ಈ ವರ್ಷವಾದರೂ ಸುಸೂತ್ರವಾಗಿ ನಡೆಯಲಿ ಶಾಲೆಗಳು


Team Udayavani, May 16, 2022, 6:00 AM IST

ಈ ವರ್ಷವಾದರೂ ಸುಸೂತ್ರವಾಗಿ ನಡೆಯಲಿ ಶಾಲೆಗಳು

ಕಳೆದ ಎರಡು ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ಜಗತ್ತಿನ ಎಲ್ಲೆಡೆ ಯಾವುದೇ ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದಿಲ್ಲ. ಇದಕ್ಕೆ ಶಾಲಾ-ಕಾಲೇಜುಗಳೂ ಹೊರತಲ್ಲ. ಆರಂಭದಿಂದಲೂ ಎಲ್ಲಿ ಮಕ್ಕಳ ಮೇಲೆ ಕೊರೊನಾ ದಾಳಿ ಮಾಡಿಬಿಡುತ್ತದೆಯೋ ಎಂಬ ಕಾರಣಕ್ಕಾಗಿ ಶಾಲೆಗಳನ್ನು ಮುಚ್ಚಿ ಮಕ್ಕಳಿಗೆ ಆನ್‌ಲೈನ್‌ ಪಾಠವನ್ನೇ ಮಾಡಲಾಗುತ್ತಿತ್ತು. ಇದರ ನಡುವೆ ಕೊರೊನಾ ಕಡಿಮೆಯಾದ ವೇಳೆಯಲ್ಲಿ ಸ್ವಲ್ಪ ದಿನಗಳ ಮಟ್ಟಿಗೆ ಶಾಲೆಗಳನ್ನು ಆರಂಭಿಸಿ ಪಾಠ ಮಾಡಿದ್ದೂ ಇದೆ. ಆದರೆ ಈ ವರ್ಷ ಮಾತ್ರ ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೇ ಶಾಲೆಗಳು ಆರಂಭವಾಗುತ್ತಿವೆ.

ಒಂದು ಲೆಕ್ಕಾಚಾರದಲ್ಲಿ ನೋಡಿದರೆ, ಮಕ್ಕಳಿಗೆ ಶೈಕ್ಷಣಿಕ ವರ್ಷಾರಂಭಕ್ಕೇ ಶಾಲೆ ಆರಂಭವಾಗುತ್ತಿರುವುದು ಖುಷಿಯ ವಿಚಾರವೇ. ಈ ಹಿಂದಿನ ಎರಡು ವರ್ಷ ಮಕ್ಕಳು ಕಲಿತದ್ದೇನು ಎಂಬುದನ್ನು ಹಿಂದಿರುಗಿ ನೋಡಿದರೆ ಕಾಣಿಸುವುದು ಸೊನ್ನೆಯೇ. ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದಿದ್ದಾರೆಯೇ ಎಂಬುದನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆನ್‌ಲೈನ್‌ ಜಗತ್ತಿನಲ್ಲಿ ಶಿಕ್ಷಕರು ಪಠ್ಯಕ್ರಮ ಮುಗಿಸಿದ್ದೇ ಬಂತು. ಆದರೆ ಮಕ್ಕಳು ಎಷ್ಟು ಕಲಿತವು ಎಂಬುದು ಮಾತ್ರ ಇನ್ನೂ ಪ್ರಶ್ನಾರ್ಥಕವಾಗಿಯೇ ಉಳಿದಿದೆ.

ಹೀಗಾಗಿಯೇ ರಾಜ್ಯ ಸರಕಾರ ಸೋಮವಾರ ಶಾಲೆ ಆರಂಭಿಸಿದರೂ ಮೊದಲಿಗೆ ಕಲಿಕಾ ಚೇತರಿಕೆ ಹೆಸರಿನಲ್ಲಿ ಅವರನ್ನು ಶಾಲೆಯ ವಾತಾವರಣಕ್ಕೆ ಹೊಂದಿಸುವ ಕೆಲಸ ಮಾಡುತ್ತಿದೆ. ಇಂದಿನ ಕಾಲಘಟ್ಟದಲ್ಲಿ ಇದು ಅಗತ್ಯವೂ ಹೌದು. ಶಾಲೆಗೆ ಹೋದ ಮಕ್ಕಳಿಗೆ ನೇರವಾಗಿ ಪಾಠ ಮಾಡಲು ಹೊರಟರೆ, ಅವು ಗ್ರಹಿಸಲು ಸಾಧ್ಯವಿಲ್ಲದೇ ಹೋಗಬಹುದು. ಇದಕ್ಕೆ ಕಾರಣ, ಕಲಿಕೆಯಲ್ಲಿನ ಅಂತರ. ಏಕೆಂದರೆ ಸ್ಮಾರ್ಟ್‌ಫೋನ್‌ ಮತ್ತು ಉತ್ತಮ ಇಂಟರ್ನೆಟ್‌ ಸಿಕ್ಕ ಕಡೆಗಳ ಮಕ್ಕಳು ಒಂದಷ್ಟು ಚೆನ್ನಾಗಿ ಕಲಿತಿರಬಹುದು. ಆದರೆ ಈ ಸೌಲಭ್ಯಗಳಿಲ್ಲದ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ತಲೆಗೆ ಪಾಠ ಹೋಗಿರಲಿಕ್ಕೂ ಇಲ್ಲ. ಹೀಗಾಗಿ ಈ ಅಂತರ ತುಂಬಲು ಈಗ ನಡೆಸಲು ಉದ್ದೇಶಿಸಿರುವ ಕಲಿಕಾ ಚೇತರಿಕೆ ಉತ್ತಮ ಮಾರ್ಗ. ಈ ನಡುವೆಯೇ ಕೊರೊನಾ ಪೂರ್ವದ ದಿನದಂತೆ ಮಕ್ಕಳು ಶಾಲೆಗೆ ಬರುತ್ತಿದ್ದು, ಅವರಿಗೆ ಶಿಕ್ಷಕರು ಒಂದು ಆತ್ಮೀಯ ಸ್ವಾಗತವನ್ನೂ ನೀಡಬೇಕಿದೆ. ಇದು ಒಂದು ರೀತಿಯ ಹಬ್ಬದಂತೆ ನಡೆದರೆ ತಪ್ಪೇನಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಈಗಾಗಲೇ ಸಿದ್ಧತೆಯನ್ನೂ ನಡೆಸಿದೆ. ಏಕೆಂದರೆ ಕೊರೊನಾದಿಂದಾಗಿ ಮನೆಗೇ ಹೊಂದಿಕೊಂಡಿರುವ ಮಕ್ಕಳನ್ನು ಶಾಲೆಯ ವಾತಾವರಣಕ್ಕೆ ಹೊಂದಿಕೊಳ್ಳುವಂತೆ ಮಾಡುವುದು ಕಷ್ಟಕರ. ಆದರೆ ಶಾಲೆಯೂ ಮನೆಯ ವಾತಾವರಣದಂತೆಯೇ ಇದ್ದರೆ ಆ ಮಕ್ಕಳು ಬೇಗನೆ ಹೊಂದಿಕೊಳ್ಳಬಹುದು.

ಸಂಕಟ, ನೋವಿನ ಮಧ್ಯೆಯೇ ಕೊರೊನಾದ ಎರಡು ವರ್ಷಗಳು ಕಳೆದು ಹೋಗಿವೆ. ಮಕ್ಕಳಲ್ಲಿ ಪಾಠ ಕೇಳುವ ಸಾಮರ್ಥ್ಯವೂ ಕಡಿಮೆ ಯಾಗಿದೆ. ಎಲ್ಲೋ ಒಂದು ಕಡೆಯಲ್ಲಿ ಮನೆಯಲ್ಲಿ ಕುಳಿತದ್ದರಿಂದ ಮಕ್ಕಳಲ್ಲಿನ ಏಕಾಗ್ರತೆ ಕಡಿಮೆಯಾಗಿರಬಹುದು. ಈ ಎಲ್ಲ ಮಕ್ಕಳ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಶಿಕ್ಷಕರ ಜವಾಬ್ದಾರಿ. ಅಷ್ಟೇ ಅಲ್ಲ, ತರಗತಿಗಳನ್ನೂ ಮಕ್ಕಳ ಮಗದೊಂದು ಮನೆಯಂತೆಯೇ ಮಾಡಿ, ಅವರನ್ನು ಹೊಂದಿಕೊಳ್ಳುವಂತೆ ಮಾಡಬೇಕಾದದ್ದು ಅವರ ಕರ್ತವ್ಯವೇ ಆಗಿದೆ. ಇದರ ನಡುವೆಯೇ ಮತ್ತೆ ಕೊರೊನಾ ವಕ್ಕರಿಸಿ, ಮಕ್ಕಳ ಶಾಲೆಗೆ ಅಡ್ಡಿಯಾಗದಿರಲೆಂದು ಆಶಿಸೋಣ.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.