ಟೊಮ್ಯಾಟೋ ಜ್ವರ ಎಚ್ಚರಿಕೆ: ಜಿಲ್ಲಾಧಿಕಾರಿ
Team Udayavani, May 13, 2022, 11:15 PM IST
ಉಡುಪಿ: ಕೇರಳ- ತಮಿಳುನಾಡು ಗಡಿಯಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80ಕ್ಕೂ ಅಧಿಕ ಮಕ್ಕಳಲ್ಲಿ ಟೊಮ್ಯಾಟೋ ಜ್ವರ ಕಂಡು ಬಂದಿದ್ದು, ಉಡುಪಿಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿಲ್ಲ. ಆದರೂ ಗಡಿ ಜಿಲ್ಲೆಗಳಲ್ಲಿ ಈ ಕುರಿತು ನಿಗಾ ಅಗತ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದ್ದಾರೆ.
ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮ್ಯಾಟೋ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮ್ಯಾಟೋ ಜ್ವರ ಎಂದು ಹೆಸರಿಡಲಾಗಿದೆ. ಈ ಜ್ವರವು ವೈರಸ್‌ನಿಂದ ಹರಡುತ್ತಿದ್ದು ಕೊರೊನಾ ಮತ್ತು ಈ ಜ್ವರಕ್ಕೆ ಸಂಬಂಧವಿಲ್ಲ. ಇದು ಚಿಕನ್‌ಗುನ್ಯಾದ ಲಕ್ಷಣವನ್ನು ಹೋಲುತ್ತಿದ್ದು ಜ್ವರ ಹಾಗೂ ಗುಳ್ಳೆಯ ಜತೆಗೆ ಕೆಮ್ಮು, ಶೀತ, ನಿರ್ಜಲೀಕರಣ ಉಂಟಾಗುತ್ತದೆ. ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡು ವುದರಿಂದ ಸೋಂಕಿತ ಮಕ್ಕಳು ಕ್ವಾರಂಟೈನ್ ಆಗಬೇಕು ಮತ್ತು ಗುಳ್ಳೆಗಳನ್ನು ಉಜ್ಜಬಾರದು. ಈ ಬಗ್ಗೆ ಎಲ್ಲರೂ ಆದಷ್ಟು ಜಾಗೃತಿ ವಹಿಸಬೇಕು ಎಂದು ತಿಳಿಸಿದ್ದಾರೆ.
ಧಾರ್ಮಿಕ ಕ್ಷೇತ್ರದಲ್ಲಿ ಪರೀಕ್ಷೆ ನಡೆಸಲು ಸೂಚನೆ
ಜಿಲ್ಲೆಯಾದ್ಯಂತ ಯಾರಲ್ಲಾದರೂ ಇಂತಹ ರೋಗ ಲಕ್ಷಣ ಕಂಡುಬಂದಲ್ಲಿ ವೈದ್ಯಾಧಿಕಾರಿಗಳು, ಆರೋಗ್ಯ ಸಿಬಂದಿ ವರ್ಗ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇರಳದಿಂದ ಬರುವ ವ್ಯಕ್ತಿಗಳು, ಯಾತ್ರಿಕರು, ಮಕ್ಕಳ ಬಗ್ಗೆ ತೀವ್ರ ನಿಗಾ ವಹಿಸ ಬೇಕು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸಹಿತ ಜಿಲ್ಲೆಯ ವಿವಿಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣಗಳಲ್ಲಿಯೂ ಈ ರೋಗ ಲಕ್ಷಣ ಹೊಂದಿರುವ ಪ್ರಕರಣಗಳ ಕುರಿತು ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ.
ವೈದ್ಯರು ಮಾಹಿತಿ ನೀಡಬೇಕು
ಖಾಸಗಿ ಆಸ್ಪತ್ರೆಗಳು ಮತ್ತು ಎಲ್ಲ ಮಕ್ಕಳ ತಜ್ಞರು ಈ ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ನಡೆಸಿ, ಮಾಹಿತಿ ನೀಡಬೇಕು. ಸಾರ್ವಜನಿಕರು ಭೀತಿಗೊಳ್ಳದೆ ಟೊಮ್ಯಾಟೋ ಜ್ವರದ ಲಕ್ಷಣಗಳ ಬಗ್ಗೆ ಅರಿತು, ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು. ಮಕ್ಕಳಲ್ಲಿ ನಿರ್ಜಲೀಕರಣವಾಗದಂತೆ ಹೆಚ್ಚಿನ ಗಮನ ಹರಿಸಿ, ಶುದ್ಧ ನೀರು ಸೇವಿಸುವಂತೆ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.