![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 13, 2022, 8:36 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಕಾಶ್ಮೀರಿ ಪಂಡಿತರನ್ನು ಭಯೋತ್ಪಾದಕರು ಹತ್ಯೆಗೈದ ನಂತರ, ಕಾಶ್ಮೀರಿ ಪಂಡಿತ್ ಸಮುದಾಯದ ಸದಸ್ಯರು ಕೇಂದ್ರಾಡಳಿತ ಪ್ರದೇಶದ ವಿವಿಧ ಭಾಗಗಳಲ್ಲಿ ಬೀದಿಗಿಳಿದು ಪ್ರತಿಭಟಿಸಿದರು.
ಗುರುವಾರ ಸಂಜೆ ವೆಸ್ಸು ಗ್ರಾಮದ ಬಳಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಪ್ರತಿಭಟನಾಕಾರರು ತಡೆದರು. ‘ನಮಗೆ ನ್ಯಾಯ ಬೇಕು’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಅನಂತನಾಗ್ ಜಿಲ್ಲೆಯ ಮಟ್ಟಾನ್ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮತ್ತು ಘಟನೆ ನಡೆದ ಬುದ್ಗಾಮ್ ನ ಚದೂರದಲ್ಲಿಯೂ ಕಾಶ್ಮೀರಿ ಪಂಡಿತ್ ಸಮುದಾಯವು ಪ್ರತಿಭಟನೆಯನ್ನು ನಡೆಸಿತು.
ಇದನ್ನೂ ಓದಿ:ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ:ಶಿಕ್ಷೆ ರದ್ದುಪಡಿಸಲು ಹೈಕೋರ್ಟ್ ನಕಾರ
ಜಮ್ಮು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿರುವ ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರರು ಸಹ ಸರ್ಕಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿದರು. ಭರವಸೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬುದ್ಗಾಮ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಕಂದಾಯ ಇಲಾಖೆಯ ನೌಕರನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಕಾಶ್ಮೀರಿ ಪಂಡಿತ ಸಮುದಾಯದವರಾದ ಸಂತ್ರಸ್ತ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದರು, ಕೂಡಲೇ ಅವರನ್ನು ಶ್ರೀನಗರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಸ್ವಲ್ಪ ಸಮಯದ ನಂತರ ನಿಧನರಾದರು.
ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರಾಹುಲ್ ಭಟ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.