ಮೋದಿ ಕನಸು ಸಾಕಾರಗೊಳಿಸೋಣ: ಬಾಬುರಾವ್ ಚಿಂಚನಸೂರು
Team Udayavani, May 15, 2022, 5:36 PM IST
ಸೈದಾಪುರ: ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವಗುರು ಆಗುವ ಕನಸು ಕಂಡಿದ್ದಾರೆ ಅದನ್ನು ಸಾಕಾರಗೊಳಿಸುವಲ್ಲಿ ಪ್ರತಿಯೊಬ್ಬ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದರು. ಪಟ್ಟಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ತೊರೆದ ಕಾರ್ಯಕರ್ತರನ್ನು ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡು ಮಾತನಾಡಿದರು.
ಕಳೆದ ಬಾರಿ ಜನರು ನೀಡಿದ ಅಧಿ ಕಾರವನ್ನು ಪ್ರಾಮಾಣಿಕವಾಗಿ ಬಳಸಿಕೊಂಡು ಗುರುಮಠಕಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಪರವಾದ ಕೆಲಸಗಳನ್ನು ಮಾಡಿದ್ದೇನೆ. ಅಲ್ಲದೇ ನನ್ನ ಮತಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ, ಕೈಗಾರಿಕೆ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಆದರೆ ಅಧಿಕಾರಿಗಳ, ಗುತ್ತಿಗೆದಾರರು ಮತ್ತು ಇತರ ಪಕ್ಷದ ಕಾರ್ಯಕರ್ತರ ಮೇಲೆ ದಬ್ಟಾಳಿಕೆ, ದೌರ್ಜನ್ಯ ಮಾಡಿಲ್ಲ. ಮತಕ್ಷೇತ್ರದ ಎಲ್ಲ ಜನಾಂಗವನ್ನು ಸಮನಾಗಿ ಕಾಣುವುದರ ಮೂಲಕ ನಮ್ಮ ಕುಟುಂಬದ ಸದಸ್ಯರಂತೆ ಕಾಣುತ್ತ ಸುಖ ದುಃಖಗಳಲ್ಲಿ ಭಾಗಿಯಾಗಿದ್ದೇನೆ. ಕ್ಷೇತ್ರದ ಜನ ಗುಳೆ ಹೋಗುವುದನ್ನು ತಪ್ಪಿಸಲು ಕಡೇಚೂರು-ಬಾಡಿಯಾಲ ಕೈಗಾರಿಕಾ ಪ್ರದೇಶದಲ್ಲಿ ಪರಿಸರಕ್ಕೆ ಧಕ್ಕೆಯುಂಟು ಮಾಡದ ಕಾರ್ಖಾನೆಗಳನ್ನು ಸ್ಥಾಪಿಸಲು ಸಚಿವರಲ್ಲಿ ಮನವಿ ಮಾಡಿ, ಹೆಚ್ಚಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರದ ಆಹಾರ ನಿಗಮ ಮಂಡಳಿ ನೂತನ ನಿರ್ದೇಶಕಿ ಅಮರೇಶ್ವರಿ ಚಿಂಚನಸೂರು ಮಾತನಾಡಿ, ಪ್ರಧಾನಿ ಮೋದಿ ಅವರ ನಿರಂತರ ಕಾರ್ಯಗಳಿಂದ ಬಿಜೆಪಿ ಜನಮನ್ನಣೆ ಪಡೆಯುತ್ತಿದೆ. ದೇಶದ ಬಹುತೇಕ ಜನ ಬಿಜೆಪಿ ಕಾರ್ಯಕರ್ತ ರಾಗುತ್ತಿದ್ದಾರೆ. ಹೀಗಾಗಿ ವಿಶ್ವದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದೇಶ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಡೆಗೆ ಸಾಗುತ್ತಿದೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುವ ಮೂಲಕ ಮುಂದಿನ ಜಿಪಂ, ತಾಪಂ ಮತ್ತು ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಬದ್ದೇಪಲ್ಲಿ, ರಾಂಪುರು ಕೆ., ಅಜಲಾಪುರ ಮತ್ತು ಸೈದಾಪುರ ಗ್ರಾಮದ 200ಕ್ಕೂ ಹೆಚ್ಚು ಜನ ಬಿಜೆಪಿಗೆ ಸೇರ್ಪಡೆಯಾದರು. ಹಿರಿಯ ಮುಖಂಡ ಬಸವರಾಜಯ್ಯಸ್ವಾಮಿ ಬದ್ದೇಪಲ್ಲಿ, ತಾಪಂ ಮಾಜಿ ಸದಸ್ಯ ಚಂದಪ್ಪ ಕಾವಲಿ, ಸೈದಾಪುರ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶರಣಪ್ಪಗೌಡ ಬಾಲಛೇಡ್, ಸುರೇಶ ಆನಂಪಲ್ಲಿ, ರಮೇಶ ಭೀಮನಹಳ್ಳಿ, ಬಸವರಾಜ ಹಿರೇನೂರು, ಸಿದ್ಧಲಿಂಗರೆಡ್ಡಿ ಭೀಮನಹಳ್ಳಿ, ಚಂದ್ರಶೇಖರ ಕಾವಲಿ, ಗ್ರಾಪಂ ಮಾಜಿ ಸದಸ್ಯ ಮೈಹಿಮೂದು ಬದ್ದೇಪಲ್ಲಿ, ಬಾಲುಗೌಡ ಕಲಾಲ್, ಮರೆಪ್ಪ ಗುಡಿಕಿ, ರಾಮಚಾರಿ ಗ್ರಾಪಂ ಸದಸ್ಯ, ಬಾಲಕೃಷ್ಣ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.