ಚಾಮರಾಜನಗರ : ಆನ್ ಲೈನ್ ವಂಚನೆ ಪ್ರಕರಣವನ್ನು ಭೇದಿಸಿದ ಸೈಬರ್ ಠಾಣಾ ಪೊಲೀಸರು
Team Udayavani, May 14, 2022, 9:02 PM IST
ಚಾಮರಾಜನಗರ: ಆನ್‌ಲೈನ್ ಮೂಲಕ ಸಾಲ ನೀಡುವುದಾಗಿ 1.75 ಲಕ್ಷ ರೂ.ಗಳನ್ನು ವ್ಯಕ್ತಿಯೊಬ್ಬರಿಂದ ಕಟ್ಟಿಸಿಕೊಂಡು ವಂಚನೆ ಮಾಡಿದ ಪ್ರಕರಣವನ್ನು ನಗರದ ಸೈಬರ್ ಠಾಣೆಯ ಪೊಲೀಸರು ಭೇದಿಸಿ 1.75 ಲಕ್ಷ ರೂ.ಗಳನ್ನು ವಾಪಸ್ ಕೊಡಿಸಿರುವ ಪ್ರಕರಣ ವರದಿಯಾಗಿದೆ.
ತಾಲೂಕಿನ ಕುಮಚಹಳ್ಳಿ ಗ್ರಾಮದ ನಾಗಮಲ್ಲಪ್ಪ ಎಂಬವರು ಆನ್‌ಲೈನ್ ಸಾಲದ ಸುಳಿಗೆ ಸಿಲುಕಿ ವಂಚನೆಗೆ ಒಳಗಾಗಿದ್ದರು. ಇವರ ದೂರು ಆಧರಿಸಿ ಪೊಲೀಸರು ಚುರುಕಿನ ತನಿಖೆ ನಡೆಸಿ ದೊಡ್ಡ ಮೊತ್ತದ ಹಣವನ್ನು ವಾಪಸ್ ಕೊಡಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏಪ್ರಿಲ್ 14 ರಂದು ಲೈಟ್ ಸ್ಟ್ರೀಮ್ ಎಂಬ ಕಂಪನಿಯಿಅದ ನಾಗಮಲ್ಲಪ್ಪ ಅವರ ಮೊಬೈಲಿಗೆ ಸಂದೇಶವೊಅದು ಬಂದಿತ್ತು. ಅದರಲ್ಲಿದ್ದ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ, 50 ಪೈಸೆ ಬಡ್ಡಿದರದಲ್ಲಿ 5 ಲಕ್ಷ ರೂ. ಸಾಲ ನೀಡುವುದಾಗಿ ಹಾಗೂ ಜಿಎಸ್ಟಿ ಮತ್ತು ಕಮೀಷನ್ ಹಣ ನೀಡಿದರೆ ಸಾಲ ಮಂಜೂರು ಮಾಡುವುದಾಗಿ ತಿಳಿಸಿದ್ದರು. ಏ.14 ರಿಂದ 17 ರವರೆಗೆ ನಾಗಮಲ್ಲಪ್ಪ ಅವರ ಬ್ಯಾಂಕ್ ಖಾತೆಯಿಂದ ಆರೋಪಿಯ ಬ್ಯಾಂಕ್ ಖಾತೆಗೆ ವಿವಿಧ ಹಂತಗಳಲ್ಲಿ 1.75 ಲಕ್ಷ ರೂ.ಗಳನ್ನು ಕಟ್ಟಿಸಿಕೊಳ್ಳಲಾಗಿತ್ತು. ಆದರೆ ಸಾಲ ಮಂಜೂರು ಮಾಡಿರಲಿಲ್ಲ. ಹಾಗಾಗಿ ನಾಗಮಲ್ಲಪ್ಪ ಸೈಬರ್ ಠಾಣೆಗೆ ಏ.21 ರಂದು ದೂರು ನೀಡಿದ್ದರು ಎಂದು ಎಎಸ್ಪಿ ತಿಳಿಸಿದರು.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಹಣವನ್ನು ವರ್ಗಾವಣೆ ಮಾಡಿದ್ದ ಬ್ಯಾಂಕಿನ ಖಾತೆಯ ಐಎಫ್‌ಎಸ್‌ಸಿ ಕೋಡ್ ಅನ್ನು ಪರಿಶೀಲಿಸಿದಾಗ ಅದು ಉತ್ತರ ಪ್ರದೇಶದ ಲಕ್ನೋದ ಹಜ್ರತ್ ಗಂಜ್ ನ ಖಾಸಗಿ ಬ್ಯಾಂಕ್ ಶಾಖೆಯಾಗಿತ್ತು. ಆ ಶಾಖೆಗೆ ಪೊಲೀಸರು ಇಮೇಲ್ ಮೂಲಕ ಆ ಶಾಖೆಯನ್ನು ಸಂಪರ್ಕಿಸಿ ಸದರಿ ಖಾತೆಯಲ್ಲಿರುವ ಹಣವನ್ನು ಡ್ರಾ ಮಾಡದಂತೆ ಸ್ಥಗಿತಗೊಳಿಸಬೇಕೆಂದು ತಿಳಿಸಿದ್ದರು.
ಇದನ್ನೂ ಓದಿ : ಮಾಹಿತಿ ನೀಡದ ನಗರಸಭೆ ಕಂದಾಯ ಅಧಿಕಾರಿಗೆ 10 ಸಾವಿರ ದಂಡ
ಆ ಬ್ಯಾಂಕ್ ಶಾಖಾ ವ್ಯವಸ್ಥಾಪಕರು ಈ ಅಕೌಂಟ್ ಅನ್ನು ಸ್ಥಗಿತಗೊಳಿಸಿ ಖಾತೆಯಲ್ಲಿ 2.39,242 ರೂ. ಇದೆ ಎಂದು ಉತ್ತರಿಸಿದ್ದರು. ನಂತರ ಪೊಲೀಸರು ನ್ಯಾಯಾಲಯದ ಆದೇಶ ಪಡೆದು ಹಣವನ್ನು ಬಿಡುಗಡೆ ಮಾಡಿಕೊಳ್ಳುವಂತೆ ನಾಗಮಲ್ಲಪ್ಪಗೆ ಸೂಚಿಸಿದ್ದರು. ಬಳಿಕ ನ್ಯಾಯಾಲಯದ ಆದೇಶವನ್ನು ಪೊಲೀಸ್ ಠಾಣೆಗೆ ಹಾಗೂ ಬ್ಯಾಂಕ್ ಶಾಖೆಗೆ ಕಳುಹಿಸಿ 1.75 ಲಕ್ಷ ರೂ.ಗಳನ್ನು ವಾಪಸ್ ಪಡೆಯಲಾಯಿತು ಎಂದು ಎಎಸ್ಪಿ ತಿಳಿಸಿದರು.
ಆನ್ಲೈನ್ ಮೂಲಕ ಸಾಲ ನೀಡುವುದಾಗಿ ಬರುವ ಸಂದೇಶಗಳ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕು. ಕಡಿಮೆ ಬಡ್ಡಿಗೆ ಸಾಲ ದೊರಕುತ್ತದೆಂಬ ಕಾರಣಕ್ಕೆ ಹಣ ಕಳಹಿಸಬಾರದು. ಆನ್ಲೈನ್ ವಂಚನೆ ಬಗ್ಗೆ ಅರಿವಿರದವರು ಹೆಚ್ಚು ಹಣ ತಮ್ಮ ಬ್ಯಾಂಕ್ ಖಾತೆಯಿಂದ ಕಡಿತವಾದರೆ ತಕ್ಷಣ ಸೈಬರ್ ಠಾಣೆಯ 1930ಗೆ ಕರೆ ಮಾಡಿ ದೂರು ನೀಡಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ಪಿಐ ಮಹದೇವಶೆಟ್ಟಿ ಅವರ ನೇತೃತ್ವದಲ್ಲಿ ಎಸ್‌ಐ ಎಂ. ಮಾದೇಶ, ಎಎಸ್‌ಐ ಮಹದೇವಪ್ಪ, ಪೇದೆಗಳಾದ ಶ್ರೀನಿವಾಸಮೂರ್ತಿ, ಶಶಿಧರಮೂರ್ತಿ, ಅಬ್ದುಲ್ ಖಾದರ್ ಪಾಲ್ಗೊಂಡಿದ್ದರು. ಇವರ ಕಾರ್ಯಕ್ಕೆ ಎಸ್ಪಿ ಟಿ.ಪಿ. ಶಿವಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.