ಎರಡನೇ ದಿನವೂ ಮುಂದುವರಿದ ಡಿಕೆಶಿ – ರಮ್ಯಾ ಟ್ವೀಟ್ ಸಮರ
Team Udayavani, May 13, 2022, 6:55 AM IST
ಬೆಂಗಳೂರು: ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವಿನ ಟ್ವಿಟ್ ವಾರ್ ಎರಡನೇ ದಿನವೂ ಮುಂದುವರಿದಿದ್ದು, ಗುರುವಾರ ಇಬ್ಬರೂ ಸಾಮಾಜಿಕ ಜಾಲತಾಣಗಳ ಮೂಲಕ ವಾಗ್ಯುದ್ಧ ನಡೆಸಿದರು.
ಎಂ.ಬಿ. ಪಾಟೀಲ್- ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಭೇಟಿ ವಿಚಾರದಲ್ಲಿ ಶುರುವಾದ ಪ್ರತಿಕ್ರಿಯೆಗಳು ಈಗ “ಅವಕಾಶ ನೀಡಿದವರು ಮತ್ತು ಅವಕಾಶವಾದಿಗಳ’ ಕೆಸರೆರಚಾಟಕ್ಕೆ ಬಂದು ನಿಂತಿದೆ.
“ಅವಕಾಶ ಕೊಟ್ಟ ನಾಯಕರನ್ನೇ ಮರೆತು ಮಾತನಾಡುತ್ತಿದ್ದೀಯಾ? ಏಣಿ ಹತ್ತಿದ ಮೇಲೆ ಒದೆಯುವುದು ಎಂದರೆ ಇದೇ. ನಿಮ್ಮನ್ನು ಪರಿಚಯಿಸಿದವರಿಗೇ ಈಗ ಪಕ್ಷದ ಆಗುಹೋಗುಗಳ ಬಗ್ಗೆ ಪಾಠ ಮಾಡುತ್ತಿದ್ದೀರಾ? ನಮ್ಮ ನಾಯಕರ ಬಗ್ಗೆ ನೀವು ಮಾತನಾಡುವ ಅಗತ್ಯವಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಬೆಂಬಲಿಗರು ಬುಧವಾರ ಟ್ವೀಟ್ ಮೂಲಕ ರಮ್ಯಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ರಮ್ಯಾ ತಿರುಗೇಟು ನೀಡಿದ್ದಾರೆ. “ನನಗೆ ಯಾರೂ ಅವಕಾಶ ನೀಡಿಲ್ಲ. ನನಗೆ ಅವಕಾಶ ನೀಡಿದ್ದು ಹಾಗೂ ಬೆನ್ನೆಲುಬಾಗಿ ನಿಂತಿದ್ದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾತ್ರ. ಅವಕಾಶ ನೀಡಿರುವುದಾಗಿ ಈಗ ಹೇಳಿಕೊಳ್ಳುತ್ತಿರುವವರು ಸ್ವತಃ ಅವಕಾಶವಾದಿಗಳು. ನನ್ನ ಬೆನ್ನಿಗೆ ಚೂರಿ ಹಾಕಿದವರು ಹಾಗೂ ನನ್ನ ಮೇಲೆ ಹಣ ದುರ್ಬಳಕೆ ಆರೋಪ ಹೊರಿಸಿ ಹತ್ತಿಕ್ಕಲು ಯತ್ನಿಸಿದವರು’ ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ನೇರವಾಗಿ ಆಕ್ರೋಶ ಹೊರಹಾಕಿದ್ದಾರೆ.
ಕಚೇರಿ= ಡಿಕೆಶಿ? :
ಇದಕ್ಕೆ ಪೂರಕವಾಗಿ ಬುಧವಾರ ತಮ್ಮನ್ನು ಟ್ರೋಲ್ ಮಾಡಲು “ಕಚೇರಿ’ಯು ಕಾಂಗ್ರೆಸ್ ಹಿರಿಯ ನಾಯಕರು, ಕಾರ್ಯಕರ್ತರಿಗೆ ಈ ಸಂದೇಶಗಳನ್ನು ಕಳುಹಿಸಿದೆ. ನನ್ನನ್ನು ಟ್ರೋಲ್ ಮಾಡಲು ನೀವು ತೊಂದರೆ ತೆಗೆದುಕೊಳ್ಳಬೇಡಿ. ನಾನೇ ಮಾಡುತ್ತೇನೆ’ ಎಂದು ಹೇಳಿ ಎಲ್ಲ ಸಂದೇಶಗಳ ಸ್ಕ್ರೀನ್‌ಶಾಟ್‌ಗಳನ್ನು ಟ್ವಿಟರ್ ಖಾತೆಯಲ್ಲಿ ರಮ್ಯಾ ಹಂಚಿಕೊಂಡಿದ್ದರು. ಗುರುವಾರ ಆ “ಕಚೇರಿ’ ಎಂದರೆ ಯಾರು ಎಂಬುದನ್ನೂ ಸ್ಪಷ್ಟಪಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ (ಕಚೇರಿ) ಎಂದು ಹೇಳಿದ್ದಾರೆ.
“ಇಷ್ಟೇ ಅಲ್ಲ, ಈ ಹಿಂದೆ ಸುದ್ದಿ ವಾಹಿನಿಗಳಲ್ಲಿ ನಾನು 8 ಕೋಟಿ ಹಣದೊಂದಿಗೆ ಪರಾರಿಯಾಗಿದ್ದೇನೆ ಎಂದು ಸುದ್ದಿ ಬಿತ್ತರಿಸಿದ್ದರು. ಅಂದು ಮೌನವಾಗಿದ್ದದ್ದೇ ನಾನು ಮಾಡಿದ ತಪ್ಪು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಮ್ಮ ಮುಂದಿನ ಕರ್ನಾಟಕ ಭೇಟಿ ವೇಳೆ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಆರೋಪಗಳನ್ನು ಹೊತ್ತು ಜೀವನಪೂರ್ತಿ ಇರಲಾರೆ. ದಯವಿಟ್ಟು ಈ ಬಗ್ಗೆ ಸ್ಪಷ್ಟನೆ ನೀಡಿ’ ಎಂದು ವೇಣುಗೋಪಾಲ್ ಅವರಿಗೆ ಮನವಿ ಮಾಡಿದ್ದಾರೆ.
ರಂಪಾಟ ಬೇಡ; ಪಕ್ಷದ ವೇದಿಕೆಯಲ್ಲಿ ಚರ್ಚೆ :
ಈ ಮಾತಿನ ಯುದ್ಧಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿರುವ ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್, “ಎಂ.ಬಿ. ಪಾಟೀಲ್ ಅವರು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ರಮ್ಯಾ ಅವರು ಪಕ್ಷದ ಮಾಜಿ ಸಂಸದೆ. ಇಬ್ಬರೂ ನಮಗೆ ಬೇಕಾದವರು. ಅನಗತ್ಯ ರಂಪಾಟ ಬೇಡ. ಯಾರಿಗೆ ಯಾವ ವಿಚಾರವಾಗಿ ನೋವಾಗಿದೆಯೋ ಅದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ. ಬಹಿರಂಗವಾಗಿ ಚರ್ಚೆ ಮಾಡಲು ಸಿದ್ಧವಿಲ್ಲ’ ಎಂದು ಹೇಳಿದರು.
“ನನಗೆ ಯಾವುದೇ ವಿಚಾರ ತಿಳಿದಿಲ್ಲ. ಎಲ್ಲಿ ಏನು ಅಪಾರ್ಥವಾಗಿದೆಯೋ ಗೊತ್ತಿಲ್ಲ. ಮಾಧ್ಯಮಗಳು ನಮ್ಮ ಮನೆಗೆ ಬಂದು ಅಶ್ವತ್ಥ್ ನಾರಾಯಣ ಅವರು ಎಂ.ಬಿ. ಪಾಟೀಲ್ ಅವರ ಮನೆಗೆ ಹೋಗಿದ್ದಾರೆ ಎಂದು ಪ್ರಶ್ನೆ ಕೇಳಿದರು. ನಾನು ರಕ್ಷಣೆಗೆ ಹೋಗಿರಬಹುದು ಎಂದು ಹೇಳಿದ್ದೇನೆ. ಇದರ ಹೊರತಾಗಿ ಬೇರೇನೂ ವಿಚಾರವಿಲ್ಲ’ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.