ಮಠಗಳು ಸಂಸ್ಕಾರ ಕಲಿಸುವ ಶ್ರದ್ಧಾ ಕೇಂದ್ರ


Team Udayavani, May 15, 2022, 6:05 PM IST

20culture

ಸುರಪುರ: ಪ್ರತಿಯೊಬ್ಬ ವ್ಯಕ್ತಿಯ ಬೆಳವಣಿಗೆಯಲ್ಲಿ ಸಂಸ್ಕಾರ ಮತ್ತು ಶಿಕ್ಷಣ ಪ್ರಮುಖವಾಗಿವೆ. ಸಂಸ್ಕಾರವಿಲ್ಲದ ಶಿಕ್ಷಣ ನಿರರ್ಥಕ. ಮಠ-ಮಾನ್ಯಗಳು ಧಾರ್ಮಿಕ ಸೇವೆಯೊಂದಿಗೆ ಸಂಸ್ಕಾರವನ್ನು ಕಲಿಸುತ್ತವೆ. ಹೀಗಾಗಿ ಮಠಮಾನ್ಯಗಳು ಸಂಸ್ಕಾರ ನೀಡುವ ಶ್ರದ್ಧಾ ಕೇಂದ್ರಗಳು ಎಂದು ಕರ್ನಾಟಕ ಸಿಐಡಿ ವಿಭಾಗದ ಐಪಿಎಸ್‌ ಅಧಿಕಾರಿ ಡಿ. ರವಿ ಚನ್ನಣ್ಣನವರ ಅಭಿಪ್ರಾಯಪಟ್ಟರು.

ತಾಲೂಕಿನ ದೇವಾಪುರ ಗ್ರಾಮದ ಜಡಿಶಾಂತಲಿಂಗೇಶ್ವರ ಸಂಸ್ಥಾನ ಹಿರೇಮಠದ ವತಿಯಿಂದ ಕಾಯಕ ಶ್ರೀ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ದೇಶದ ಬಹುತೇಕ ಸಾಧಕರ ಹಿಂದೆ ಮಠಗಳ ಸಂಸ್ಕಾರವಿದೆ. ಮಠ-ಮಾನ್ಯಗಳು ಸಂಸ್ಕಾರ ನೀಡಿ ಆದರ್ಶ ವ್ಯಕ್ತಿಯನ್ನಾಗಿ ರೂಪಿಸುತ್ತಿವೆ. ಇದಕ್ಕೆ ನಾನು ಸೇರಿದಂತೆ ಅನೇಕರ ಉದಾಹರಣೆ ಇದೆ. ಹೀಗಾಗಿ ನಮ್ಮ ಸನಾತನ ಪರಂಪರೆಯಲ್ಲಿ ಮಠಗಳಿಗೆ ಹೆಚ್ಚಿನ ಆದ್ಯತೆ ಇದೆ ಎಂದರು.

ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಮೂಢನಂಬಿಕೆ ಮತ್ತು ಅಜ್ಞಾನದಿಂದ ಹೊರ ಬರಬೇಕು. ಬಡತನದ ಜಿಗುಪ್ಸೆ ಸರಿಯಲ್ಲ. ಈ ಮಾನಸಿಕ ಅಸ್ಥವಸ್ಥೆತೆಯಿಂದ ಹೊರ ಬರಬೇಕು. ಸಾಧಿಸಲು ಸಾಕಷ್ಟು ಅವಕಾಶಗಳಿವೆ. ದೃಢ ಸಂಕಲ್ಪ, ಅವಿರತ ಪ್ರಯತ್ನ, ಸಾಧಿಸುವ ಛಲ, ಕಠಿಣ ಪರಿಶ್ರಮಪಟ್ಟರೆ ಯಾವುದು ಅಸಾಧ್ಯವಲ್ಲ ಎಂದು ತಿಳಿಸಿದರು.

ಡಾ| ಬಾಬಾ ಸಾಹೇಬರು ಸಲಹೆಯಂತೆ ಮೊದಲು ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ಬದುಕು ಬದಲಾಗುತ್ತದೆ. ಕುಟುಂಬಗಳ ಆರ್ಥಿಕ ಸ್ಥಿತಿಗತಿ ಬದಲಾಗುತ್ತದೆ. ಅಷ್ಟೇ ಅಲ್ಲ ಎಲ್ಲವನ್ನು ಪಡೆದುಕೊಳ್ಳಲು ಸಾಧ್ಯ. ಇದಕ್ಕೆ ನಾನೇ ಉದಾಹರಣೆ. ದೇಶ ಭಾಷೆ, ರಾಷ್ಟ್ರೀಯತೆಯೊಂದಿಗೆ ಪ್ರಜಾಪ್ರಭುತ್ವ ಮತ್ತು ದೇಶದ ಅಖಂಡತೆ ಐಕ್ಯತೆ ಗಟ್ಟಿಗೊಳಿಸಲು ಪ್ರತಿಯೊಬ್ಬರು ಪಣತೊಡಬೇಕು. ಅಂದಾಗಲೇ ದೇಶವನ್ನು ವಿಶ್ವಗುರುಸ್ಥಾನಕ್ಕೆ ಕೊಂಡೊಯಲು ಸಾಧ್ಯ ಎಂದು ಸಲಹೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಹುಟ್ಟು ಧರಿದ್ರವಾಗಿದ್ದರು ಸಾವು ಚರಿತ್ರೆಯಾಗಬೇಕು. ಈ ದಿಶೆಯಲ್ಲಿ ಎಸ್ಪಿ ಚನ್ನವಣ್ಣನವರು ತಮಗಾಗಿ ಬದುಕದೇ ಸಮಾಜಕ್ಕಾಗಿ ಬದುಕುತ್ತಿದ್ದಾರೆ. ಸರಕಾರಿ ಸೇವೆಯೊಂದಿಗೆ ನೂರಾರು ಐಪಿಎಸ್‌, ಐಎಎಸ್‌ ತರಬೇತಿ ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರ ಸೇವೆ ಯುವಕರಿಗೆ ಮಾದರಿಯಾಗಿದೆ ಎಂದು ಪ್ರಶಂಸಿದರು. ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.

ದಲಿತ, ಹಿಂದುಳಿದ ಹಾಗೂ ಶ್ರಮಿಕರು ಆಳುವವರಾಗಬೇಕು ಅಧಿಕಾರ ಹಿಡಿಬೇಕು. ಈ ವರ್ಗದ ಪ್ರತಿಭಾವಂತರು ಉನ್ನತ ಶಿಕ್ಷಣ ಪಡೆದು ದೇಶದ ದೊಡ್ಡ ದೊಡ್ಡ ಹುದ್ದೆಗಳನ್ನು ಪಡೆಯಬೇಕು. ಅಂದಾಗಲೇ ಬಡತನ ನಿರ್ಮೂಲನೆ ಆಗುತ್ತದೆ. ದೇಶ ಆರ್ಥಿಕವಾಗಿ ಸದೃಢವಾಗುತ್ತದೆ. –ರವಿ ಚನ್ನಣ್ಣವರ್‌, ಎಸ್‌ಪಿ ಸಿಐಡಿ ವಿಭಾಗ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.