![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 14, 2022, 6:05 PM IST
ಧಾರವಾಡ: ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಮರ್ಥವಾಗಿ ಎದುರಿಸಿದ್ದು ವೃತ್ತಿ ಜೀವನಕ್ಕೆ ಹೊಸ ಭರವಸೆ ತಂದುಕೊಟ್ಟಿದೆ. ಇದೀಗ ಸಂಕಷ್ಟದ ದಿನಗಳು ಕಳೆದಿದ್ದು, ಜಿಲ್ಲೆಯ ಜನರಿಗೆ ಧಾರವಾಡ ಉತ್ಸವದಂತಹ ಸಾಂಸ್ಕೃತಿಕ ಹಬ್ಬ ನೀಡುವ ಕನಸು ಇತ್ತು. ಮುಂಬರುವ ದಿನಗಳಲ್ಲಿ ಆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಬೆಳಗಾವಿ ಜಿಲ್ಲಾ ಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.
ಇಲ್ಲಿನ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಭೂಮಿ, ವಸತಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವುದಕ್ಕೆ ಇಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಾಂಘಿಕ ಪ್ರಯತ್ನ ಕಾರಣವಾಗಿದೆ.
ನೂತನವಾಗಿ ಅಧಿಕಾರ ಸ್ವೀಕರಿಸಿರುವ ಗುರುದತ್ತ ಹೆಗಡೆ ಅವರು, ಕನ್ನಡದಲ್ಲಿ ನಾಗರಿಕ ಸೇವಾ ಪರೀಕ್ಷೆ ಬರೆದು ದೇಶಕ್ಕೆ 25 ನೇ ರಾಂಕ್ ಪಡೆದು ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ಥಳೀಯರಾಗಿದ್ದರೂ ಕೂಡ ವೃತ್ತಿ ಜೀವನದಲ್ಲಿ ತಟಸ್ಥತೆ, ದಕ್ಷತೆ ಕಾಯ್ದುಕೊಂಡವರಾಗಿದ್ದಾರೆ. ಅವರ ಅಧಿಕಾರಾವಧಿಯಲ್ಲಿಯೂ ಧಾರವಾಡ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿ ಸಾಧಿಸಲಿ ಎಂದರು.
ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳ ತೀವ್ರತೆ, ಚುನಾವಣೆ, ಪ್ರವಾಹ ನಿರ್ವಹಣೆ ಸೇರಿದಂತೆ ಅನೇಕ ಸವಾಲುಗಳನ್ನು ಜಿಲ್ಲೆಯಲ್ಲಿ ಸಾಂಘಿಕ ಪ್ರಯತ್ನದೊಂದಿಗೆ ನಿರ್ವಹಿಸಿದ ತೃಪ್ತಿಯಿದೆ. ಧಾರವಾಡ ಜಿಲ್ಲೆಯಲ್ಲಿ ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಇಲ್ಲಿನ ಕರ್ತವ್ಯ ನಿರ್ವಹಣೆಯು ಭವಿಷ್ಯದ ವೃತ್ತಿ ಜೀವನಕ್ಕೆ ಹೊಸ ಭರವಸೆ ತಂದುಕೊಟ್ಟಿದೆ.
ಇದೇ ಸಂದರ್ಭದಲ್ಲಿ ಸ್ವಾಗತ ಸ್ವೀಕರಿಸಿದ ನೂತನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ನಿತೇಶ್ ಪಾಟೀಲ ಅವರು ತಾವೇ ಸ್ವತಃ ಎಲ್ಲಾ ಕಾರ್ಯಗಳಲ್ಲಿ ತೊಡಗಿಸಿಕೊಂಡು,ಇಡೀ ತಂಡದಿಂದ ಕೆಲಸ ಮಾಡುವಲ್ಲಿ ಮಾದರಿ ಕಾರ್ಯನಿರ್ವಹಿಸಿದ್ದಾರೆ. ಆಡಳಿತಕ್ಕೆ ಉತ್ತಮ ಬುನಾದಿ ಹಾಕಿಕೊಟ್ಟಿದ್ದಾರೆ. ಅವರ ಮಟ್ಟಕ್ಕೆ ಕಾರ್ಯನಿರ್ವಹಿಸುವ ಸವಾಲು ತಮ್ಮ ಮುಂದಿದೆ. ಅವರ ಮಾರ್ಗದರ್ಶನದೊಂದಿಗೆ ಜಿಲ್ಲೆಯನ್ನು ಮುನ್ನಡೆಸೋಣ.ಇದೀಗ ಕಷ್ಟದ
ದಿನಗಳು ಕಳೆದಿದ್ದು, ಮುಂಬರುವ ದಿನಗಳಲ್ಲಿ ಅರ್ಥಪೂರ್ಣ ಧಾರವಾಡ ಉತ್ಸವ ಆಚರಿಸೋಣ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಡಾ| ಬಿ.ಗೋಪಾಲಕೃಷ್ಣ, ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂತರಠಾಣಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ಕೃಷಿ ವಿ.ವಿ. ಕುಲಸಚಿವ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಅಶೋಕ ತೇಲಿ, ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಬಿ.ಸಿ.ಕರಿಗೌಡರ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ ಮಾತನಾಡಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಐಶ್ವರ್ಯ ನಿತೇಶ್ ದಂಪತಿಯನ್ನು ಗೌರವಿಸಲಾಯಿತು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.