ಶಿರ್ವ : ಅಕ್ಷಿತಾ ಹೆಗ್ಡೆಯ ಕನ್ನಡಿ ಕೈಬರಹ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೂ ಸೇರ್ಪಡೆ
ಚಿಮಿಣಿ ಬೆಳಕಿನ ಸಾಧಕಿ, ರಾಷ್ಟ್ರೀಯ ಟಿವಿ ಪ್ರಸಾರಕ್ಕೆ ಆಯ್ಕೆ
Team Udayavani, May 14, 2022, 7:06 PM IST
ಶಿರ್ವ: ಚಿಮಿಣಿ ದೀಪದ ಬೆಳಕಿನಲ್ಲಿ ಓದಿ ಮಂಗಳೂರು ವಿ.ವಿಯ ಚಿನ್ನದ ಪದಕ ಪಡೆದು ಸಾಧನೆಗೈದ ಸಾಧಕಿ ಶಿರ್ವದ ಅಕ್ಷಿತಾ ಹೆಗ್ಡೆ ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕನ್ನಡಿ ಕೈ ಬರಹದ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೂ ಸೇರ್ಪಡೆಗೊಂಡಿದ್ದು ,ರಾಷ್ಟ್ರೀಯ ಟಿವಿ ಪ್ರಸಾರಕ್ಕೆ ಆಯ್ಕೆಗೊಂಡಿದೆ.
ಅಕ್ಷಿತಾ ಅವರು ಬರೆದ ಮಂಕುತಿಮ್ಮನ ಕಗ್ಗದ 13 ಚರಣಗಳ ಕನ್ನಡಿ ಬರಹದ ವೀಡಿಯೋ ತುಣುಕುಗಳು ಮೇ. 15 ರಂದು ಬೆಳಿಗ್ಗೆ 11-30ಕ್ಕೆ ಸುದರ್ಶನ ಚಾನಲ್‌ನಲ್ಲಿ ಪ್ರಸಾರಗೊಳ್ಳಲಿದೆ.
ಅಕ್ಷಿತಾ ಹೆಗ್ಡೆ ಉತ್ತಮ ಕನ್ನಡ ಕೈಬರಹವನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಮಾರ್ಚ್ ತಿಂಗಳಲ್ಲಿ ಕಳುಹಿಸಿದ್ದರು. ಅವರಿಂದ ಕನ್ನಡಿ ಬರಹ ಬರೆದು ಕಳುಹಿಸಲು ಬಂದ ಸಲಹೆಯಂತೆ ಕೇವಲ 3-4 ದಿನಗಳಲ್ಲಿ ಕನ್ನಡಿ ಬರಹ ಕಲಿತು ಅದರ ವೀಡಿಯೋ ಮಾಡಿ ಎಪ್ರಿಲ್ ಮೊದಲ ವಾರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಕಳುಹಿಸಿದ್ದು, ಇದೀಗ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನವರು ದಾಖಲೆ ಪುಸ್ತಕಕ್ಕೆ ಸೇರ್ಪಡೆಗೊಳಿಸಿ, ರಾಷ್ಟ್ರೀಯ ಟಿವಿ ಪ್ರಸಾರಕ್ಕೆ ಆಯ್ಕೆ ಮಾಡಿದ್ದಾರೆ.
ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನವರು ಎ. 10 ರಂದು ವೀಡಿಯೋ ದಾಖಲಿಸಿ ಅಕ್ಷಿತಾ ಹೆಗ್ಡೆ ಅವರ ಕನ್ನಡಿ ಬರಹವನ್ನು ದಾಖಲೆ ಪುಸ್ತಕಕ್ಕೆ ಸೇರ್ಪಡೆಗೊಳಿಸಿದ್ದರು.
ಶಿರ್ವದ ಜಯಲಕ್ಷ್ಮಿ ಹೆಗ್ಡೆಯವರ ಪುತ್ರಿಯಾಗಿರುವ ಅಕ್ಷಿತಾ ಹೆಗ್ಡೆ ,ನಿಟ್ಟೆಯ ಜ|ಕೆ.ಎಸ್ ಹೆಗ್ಡೆ ಇಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್‌ನಲ್ಲಿ ಎಂಬಿಎ ಪದವಿ ಪಡೆದು ಅದೇ ಸಂಸ್ಥೆಯಲ್ಲಿ ರಿಸರ್ಚ್ ಅಸಿಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ : ದೆಹಲಿ ಅಗ್ನಿ ದುರಂತ: 29 ಮಂದಿ ನಾಪತ್ತೆ; ಕಟ್ಟಡದ ಅವಶೇಷಗಳಲ್ಲಿ ಶೋಧ ಕಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.