ಉಬೆರ್ ಕಪ್: ಹೊರಬಿದ್ದ ಭಾರತ
Team Udayavani, May 12, 2022, 10:19 PM IST
ಬ್ಯಾಂಕಾಕ್: ಪಿ.ವಿ. ಸಿಂಧು ನೇತೃತ್ವದ ಭಾರತ ತಂಡ “ಉಬೆರ್ ಕಪ್’ ಬ್ಯಾಡ್ಮಿಂಟನ್ ಪಂದ್ಯಾವಳಿಯಿಂದ ಹೊರಬಿದ್ದಿದೆ. ಗುರುವಾರದ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ ಥಾಯ್ಲೆಂಡ್ 3-0 ಅಂತರದಿಂದ ಭಾರತವನ್ನು ಪರಾಭವಗೊಳಿಸಿತು.
ವನಿತೆಯರ ಮೊದಲ ಸಿಂಗಲ್ಸ್ ನಲ್ಲಿ ರಚನಾಕ್ ಇಂತಾನನ್ ವಿರುದ್ಧ ಪಿ.ವಿ. ಸಿಂಧು ಪರಾಭವಗೊಂಡದ್ದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿತು. ವಿಶ್ವದ 8ನೇ ರ್‍ಯಾಂಕಿಂಗ್ ಆಟಗಾರ್ತಿ ಇಂತಾನನ್ ಈ ಪಂದ್ಯವನ್ನು 18-21, 21-17, 21-12 ಅಂತರದಿಂದ ಗೆದ್ದರು. ಇದು ಸಿಂಧು ವಿರುದ್ಧ ಆಡಿದ 11 ಪಂದ್ಯಗಳಲ್ಲಿ ಥಾಯ್ ಆಟಗಾರ್ತಿ ಸಾಧಿಸಿದ 7ನೇ ಗೆಲುವು.
ವನಿತಾ ಡಬಲ್ಸ್ ಬಲ್ಲೂ ಭಾರತಕ್ಕೆ ಯಶಸ್ಸು ಒಲಿಯಲಿಲ್ಲ. ಶ್ರುತಿ ಮಿಶ್ರಾ- ಸಿಮ್ರಾನ್ ಸಿಂ 16-21, 13-21 ಅಂತರದಲ್ಲಿ ಜೊಂಕೋಲ್ಫನ್ ಕಿಟಿತರ ಕುಲ್-ರವಿಂಡಾ ಪ್ರಜೋಂಗ್‌ಜಾಯ್ ಜೋಡಿಗೆ ಶರಣಾದರು.
ದ್ವಿತೀಯ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್ ಅವರನ್ನು ಪೋರ್ಣಪವೀ ಚೊಚುವಾಂಗ್ 16-21, 11-21ರಿಂದ ಹಿಮ್ಮೆಟ್ಟಿಸಿದರು. ಇದರೊಂದಿಗೆ ಥಾಯ್ಲೆಂಡ್ 3-0 ಮುನ್ನಡೆ ಸಾಧಿಸಿದ್ದರಿಂದ ಉಳಿದೆರಡು ಪಂದ್ಯಗಳನ್ನು ಕೈಬಿಡಲಾಯಿತು. ಇಲ್ಲಿ ತನಿಷಾ ಕ್ರಾಸ್ಟೊ-ತಿೃಷಾ ಜಾಲಿ ಡಬಲ್ಸ್ ಹಾಗೂ ಅಶ್ಮಿತಾ ಚಾಲಿಹಾ ಸಿಂಗಲ್ಸ್ ಪಂದ್ಯವನ್ನು ಆಡಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.