ಉತ್ತಮ ಕೆಲಸದಿಂದ ಜನರ ಪ್ರೀತಿ ಗಳಿಸಿ

ಗ್ರಾಮಲೆಕ್ಕಾಧಿಕಾರಿಗಳ ರಾಜ್ಯಮಟ್ಟದ ಸಮಾವೇಶ

Team Udayavani, May 15, 2022, 1:59 PM IST

samavesha

ದಾವಣಗೆರೆ: ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದ ಜನರು ಪ್ರೀತಿಯಿಂದ ಕಾಣುವ ರೀತಿಯಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್‌. ಅಶೋಕ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ ಶನಿವಾರ ನಗರದ ನೂತನ್‌ ಕಾಲೇಜು ಮೈದಾನದಲ್ಲಿ ಗ್ರಾಮ ಆಡಳಿತ ಅಧಿಕಾರಿ ಬೇಡಿಕೆ ಘೋಷಣೆಗಾಗಿ ಏರ್ಪಡಿಸಿದ್ದ ಗ್ರಾಮಲೆಕ್ಕಾಧಿಕಾರಿಗಳ ರಾಜ್ಯಮಟ್ಟದ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮಲೆಕ್ಕಾಧಿಕಾರಿಗಳ ನಡೆ-ನುಡಿಯೂ ಚೆನ್ನಾಗಿರಬೇಕು. ನಿವೃತ್ತಿಯಾದರೆ ಜನ ಎಂತಹ ಒಳ್ಳೆಯ ವ್ಯಕ್ತಿ ಸೇವೆಯಿಂದ ನಿವೃತ್ತಿಯಾಗುತ್ತಿದ್ದಾರೆಂದು ಕಣ್ಣೀರು ಹಾಕಬೇಕು. ನಿವೃತ್ತಿಯಾದಾಗ ಸನ್ಮಾನಿಸಿ, ತುಂಬು ಹೃದಯದಿಂದ ಅಭಿನಂದಿಸಬೇಕು. ಆ ರೀತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸ ಮಾಡಬೇಕು ಎಂದರು.

ಗ್ರಾಮ ಲೆಕ್ಕಾಧಿಕಾರಿಗಳು ಉತ್ತಮ ಕೆಲಸ ಮಾಡಿ ಕಂದಾಯ ಇಲಾಖೆಗೆ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಸಚಿವನಾಗಿ ನಾನು ಆದೇಶ ಮಾಡುತ್ತೇನೆ. ಅದನ್ನು ನೀವು ಅನುಷ್ಠಾನ ಗೊಳಿಸದಿದ್ದರೆ ಏನೂ ಬದಲಾವಣೆ ಆಗದು. ನೀವು ಉತ್ತಮವಾಗಿ ಕೆಲಸ ಮಾಡಿದರೆ ಮಾತ್ರ ಇಲಾಖೆಗೆ ಒಳ್ಳೆಯ ಹೆಸರು ಬರುತ್ತದೆ ಎಂದರು.

ಕಳೆದ 40 ವರ್ಷಗಳಿಂದ ಆಗದ ವೃಂದ ಮತ್ತು ನೇಮಕಾತಿ ನಿಯಮಕ್ಕೆ ಸಾಕಷ್ಟು ವಿರೋಧದ ನಡುವೆಯೂ ತಿದ್ದುಪಡಿ ತಂದು ಗ್ರಾಮ ಲೆಕ್ಕಾಧಿಕಾರಿಗಳಿಗೆ ಮುಂಬಡ್ತಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಈ ಕೆಲಸ ಹಿಂದೆಯೇ ಆಗಿದ್ದರೆ ಅದೇಷ್ಟೋ ಗ್ರಾಮಲೆಕ್ಕಾಧಿಕಾರಿಗಳು ಬಡ್ತಿ ಲಾಭ ಪಡೆದುಕೊಳ್ಳುತ್ತಿದ್ದರು ಎಂದ ಸಚಿವರು, ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ, 78 ಗಂಟೆಗಳಲ್ಲಿ ಒಂದು ಕರೆ ಮಾಡಿದರೆ ಪಿಂಚಣಿ ಕೊಡುವ ಕಾರ್ಯಕ್ರಮ, ರೈತರೇ ತಮ್ಮ ಜಮೀನಿನ ನಕ್ಷೆ ಹಾಕಿಕೊಳ್ಳಲು ಅನುಕೂಲ ಹೀಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗಿದೆ ಎಂದರು.

ಕೇಂದ್ರ ಮಾದರಿ ವೇತನದ ಬಗ್ಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಒಂದು ಸುತ್ತು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದಾರೆ. ನಾನೂ ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸುತ್ತೇನೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಸರ್ಕಾರದ ಎಲ್ಲ ಯೋಜನೆಗಳು ಗ್ರಾಮಲೆಕ್ಕಾಧಿಕಾರಿಗಳ ಮೂಲಕವೇ ಅನುಷ್ಠಾನವಾಗುತ್ತವೆ. ಹಾಗಾಗಿ ಗ್ರಾಮಲೆಕ್ಕಾಧಿಕಾರಿಗಳು ಇಲ್ಲದಿದ್ದರೆ ಗ್ರಾಮವೇ ಇಲ್ಲ ಎನ್ನುವ ಸ್ಥಿತಿ ಇದೆ. ಗ್ರಾಮಲೆಕ್ಕಾಧಿಕಾರಿಗಳು ಬಡವರ, ರೈತರಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ, ಸೌಲಭ್ಯ ಕಲ್ಪಿಸುವ ಕೆಲಸ ಮಾಡಬೇಕು. ತನ್ಮೂಲಕ ಗ್ರಾಮದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷ ಬಿ. ದೊಡ್ಡಬಸಪ್ಪರೆಡ್ಡಿ ಇನ್ನಿತರ ಪ್ರಮುಖರು ಸಮಾವೇಶದಲ್ಲಿದ್ದರು.

ಕಾದು ಕಾದು ಸುಸ್ತಾದರು

ಗ್ರಾಮಲೆಕ್ಕಿಗರ ಸಮಾವೇಶದ ಉದ್ಘಾಟನೆ ಕಾರ್ಯಕ್ರಮ ಬೆಳಗ್ಗೆ 11ಗಂಟೆಗೆ ನಿಗದಿಯಾಗಿತ್ತು. ಆದರೆ, ಕಾರ್ಯಕ್ರಮ ಶುರುವಾಗಿದ್ದು ಸಂಜೆ 4 ಗಂಟೆಗೆ. ರಾಜ್ಯದ ವಿವಿಧೆಡೆಯಿಂದ ಬಂದ ಗ್ರಾಮಲೆಕ್ಕಾಧಿಕಾರಿಗಳು ಕಾರ್ಯಕ್ರಮ ವಿಳಂಬವಾಗಿದಕ್ಕೆ ಬೇಸರ ವ್ಯಕ್ತಪಡಿಸಿದರು. ನಿರೂಪಕರು “ಕೆಲವೇ ನಿಮಿಷಗಳಲ್ಲಿ ಅತಿಥಿಗಳು ಬರುತ್ತಾರೆ’ ಎಂದಾಗಲೆಲ್ಲ ಸಭಿಕರು ಕೇಕೇ ಹಾಕಿ ಅಸಮಾಧಾನ ವ್ಯಕ್ತಪಡಿಸಿದರು. ಅನೇಕರು ದಾವಣಗೆರೆ ನಗರ ಸುತ್ತಾಡಿ ಶಾಂಪಿಂಗ್‌ ಮಾಡಿದರು. ಆಹ್ವಾನ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವರ ಹೆಸರು ಮುದ್ರಿಸಲಾಗಿತ್ತು. ಆದರೆ, ಕಂದಾಯ ಸಚಿವರು ಮಾತ್ರ ಬಂದಿರುವುದು ಗ್ರಾಮಲೆಕ್ಕಾಧಿಕಾರಿಗಳಿಗೆ ಇನ್ನಷ್ಟು ಬೇಸರ ಮೂಡಿಸಿತು.

ನಿರಾಸೆಗೊಳಗಾದ ಗ್ರಾಮ ಲೆಕ್ಕಿಗರು

ಗ್ರಾಮಲೆಕ್ಕಾಧಿಕಾರಿಗಳನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಘೋಷಿಸುವ ಬೇಡಿಕೆಯನ್ನೇ ಮುಖ್ಯವಾಗಿರಿಸಿಕೊಂಡು ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘದಿಂದ ರಾಜ್ಯಮಟ್ಟದ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಬಹುತೇಕ ಎಲ್ಲರೂ ಕಂದಾಯ ಸಚಿವರು ಇದೇ ವೇದಿಕೆಯಲ್ಲಿ ಗ್ರಾಮಲೆಕ್ಕಾಧಿಕಾರಿಗಳನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಘೋಷಿಸುತ್ತಾರೆ ಎಂದು ಆಶಿಸಿದ್ದರು. ಆದರೆ, ಸಚಿವರು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರಿಂದ ಗ್ರಾಮಲೆಕ್ಕಾಧಿಕಾರಿಗಳು ನಿರಾಸೆಗೊಳಗಾದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.