1429 ಫಲಾನುಭವಿಗಳಿಗೆ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
Team Udayavani, May 11, 2022, 7:34 PM IST
ಮೂಡಲಗಿ : ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಎಚ್ಎಫ್ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಇಲ್ಲಿಯ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಜರುಗಿದ ಪಟ್ಟಣದ ಕೊಳಚೆ ಪ್ರದೇಶಗಳಲ್ಲಿ ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೊಳಚೆ ಪ್ರದೇಶಗಳಲ್ಲಿ ಸುಂದರವಾದ ವಸತಿ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಎಲ್ಲ ವರ್ಗದ ಸಮುದಾಯಗಳಿಗೆ ಆಧ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿ ಮಾಡುವ ಮೂಲಕ ಅಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಾಯಧನದ ಜೊತೆಗೆ ಸುಂದರವಾದ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆ ಇದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕಾಗಿ ಫಲಾನುಭವಿಗಳಿಗೆ ವಿಶೇಷ ಸೌಲತ್ತುಗಳನ್ನು ನೀಡುತ್ತಿವೆ. ಪ್ರತಿ ಮನೆ ನಿರ್ಮಾಣಕ್ಕೆ ಒಟ್ಟು 716426 ರೂ. ತಗುಲಲಿದ್ದು, ಎಸ್.ಸಿ ಎಸ್.ಟಿ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ 1.50 ಲಕ್ಷ ರೂ. ರಾಜ್ಯ ಸರ್ಕಾರ 2 ಲಕ್ಷ ರೂ. ಸೇರಿ ಒಟ್ಟು 3.50 ಲಕ್ಷ ರೂ. ಸಹಾಯಧನ ನೀಡಲಿವೆ.
ಫಲಾನುಭವಿಗಳು ಮುಂಗಡವಾಗಿ ಶೇ 10 ರಷ್ಟು 71643 ರೂ. ವಂತಿಗೆಯನ್ನು ಡಿಡಿ ಮೂಲಕ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಭರಿಸಬೇಕು. ಬಾಕಿ ಉಳಿದ ೩೬೬೪೨೬ ರೂ. ಹಣವನ್ನು ಫಲಾನುಭವಿಗಳು ಬ್ಯಾಂಕ್ ಲೋನ್ ಮೂಲಕ ಭರಿಸಬೇಕು.
ಅಲ್ಪಸಂಖ್ಯಾತರು ಮತ್ತು ಇತರೇ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ 1.50 ಲಕ್ಷ ರೂ ಮತ್ತು ರಾಜ್ಯ ಸರ್ಕಾರ 1.20 ಲಕ್ಷ ರೂ. ನೀಡಲಿದ್ದು ಒಟ್ಟು 2.70 ಲಕ್ಷ ರೂ. ಸರ್ಕಾರ ಅನುದಾನ ನೀಡಲಿದೆ. ಈ ಫಲಾನುಭವಿಗಳು ಶೇ 15 ರಷ್ಟು ಮುಂಗಡ ಹಣ 107464 ರೂ. ಹಣವನ್ನು ಡಿಡಿ ಮೂಲಕ ತುಂಬಬೇಕು. 4,46,426 ರೂ. ಹಣವನ್ನು ಪ್ರತಿ ಮನೆಗೆ ಫಲಾನುಭವಿಗಳು ಭರಿಸಬೇಕು. ಬ್ಯಾಂಕ್ ಲೋನ್ ಮೂಲಕ ಬಾಕಿ ಉಳಿದ 338962 ರೂ.ಗಳನ್ನು ಫಲಾನುಭವಿಗಳು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಭರಿಸಬೇಕು. ಒಟ್ಟು 1429 ಫಲಾನುಭವಿಗಳಿಗೆ ಕೊಳಗೇರಿ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಸಿಕೊಡುವ ಸರ್ಕಾರದ ಸಂಕಲ್ಪವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಅಭಿಯಂತರ ಪುಣಿರಾಜ್ ಎಂ.ಜಿ, ತಹಶೀಲ್ದಾರ ಡಿ.ಜೆ. ಮಹಾತ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನನ್ನವರ, ಡಿವಾಯ್ಎಸ್ಪಿ ಮನೋಜಕುಮಾರ ನಾಯ್ಕ, ಮುಖ್ಯಾಧಿಕಾರಿ ದೀಪಕ ಹರ್ದಿ, ಬಿಇಓ ಅಜೀತ ಮನ್ನಿಕೇರಿ, ಪುರಸಭೆ ಸದಸ್ಯರು, ಮುಖಂಡರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.