ಇಡಿಯಿಂದ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಬಂಧನ, 20 ಕೋಟಿ ರೂ. ಜಪ್ತಿ!
Team Udayavani, May 11, 2022, 7:10 PM IST
ರಾಂಚಿ: ಜಾರಿ ನಿರ್ದೇಶನಾಲಯ ಬುಧವಾರ ಜಾರ್ಖಂಡ್ ನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಬಂಧಿಸಿದೆ.
ರಾಜ್ಯದ ಖುಂಟಿ ಜಿಲ್ಲೆಯಲ್ಲಿ 2008-11ರ ಅವಧಿಯಲ್ಲಿ 18 ಕೋಟಿ ರೂ.ಗೂ ಹೆಚ್ಚು ಎಂಜಿಎನ್ಆರ್ಇಜಿಎ ನಿಧಿಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರ್ಖಂಡ್ ಗಣಿಗಾರಿಕೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಪೂಜಾ ಸಿಂಘಾಲ್ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಇಡಿ ಕಳೆದ ಶುಕ್ರವಾರ ದಾಳಿ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಂಚಿಯಲ್ಲಿ ತಪಾಸಣೆ ನಡೆಸಿದ ಇಡಿ ಎರಡು ನಿವೇಶನಗಳಿಂದ ಒಟ್ಟು 19.31 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದೆ.
ಐಎಎಸ್ ಅಧಿಕಾರಿ ಮತ್ತು ಅವರ ಕುಟುಂಬದೊಂದಿಗೆ ಸಂಪರ್ಕ ಹೊಂದಿರುವ ರಾಂಚಿ ಮೂಲದ ಚಾರ್ಟರ್ಡ್ ಅಕೌಂಟೆಂಟ್-ಕಮ್-ಫೈನಾನ್ಷಿಯಲ್ ಅಡ್ವೈಸರ್ ಬಳಿ ಸುಮಾರು 17.51 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಮತ್ತೊಂದು ಸ್ಥಳದಿಂದ ಸುಮಾರು 1.8 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.