ್ಲೇ ಮುಂಗಾರುಪೂರ್ವ ಮಳೆ ಆರಂಭ

Team Udayavani, May 11, 2022, 5:12 PM IST

fertilizer

ಹಾವೇರಿ: ಕಳೆದ ಎರಡು ವರ್ಷ ಕೊರೊನಾದಿಂದ ಸಮಸ್ಯೆ ಎದುರಿಸಿದ್ದ ರೈತರು ಈ ಸಲ ಉತ್ತಮ ಮುಂಗಾರು ಆರಂಭಕ್ಕೆ ಎದುರು ನೋಡುತ್ತಿದ್ದಾರೆ. ಮುಂಗಾರು ಪೂರ್ವದಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆ ಬೀಳುತ್ತಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆಯಿದೆ.

ಹಿಂದಿನ ಎರಡು ವರ್ಷಗಳಲ್ಲೂ ಈ ಅವಧಿಯಲ್ಲಿ ಕೊರೊನಾ ಆರ್ಭಟ ಜೋರಾಗಿ ಕೃಷಿ ಚಟುವಟಿಕೆಗಳಿಗೆ ತೊಡಕಾಗಿತ್ತು. ಬಳಿಕ ನೆರೆ, ಅತಿವೃಷ್ಟಿಯಿಂದ ರೈತರು ಸಮಸ್ಯೆ ಎದುರಿಸಿದ್ದರು. ಈ ಸಲ ಮುಂಗಾರು ಪೂರ್ವ ಮಳೆ ಜಿಲ್ಲಾದ್ಯಂತ ಏಪ್ರಿಲ್‌ನಲ್ಲೇ ಆಗಿದೆ. ಆದ್ದರಿಂದ ಮುಂಗಾರು ಹಂಗಾಮು ಸಕಾಲದಲ್ಲಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಅದಕ್ಕಾಗಿ ರೈತರು ಈಗಿನಿಂದಲೇ ಅಗತ್ಯ ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಎತ್ತುಗಳು, ಟ್ರಾಕ್ಟರ್‌ ಇತ್ಯಾದಿ ಖರೀದಿಯಲ್ಲಿ ತೊಡಗಿದ್ದಾರೆ. ಅದೇ ರೀತಿ ಇನ್ನೊಂದು ವಾರ ಬಿಟ್ಟು ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ರೈತರು ಸಿದ್ಧತೆ ನಡೆಸಿದ್ದಾರೆ. ಆ ವೇಳೆಗೆ ರೈತರು ಅಗತ್ಯ ದಾಸ್ತಾನು ಇಟ್ಟುಕೊಳ್ಳದಿದ್ದರೆ ಸಮಸ್ಯೆ ಎದುರಿಸಬೇಕಾಗಲಿದೆ.

ಬಿತ್ತನೆ ಬೀಜ ವಿತರಣೆಗೆ ಕ್ರಮ

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, 119 ಮಿಮೀ ವಾಡಿಕೆ ಮಳೆ ಪೈಕಿ ಈಗಾಗಲೇ 97.60 ಮಿಮೀ (ಶೇ.81.40) ಮಳೆಯಾಗಿದೆ. ಮೇ ಕೊನೆಯ ವಾರ, ಜೂನ್‌ ಮೊದಲ ವಾರದಲ್ಲಿ ಬಿತ್ತನೆ ಆರಂಭವಾಗಲಿದೆ. ಏಕದಳ, ದ್ವಿದಳ, ಎಣ್ಣೆಕಾಳು, ವಾಣಿಜ್ಯ ಬೆಳೆಗಳು ಸೇರಿ 3,30,639 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿಗೆ ಸೋಯಾ ಅವರೆ, ಶೇಂಗಾ, ಗೋವಿನ ಜೋಳ ಸೇರಿದಂತೆ ಸಣ್ಣ, ಅತಿ ಸಣ್ಣ ಹಿಡುವಳಿದಾರರಿಗೆ 36,660 ಕ್ವಿಂಟಲ್‌ ಬಿತ್ತನೆ ಬೀಜದ ವಿತರಣೆ ಬೇಡಿಕೆ ಅಂದಾಜಿಸಲಾಗಿದೆ. 19 ರೈತ ಸಂಪರ್ಕ ಕೇಂದ್ರಗಳು, 21 ಸಹಕಾರಿ ಸಂಘಗಳು, ಹೆಚ್ಚುವರಿಯಾಗಿ 20 ಮಾರಾಟ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆಗೆ ಕೃಷಿ ಇಲಾಖೆ ಕ್ರಮ ವಹಿಸಿದೆ. ಆದರೆ, ಕಳೆದ ವರ್ಷ ಜಿಲ್ಲೆಯಲ್ಲಿ ಸೋಯಾ ಬಿನ್‌ ಬೀಜ ಕೊರತೆಯಿಂದ ರೈತರು ಸಮಸ್ಯೆ ಎದುರಿಸಿದ್ದರು. ಮುಂಗಾರು ಆರಂಭದಲ್ಲೇ ಸೋಯಾ ಬಿತ್ತನೆ ಶುರುವಾಗಲಿದ್ದು, ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸೋಯಾ ಬೆಳೆಯತ್ತ ತಿರುಗಿದ್ದಾರೆ. ಆದ್ದರಿಂದ ಈ ಸಲ ಕೊರತೆಯಾಗ ದಂತೆ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

‌ಪ್ರಸಕ್ತ ಮುಂಗಾರು ಹಂಗಾಮಿಗಾಗಿ ಅಗತ್ಯ ಗೊಬ್ಬರ, ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಬೇಡಿಕೆಗೆ ತಕ್ಕಂತೆ ರಸಗೊಬ್ಬರ ಪೂರೈಕೆಯಾಗಲಿದ್ದು, ಯಾವುದೇ ಅಭಾವವಿಲ್ಲ. ಬಿ.ಮಂಜುನಾಥ್, ಜಂಟಿ ಕೃಷಿ ನಿರ್ದೇಶಕ. ಈ ವರ್ಷ ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆಯಿಲ್ಲ. 6.83 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಲಭ್ಯವಿದೆ. ರೈತರ ಅಗತ್ಯಕ್ಕನುಗುಣವಾಗಿ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಲಾಗುವುದು. -ಬಿ.ಸಿ.ಪಾಟೀಲ, ಕೃಷಿ ಸಚಿವರು.

24 ಸಾವಿರ ಮೆ.ಟನ್‌ ಗೊಬ್ಬರ ದಾಸ್ತಾನು

ಜಿಲ್ಲೆಯಲ್ಲಿ ಗೊಬ್ಬರ, ಬಿತ್ತನೆ ಬೀಜ ದಾಸ್ತಾನಿಗೆ ಕೃಷಿ ಇಲಾಖೆ ಅಗತ್ಯ ಗಮನ ಹರಿಸಿದೆ. ಅಲ್ಲದೇ ಜಿಲ್ಲೆಯವರೇ ಆಗಿರುವ ಬಿ.ಸಿ.ಪಾಟೀಲ ಅವರು ಕೃಷಿ ಸಚಿವರಾದ ಮೇಲೆ ಸಾಕಷ್ಟು ಮುಂಜಾಗ್ರತಾ ಕ್ರಮ ಅನುಸರಿಸಿದ್ದರಿಂದ ಅಷ್ಟಾಗಿ ಕೊರತೆ ಎದುರಾಗಿಲ್ಲ. ಮುಂಗಾರು ಹಂಗಾಮಿಗಾಗಿ ಸೆಪ್ಟೆಂಬರ್‌ ತಿಂಗಳವರೆಗೆ ಯೂರಿಯಾ 58,459 ಮೆಟ್ರಿಕ್‌ ಟನ್‌, ಡಿಎಪಿ 25,848 ಮೆಟ್ರಿಕ್‌ ಟನ್‌, ಎಂಒಪಿ 5,911 ಮೆಟ್ರಿಕ್‌ ಟನ್‌, ಕಾಂಪ್ಲೆಕ್ಸ್‌ 46,957 ಮೆಟ್ರಿಕ್‌ ಟನ್‌, ಎಸ್‌ಎಸ್‌ಪಿ 702 ಮೆಟ್ರಿಕ್‌ ಟನ್‌ ಸೇರಿ 1,37,916 ಮೆಟ್ರಿಕ್‌ ಟನ್‌ ರಸಗೊಬ್ಬರ ಹಂಚಿಕೆಯಾಗಿದೆ. ಸದ್ಯಕ್ಕೆ 24,223 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಲಭ್ಯವಿದೆ. ಎರಡು ರೇಕ್‌ ಯೂರಿಯಾ ಕೂಡ ಬಂದಿದ್ದರಿಂದ ಆರಂಭಿಕ ವಿತರಣೆಗೆ ಯಾವುದೇ ಕೊರತೆ ಎದುರಾಗುವ ಸಾಧ್ಯತೆಯಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.

ಟಾಪ್ ನ್ಯೂಸ್

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.