ನೋಡಿ, ಇಂಥ ರಸ್ತೆಯಲ್ಲಿ ಹೇಗೆ ಓಡಾಡೋದು!
Team Udayavani, May 15, 2022, 12:42 PM IST
ಶಹಾಬಾದ: ರಸ್ತೆ ಡಾಂಬರೀಕರಣ ಮಾಡಲು ಗುತ್ತಿಗೆ ಪಡೆದ ಗುತ್ತಿಗೆದಾರ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ಹೋಗಿರುವ ಪರಿಣಾಮ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.
ನಗರದ ವಾಡಿ ವೃತ್ತದ ಸಮೀಪದಿಂದ ರೇಲ್ವೆ ಸೇತುವೆ ಬಳಿಯ ಸುಮಾರು 400 ಮೀಟರ್ ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿ ತಿಂಗಳಾಗುತ್ತ ಬಂದಿದೆ. ಇದರಿಂದ ಸಾರ್ವಜನಿಕರು ರಸ್ತೆಯ ಪಕ್ಕದ ಕಚ್ಚಾ ಮಣ್ಣಿನ ರಸ್ತೆಯಲ್ಲಿಯೇ ತೆರಳುವಂತಾಗಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಮುರುಮ್, ಕಂಕರ್ ಹಾಕಿ ಅರ್ಧ ರಸ್ತೆ ಬೆಡ್ ನಿರ್ಮಾಣ ಮಾಡಿ ಬಿಟ್ಟು ಹೋಗಿದ್ದರಿಂದ ಸಮಸ್ಯೆಯಾಗಿದೆ.
ಸಂಚಾರದ ಸಮಯದಲ್ಲಿ ಭಾರಿ ವಾಹನಗಳಿಂದ ಧೂಳು ಆವರಿಸುತ್ತಿದೆ. ಇದರಿಂದ ರಸ್ತೆ ಕಾಣದೇ ಸಾರ್ವಜನಿಕರು ತೊಂದರೆಗೆ ಈಡಾಗುತ್ತಿದ್ದಾರೆ. ಅಲ್ಲದೇ ವಾಹನಗಳ ಚಕ್ರದಿಂದ ಕಂಕರ್ ಸಿಡಿದು ಸಾರ್ವಜನಿಕರು ತೊಂದರೆ ಪಡುವಂತಾಗಿದೆ.
ಇಕ್ಕಟ್ಟಾದ ರಸ್ತೆ ಮೂಲಕ ದಿನಾಲೂ ಸಾಗುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಅಲ್ಲದೇ ಇನ್ನೊಂದು ಕಡೆ ರಸ್ತೆ ಬದಿಯಲ್ಲಿ ಹೆಜ್ಜೆಯಷ್ಟೇ ದಾರಿ ಇದೆ. ಅದರಲ್ಲಿಯೇ ಎರಡು ಕಡೆಯಿಂದ ಬೈಕ್‌ಗಳು ಸಾಗುತ್ತಿವೆ. ಇದರಿಂದ ಅನೇಕ ಚಿಕ್ಕಪುಟ್ಟ ಅಪಘಾತಗಳು ಸಂಭವಿಸಿವೆ. ಕೇವಲ 400ಮೀಟರ್ ರಸ್ತೆ ಕಾಮಗಾರಿಯೂ ಕಳಪೆ ಮಟ್ಟದಿಂದ ಕೂಡಿದೆ. ಗುತ್ತಿಗೆದಾರ ಬೇಸಿಗೆಯಲ್ಲಿಯೇ ಕಾಮಗಾರಿ ಮಾಡದಿದ್ದರೇ ಕೆಲವೆ ದಿನಗಳಲ್ಲಿ ಮಳೆಗಾಲ ಆರಂಭವಾದಾಗ ಅದ್ಹೇಗೆ ಕಾಮ ಗಾರಿ ಮಾಡುತ್ತಾರೆ. ಕಾಮಗಾರಿ ನಡೆಯುವ ಸ್ಥಳದಲ್ಲಿ ಯಾವುದೇ ಸುರಕ್ಷತಾ ಪರಿಕರ, ಸೂಚನಾ ಫಲಕಗಳು ಇಲ್ಲವೇ ಇಲ್ಲ. ಅಲ್ಲದೇ ಕಾಮಗಾರಿ ಯಾವ ಯೋಜನೆಯಡಿ ನಡೆಯುತ್ತಿದೆ. ಎಷ್ಟು ಅನುದಾನ?, ರಸ್ತೆಯ ಉದ್ದವೆಷ್ಟು ಎಂಬುದರ ನಾಮಫಲಕವೇ ಇಲ್ಲ.
ಈ ಹಿಂದೆ ಇಲ್ಲಿನ ರಸ್ತೆಯಲ್ಲಿ ಸಾಕಷ್ಟು ತಗ್ಗುಗಳು ಉಂಟಾಗಿ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಈಗ ಹೊಸ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಅದನ್ನು ಕೂಡ ಅರ್ಧಕ್ಕೆ ನಿಲ್ಲಿಸಿರುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇಲ್ಲಿನ ರಸ್ತೆ ಕಾಮಗಾರಿ ನೋಡಿದಾಗ ಗುತ್ತಿಗೆದಾರನಿಗೆ ರಸ್ತೆ ಮಾಡಿದ ಅನುಭವ ಇಲ್ಲ ಎಂದು ಸಾಬೀತಾಗುತ್ತಿದೆ. ಮೊದಲಿದ್ದ ರಸ್ತೆಯ ಮೂಲಕ ಧೂಳಿಲ್ಲದೇ ಹರಸಾಹಸ ಪಟ್ಟು ಹೋಗುತ್ತಿದ್ದೆವು. ಈಗ ಅದಕ್ಕಿಂತಲೂ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ. ಕೂಡಲೇ ಕಾಮಗಾರಿ ಮುಗಿಸಿ ಅನುಕೂಲ ಮಾಡಿಕೊಡಿ. –ಕಿರಣ ಕೋರೆ,ಕಾಂಗ್ರೆಸ್ ಮುಖಂಡ
ಈಗಾಗಲೇ ರಸ್ತೆ ಕಾಮಗಾರಿಯನ್ನು ಎಸ್‌ಡಿಪಿ ಯೋಜನೆಯಡಿ ತೆಗೆದುಕೊಳ್ಳಲಾಗಿದೆ. ರೋಲರ್ ಮಾಡಿ ಗಟ್ಟಿಗೊಳಿಸಲಾಗಿದೆ. ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸಲು ತಾಕೀತು ಮಾಡಲಾಗಿದೆ. ವಾರದ ಒಳಗಾಗಿ ಕಾಮಗಾರಿ ಪ್ರಾರಂಭಿಸಿ, 15 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. –ಜಗನ್ನಾಥ, ಎಇ, ಲೋಕೋಪಯೋಗಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.